Friday 26th, April 2024
canara news

ವಂ. ಡಾ. ಆ್ಯಂಟನಿ ಪ್ರಕಾಶ್ ಮೊಂತೆರೊ ಇವರಿಗೆ ಶ್ರೇಷ್ಠ ಭೌತ ವಿಜ್ಞಾನ ಸಂಶೋಧಕ ಪುರಸ್ಕಾರ

Published On : 26 Aug 2018   |  Reported By : Prof, Dinakara Rao


ಪುತ್ತೂರು: ಇಲ್ಲಿಯ ಸಂತ ಫಿಲೋಮಿನಾ ಕಾಲೇಜಿನ ಭೌತಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಮುಖ್ಯಸ್ಥರಾದ ವಂ. ಡಾ. ಆ್ಯಂಟನಿ ಪ್ರಕಾಶ್ ಮೊಂತೆರೊ ಇವರಿಗೆ ವಿಷನ್ ಗ್ರೂಫ್ 2017-18 ರ ಸಾಲಿನ ಶ್ರೇಷ್ಠ ಸಂಶೋಧಕ ಪುರಸ್ಕಾರವನ್ನು ಭೌತಶಾಸ್ತ್ರ ವಿಭಾಗದಲ್ಲಿ ಘೋಷಿಸಿದೆ. ಅಂತರ್ ರಾಷ್ಟ್ರೀಯ ಮಟ್ಟದಲ್ಲಿ ಅತ್ಯುನ್ನತ ಮತ್ತು ಪ್ರತಿಷ್ಠಿತ ಸಂಶೋಧನಾ ಪತ್ರಿಕೆಗಳಲ್ಲಿ ಸಂಶೋಧನಾ ಲೇಖನಗಳನ್ನು ಪ್ರಕಟಿಸಿದ ಎಳೆಯ ಸಂಶೋಧಕರನ್ನು ಗುರುತಿಸಿ, ಪ್ರೋತ್ಸಾಹಿಸುವ ಈ ಮನ್ನಣೆಗೆ ಇವರು ಪಾತ್ರರಾಗಿದ್ದಾರೆ.

 

ಮೂಲಭೂತ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರಗಳಲ್ಲಿ ಸಂಶೋಧನೆಗೆ ಪ್ರೋತ್ಸಾಹ ಮತ್ತು ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ವೈಜ್ಞಾನಿಕ ಸಂಶೋಧನೆಗೆ ಅಗತ್ಯವಿರುವ ಸವಲತ್ತುಗಳ ಅಭಿವೃದ್ಧಿ ಪಡಿಸುವ ಉದ್ದೇಶದಿಂದ ಕರ್ನಾಟಕ ಸರಕಾರವು 2008 ರಲ್ಲಿ ವಿಜ್ಞಾನ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಯ ಅಧೀನಕ್ಕೊಳಪಡುವ ವಿಷನ್ ಗ್ರೂಫ್ ಎಂಬ ಸಂಸ್ಥೆಯನ್ನು ಆರಂಭಿಸಿತು.

ಭಾರತ ರತ್ನ ಪ್ರೊ. ಸಿ ಎನ್ ರಾವ್ ಅಧ್ಯಕ್ಷರಾಗಿರುವ ವಿಷನ್ ಗ್ರೂಫ್ ಪ್ರತಿ ವರ್ಷ ವಿಜ್ಞಾನದ ಬೇರೆ ಬೇರೆ ಕ್ಷೇತ್ರಗಳಲ್ಲಿ ಉನ್ನತ ಸಂಶೋಧನೆಯನ್ನು ಮಾಡಿದ ಸಂಶೋಧಕರನ್ನು ಗುರುತಿಸಿ, ಪ್ರಶಸ್ತಿಯನ್ನು ನೀಡಿ ಗೌರವಿಸುತ್ತದೆ ಮತ್ತು ಅನುದಾನವನ್ನು ನೀಡುತ್ತದೆ. ಕಣ ಭೌತ ವಿಜ್ಞಾನ ಕ್ಷೇತ್ರದಲ್ಲಿ ಸೈದ್ಧಾಂತಿಕ ಭೌತ ವಿಜ್ಞಾನಿಯಾಗಿರುವ ವಂ. ಡಾ. ಆ್ಯಂಟನಿ ಪ್ರಕಾಶ್ ಮೊಂತೆರೊ ಮಂಗಳೂರು ವಿವಿಯಲ್ಲಿ ಪ್ರಾಧ್ಯಾಪಕ ಹಾಗೂ ಸಂಶೋಧನಾ ಮಾರ್ಗದರ್ಶಕರಾಗಿರುವ ಪ್ರೊ. ಕೆ ಬಿ ವಿಜಯ ಕುಮಾರ್ ಮತ್ತು ಕಾಲೇಜಿನ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಸಂಶೋಧನಾ ವಿದ್ಯಾರ್ಥಿಯಾಗಿದ್ದ ಮತ್ತು ಪ್ರಸ್ತುತ ಪೋಲೆಂಡಿನ ಅಡಮ್ ಮಿಕೆವಿಕ್ಸ್ ವಿಶ್ವವಿದ್ಯಾನಿಲಯದಲ್ಲಿರುವ ಮಂಜುನಾಥ ಭಟ್ ಅವರ ಸಹಯೋಗದಲ್ಲಿ ಹಲವು ಸಂಶೋಧನಾ ಲೇಖನಗಳನ್ನು ರಾಷ್ಟ್ರೀಯ ಮತ್ತು ಅಂತರ್ ರಾಷ್ಟ್ರೀಯ ಪತ್ರಿಕೆಗಳಲ್ಲಿ ಪ್ರಕಟಿಸಿದ್ದಾರೆ. ಸೈದ್ಧಾಂತಿಕ ಭೌತ ವಿಜ್ಞಾನ ಕ್ಷೇತ್ರದಲ್ಲಿಅತ್ಯಂತ ಪ್ರತಿಷ್ಠಿತ ಸಂಶೋಧನಾ ಪತ್ರಿಕೆ ಎಂದು ಪರಿಗಣಿಸಲ್ಪಟ್ಟಿರುವ ‘ಫಿಸಿಕಲ್ ರಿವ್ಯೂ ಡಿ’ ಇದರಲ್ಲಿ ಇವರ ಸಂಶೋಧನಾ ಲೇಖನಗಳು ಪ್ರಕಟವಾಗಿವೆ. ಇವರ ವೈಜ್ಞಾನಿಕ ಕೊಡುಗೆಗಳನ್ನು ವಿಷನ್ ಗ್ರೂಫ್ ಪುರಸ್ಕರಿಸಿದೆ.

 




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here