Wednesday 14th, May 2025
canara news

ಆನಂದತೀರ್ಥ ವಿದ್ಯಾಲಯ : ವಾರ್ಷಿಕ ಕ್ರೀಡಾಕೂಟ

Published On : 17 Dec 2018   |  Reported By : Gurudatt Somayaji


ಪಾಜಕ ಆನಂದತೀರ್ಥ ವಿದ್ಯಾಲಯದ ವಾರ್ಷಿಕ ಕ್ರೀಡಾಕೂಟವು ಇತ್ತೀಚೆಗೆ ನಡೆಯಿತು . ಕ್ರೀಡಾಕೂಟವನ್ನು ಉಡುಪಿ ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕ ವಿಶ್ವನಾಥ್ ಬಾಯರಿ ಉದ್ಘಾಟಿಸಿದರು. ಅವರು ಧ್ವಜಾರೋಹಣ ನೆರವೇರಿಸಿ ಮಾತನಾಡಿ , ಕ್ರೀಡೆ ಪ್ರತಿಯೊಬ್ಬ ಮನುಷ್ಯನ ಅವಿಭಾಜ್ಯ ಅಂಗ, ವಿದ್ಯಾರ್ಥಿದೆಸೆಯಿಂದಲೇ ಕ್ರೀಡೆಯನ್ನು ಮೈಗೂಡಿಸಿಕೊಂಡರೆ ಸರ್ವತೋಮುಖ ಬೆಳವಣಿಗೆ ಸಾಧ್ಯ. ಇಲ್ಲಿನ ವಿದ್ಯಾರ್ಥಿಗಳು ರಾಷ್ಟ್ರಮಟ್ಟದಲ್ಲಿ ಹೆಸರು ಗಳಿಸುವಂತಾಗಲಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ನಾಗರಾಜ್ ಬಲ್ಲಾಳ್ , ಕೋಶಾಧಿಕಾರಿ ಲಕ್ಷ್ಮೀನಾರಾಯಣ ಉಪಾಧ್ಯ, ಸದಸ್ಯರಾದ ಸುದರ್ಶನ ರಾವ್, ರೂಪಾ ಬಲ್ಲಾಳ್ , ಪ್ರಾಂಶುಪಾಲೆ ಗೀತಾ ಎಸ್. ಕೋಟ್ಯಾನ್ , ಆಡಳಿತಾಧಿಕಾರಿ ಗುರುದತ್ ಸೋಮಯಾಜಿ , ಪಡುಬೆಳ್ಳೆ ಹಾಲು ಉತ್ಪಾದಕರ ಸ . ಸಂ. ಅಧ್ಯಕ್ಷ ಮೋಹನ ರಾವ್ ಉಪಸ್ಥಿತರಿದ್ದರು . ಗುರುದತ್ ಸೋಮಯಾಜಿ ಅತಿಥಿಗಳನ್ನು ಪರಿಚಯಿಸಿದರು. ಶಿಕ್ಷಕಿ ವಿನುತಾ ಕಾರ್ಯಕ್ರಮ ನಿರೂಪಿಸಿ , ದೈಹಿಕ ಶಿಕ್ಷಣ ಶಿಕ್ಷಕರಾದ ಸುಮನಾ ಸ್ವಾಗತಿಸಿ ಸಂತೋಷ್ ಶೆಟ್ಟಿ ವಂದಿಸಿದರು .




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here