Thursday 15th, May 2025
canara news

ಪರೀಕ್ಷಾ ಪೂರ್ವಭಾವಿ ಸಿದ್ಧತೆಯ ಕಾರ್ಯಾಗಾರ

Published On : 04 Nov 2018   |  Reported By : Gurudatt Somayaji


ಕುಂಜಾರುಗಿರಿ ಪಾಜಕದ ಆನಂದತೀರ್ಥ ವಿದ್ಯಾಲಯದ ವಿದ್ಯಾರ್ಥಿಗಳಿಗೆ "ಪರೀಕ್ಷೆಯನ್ನು ಎದುರಿಸುವುದು ಹೇಗೆ" ಎಂಬ ವಿಷಯದ ಕುರಿತಾದ ಕಾರ್ಯಾಗಾರವನ್ನು ಜೆಸಿಐ ರಾಷ್ಟ್ರೀಯ ತರಬೇತುದಾರ ರಾಜೇಂದ್ರ ಭಟ್ ಇತ್ತೀಚಿಗೆ ನಡೆಸಿಕೊಟ್ಟರು.

ಈ ತರಬೇತಿ ಕಾರ್ಯಕ್ರಮದಲ್ಲಿ ಪರೀಕ್ಷಾ ವಿಧಾನಗಳು , ಸಮಯ ಪರಿಪಾಲನಾ ಸೂತ್ರಗಳು , ನೆನಪಿನ ಶಕ್ತಿಯನ್ನು ವೃದ್ಧಿಸುವ ವಿಧಾನ, ಒತ್ತಡ ನಿರ್ವಹಣೆ , ವೇಳಾಪಟ್ಟಿ ತಯಾರಿ , ವ್ಯಕ್ತಿತ್ವ ಉನ್ನತಿಗೆ ಕೌಶಲಗಳು ಹೀಗೆ ಹಲವು ಆಯಾಮಗಳನ್ನು ಸೂಕ್ಷ್ಮವಾಗಿ ಅವಲೋಕಿಸಲಾಯಿತು . ಪ್ರಾತ್ಯಕ್ಷಿಕೆ ಮತ್ತು ಪ್ರಾಯೋಗಿಕ ಗೇಮ್ಸ್ ಗಳ ಮೂಲಕ ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಲಾಯಿತು .

ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲೆ ಗೀತಾ ಎಸ್. ಕೋಟ್ಯಾನ್ , ಆಡಳಿತಾಧಿಕಾರಿ ಗುರುದತ್ ಸೋಮಯಾಜಿ , ಮುಖ್ಯ ವಾರ್ಡನ್ ನಾಗರಾಜ್ ತಲ್ಲಂಜೆ ಮತ್ತು ಶಿಕ್ಷಕರು ಭಾಗವಹಿಸಿದ್ದರು . ಮಲ್ಲಿಕಾ ನಿರೂಪಿಸಿ ವಂದಿಸಿದರು .




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here