Monday 7th, July 2025
canara news

ಬಿಲ್ಲವರ ಭವನಕ್ಕೆ ಗುರುಪುರ ವಜ್ರದೇಹಿ ಶ್ರೀ ಭೇಟಿ

Published On : 16 Oct 2018   |  Reported By : Rons Bantwal


(ಚಿತ್ರ / ವರದಿ: ರೋನ್ಸ್ ಬಂಟ್ವಾಳ್)

ಮುಂಬಯಿ, ಅ.16: ಮುಂಬಯಿ ಮಹಾನಗರಕ್ಕಾಗಮಿಸಿರುವ ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಅವರು ಇಂದಿಲ್ಲಿ ರವಿವಾರ ಸಂಜೆ ಗಂಟೆಗೆ ಸಾಂತಾಕ್ರೂಜ್ ಪೂರ್ವದಲ್ಲಿನ ಬಿಲ್ಲವರ ಭವನದ ಶ್ರೀ ನಾರಾಯಣಗುರು ಮಂದಿರಕ್ಕೆ ಭೇಟಿ ನೀಡಿದ್ದು, ಬಿಲ್ಲವರ ಅಸೋಸಿಯೇಶನ್ ಮುಂಬಯಿ ಅಧ್ಯಕ್ಷ ಚಂದ್ರಶೇಖರ ಎಸ್.ಪೂಜಾರಿ ಅವರು ತುಳಸೀ ಹಾರವನ್ನಿತ್ತು ಶ್ರೀಗಳಿಗೆ ಭಕ್ತಿಪೂರ್ವಕವಾಗಿ ಬರಮಾಡಿ ಕೊಂಡರು.

ಈ ಸಂದರ್ಭದಲ್ಲಿ ಅಸೋಸಿಯೇಶನ್‍ನ ಉಪಾಧ್ಯಕ್ಷ ಹರೀಶ್ ಜಿ.ಅಮೀನ್, ಗೌ| ಜೊತೆ ಕಾರ್ಯದರ್ಶಿ ಹರೀಶ್ ಜಿ.ಸಾಲ್ಯಾನ್, ಸಾಂಸ್ಕೃತಿಕ ಸಮಿತಿ ಕಾರ್ಯಾಧ್ಯಕ್ಷ ದಯಾನಂದ್ ಆರ್.ಪೂಜಾರಿ, ಭಾರತ್ ಬ್ಯಾಂಕ್‍ನ ನಿರ್ದೇಶಕ ಗಂಗಾಧರ್ ಜೆ.ಪೂಜಾರಿ, ಉದ್ಯಮಿ ಸುಧಾಕರ ಪೂಜಾರಿ ಹೆಜ್ಮಾಡಿ ಮತ್ತಿತರರು ಉಪಸ್ಥಿತರಿದ್ದು ರವೀಂದ್ರ ಶಾಂತಿ ಪೂಜೆ ನೇರವೇರಿಸಿದರು.

ಸ್ವಾಮೀಜಿ ಅವರು ಮಂದಿರದಲ್ಲಿ ಪ್ರತಿಷ್ಠಾಪಿತ ಬ್ರಹ್ಮಶ್ರೀ ನಾರಾಯಣ ಗುರು, ಅವಳಿವೀರರಾದ ಕೋಟಿ-ಚೆನ್ನಯರಿಗೆ ಆರತಿಗೈದು ನಮಿಸಿ ನೆರದಸದ್ಭಕ್ತರಿಗೆ ಹರಸಿದರು.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here