Wednesday 14th, May 2025
canara news

ಕುಂದಾಪುರ ಕಥೊಲಿಕ್ ಸಭಾ ವತಿಯಿಂದ ಶಿಕ್ಷಣ ಕ್ಷೇತ್ರದಲ್ಲಿ ಪ್ರತಿಭಾವಂತ ವಿಧ್ಯಾರ್ಥಿಗಳಿಗೆ ಪುರಸ್ಕಾರ

Published On : 19 Aug 2018   |  Reported By : Bernard Dcosta


ಕುಂದಾಪುರ,ಆ19: ಕುಂದಾಪುರ ಕಥೊಲಿಕ್ ಸಭಾ ವತಿಯಿಂದ ಶಿಕ್ಷಣ ಕ್ಷೇತ್ರದಲ್ಲಿ ಪ್ರತಿಭಾವಂತ ವಿಧ್ಯಾರ್ಥಿಗಳಿಗೆ ಸನ್ಮಾನಿಸುವ ಕಾರ್ಯಕ್ರಮ ನೆಡೆಯಿತು. ಶಿಕ್ಷಣ ಕ್ಷೇತ್ರದಲ್ಲಿ ಎಸ್.ಎಸ್.ಎಲ್.ಸಿ, ಪಿ.ಯು.ಸಿ. ಪದವಿ, ವ್ರತ್ತಿಪರ ಪದವಿಸ್ನಾನಕೋತ್ತರ ಪದವಿಗಳಲ್ಲಿ ಉತ್ತಮ ಸಾಧನೆ ಗೈದ ಕುಂದಾಪುರ ಚರ್ಚಿನ ಪ್ರತಿಭಾವಂತ ವಿಧ್ಯಾರ್ಥಿಗಳನ್ನು ಸನ್ಮಾನಿಸುವ ಕಾರ್ಯಕ್ರಮ ನೆಡೆಯಿತು.

ಚರ್ಚಿನ ಪ್ರಧಾನ ಧರ್ಮಗುರು ವಂ|ಸ್ಟ್ಯಾನಿ ತಾವ್ರೊ ಅಧ್ಯಕ್ಷತೆ ವಹಿಸಿ ಸ್ನಾನಕೋತ್ತರ ಪದವಿಗಳಲ್ಲಿ ಸಾಧನೆ ಮಾಡಿದವರಿಗೆ ಸನ್ಮಾನಿಸಿ ಪುರಸ್ಕರಿಸಿ ಶುಭ ಹಾರೈಸಿದರು. ಧರ್ಮಗುರು ಪ್ರಾಂಶುಪಾಲ ವಂ|ಫಾ|ಪ್ರವೀಣ್ ಮಾರ್ಟಿಸ್ ಮತ್ತು ಫಾ|ರೋಯ್ ಲೋಬೊ ಕಥೊಲಿಕ್ ಸಭಾ ಎರ್ಪಡಿಸಿದ ಭಾಷಣ ಮತ್ತು ಕಥಾ ಸ್ಪರ್ಧೆಯ ವಿಜೇತರಿಗೆ ಬಹುಮಾನಗಳನ್ನು ನೀಡಿದರು. ಪಾಲನ ಮಂಡಳಿ ಉಪಾಧ್ಯಕ್ಷ ಜೇಕಬ್ ಡಿಸೋಜಾ, ಕಾರ್ಯದರ್ಶಿ ಫೆಲ್ಸಿಯಾನ್ ಡಿಸೋಜಾ ಕಥೊಲಿಕ್ ಸಭಾದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಘಟಕದ ಅಧ್ಯಕ್ಷೆ ಶೈಲಾ ಡಿಆಲ್ಮೇಡಾ ಸ್ವಾಗತ ಕೋರಿದರು. ಕಾರ್ಯದರ್ಶಿ ಜೂಲಿಯೆಟ್ ಪಾಯ್ಸ್ ವಂದಿಸಿದರು. ಕಾರ್ಯಕ್ರಮವನ್ನು ವಿಲ್ಸನ್ ಒಲಿವೇರಾ ನಿರೂಪಿಸಿದರು.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here