Wednesday 14th, May 2025
canara news

ಸಿಂಹ ಸಂಕ್ರಮಣ: ಧರ್ಮಸ್ಥಳದಲ್ಲಿ ತೈಲದಾನ, ಪಡಿಯಕ್ಕಿ ವಿತರಣೆ

Published On : 18 Aug 2018   |  Reported By : Rons Bantwal


ಉಜಿರೆ: ಬೆಂಗಳೂರಿನ ರಾಜಾಜಿನಗರದಲ್ಲಿ ರಾಜ್‍ಕುಮಾರ್ ಎಂಬ ವ್ಯಕ್ತಿ ಎಸ್.ಡಿ.ಎಂ.ಎ. ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ ಎಂಬ ಸಂಸ್ಥೆಯ ಹೆಸರಿನಲ್ಲಿ ಹಣದ ಲೇವಾದೇವಿ ನಡೆಸುತ್ತಿದ್ದು, ಈ ಸಂಸ್ಥೆಗೂ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೂ ಯಾವುದೇ ರೀತಿಯ ಸಂಬಂಧ ಇರುವುದಿಲ್ಲ ಎಂದು ಧರ್ಮಸ್ಥಳ ದೇವಸ್ಥಾನದ ಮ್ಯಾನೇಜರ್ ಸ್ಪಷ್ಟೀಕರಣ ನೀಡಿದ್ದಾರೆ. ಈ ಸಂಸ್ಥೆಯೊಂದಿಗೆ ಸಾರ್ವಜನಿಕರು ನಡೆಸುವ ಯಾವುದೇ ವ್ಯವಹಾರಕ್ಕೆ ಧರ್ಮಸ್ಥಳ ಅಥವಾ ಇಲ್ಲಿನ ಅಧಿಕಾರಿಗಳು ಜವಾಬ್ದಾರರಲ್ಲ ಎಂದು ಈ ಮೂಲಕ ತಿಳಿಸಲಾಗಿದೆ. (ಆಲ್ ಎಡಿಶನ್)


ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಅಭಿಯಾನ: ರಾಜ್ಯದೆಲ್ಲೆಡೆ 10,281 ಶ್ರದ್ಧಾಕೇಂದ್ರಗಳ ಸ್ವಚ್ಛತಾ ಅಭಿಯಾನ ಯಶಸ್ವಿ

ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನೇತೃತ್ವದಲ್ಲಿ 72ನೇ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಮಂದಿರ, ಬಸದಿ, ಚರ್ಚ್ ಹಾಗೂ ಮಸೀದಿ ಸೇರಿದಂತೆ ರಾಜ್ಯದೆಲ್ಲೆಡೆ 10281ಕ್ಕೂ ಮಿಕ್ಕಿ ಶ್ರದ್ಧಾಕೇಂದ್ರಗಳ ಸ್ವಚ್ಛತಾ ಅಭಿಯಾನ ಯಶಸ್ವಿಯಾಗಿದೆ ಎಂದು ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಲ್. ಎಚ್. ಮಂಜುನಾಥ್ ತಿಳಿಸಿದ್ದಾರೆ.
ಧರ್ಮಸ್ಥಳದಲ್ಲಿ ಶುಕ್ರವಾರ ಅವರು ಮಾಧ್ಯಮದವರಿಗೆ ಮಾಹಿತಿ ನೀಡಿದರು.
ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಶ್ರೀಮತಿ ಹೇಮಾವತಿ ವಿ. ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಸ್ವಚ್ಛತಾ ಅಭಿಯಾನದಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಆಡಳಿತ ಮಂಡಳಿ ಸದಸ್ಯರು, ಒಕ್ಕೂಟದ ಪದಾಧಿಕಾರಿಗಳು, ಜನಜಾಗೃತಿ ವೇದಿಕೆಯ ಸದಸ್ಯರು, ನವಜೀವನ ಸಮಿತಿ ಸದಸ್ಯರು, ಸ್ಥಳೀಯ ಜನಪ್ರತಿನಿಧಿಗಳು ಸಕ್ರಿಯ ಸಹಕಾರ ನೀಡಿದ್ದಾರೆ.
ಮುಖ್ಯಾಂಶಗಳು:

• ಕಾಸರಗೋಡು ಜಿಲ್ಲೆ ಸೇರಿದಂತೆ ರಾಜ್ಯದ 31 ಜಿಲ್ಲೆಗಳ 173 ತಾಲ್ಲೂಕುಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸಲಾಗಿದೆ.
 ಭಾಗವಹಿಸಿದ ಸ್ವಯಂ ಸೇವಕರ ಸಂಖ್ಯೆ: 3,06,674
 ಅತಿ ಹೆಚ್ಚು ಶ್ರದ್ಧಾಕೇಂದ್ರಗಳ ಸ್ವಚ್ಛತಾ ಕಾರ್ಯ ಕೈಗೊಂಡ ಜಿಲ್ಲೆ: ಬೆಳಗಾವಿ:545
 ಅತಿ ಹೆಚ್ಚು ಸ್ವಯಂ ಸೇವಕರು ಭಾಗಿಯಾದ ಜಿಲ್ಲೆ: ಧಾರವಾಡ (23677)
• ಶ್ರದ್ಧಾಕೇಂದ್ರಗಳು: ಮಂದಿರಗಳು/ ಬಸದಿಗಳು: 9654
ಚರ್ಚ್‍ಗಳು: 104
ಮಸೀದಿಗಳು: 96
ಇತರ: 427
ಒಟ್ಟು: 10,281

• 273 ಶುದ್ಧಗಂಗಾ ಘಟಕಗಳಲ್ಲಿ ಸ್ವಚ್ಛತಾ ಕಾರ್ಯ ನಡೆಸಲಾಗಿದೆ.

 

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here