Tuesday 23rd, April 2024
canara news

ಸ್ವಸಹಾಯ ಸಂಘಗಳಿಂದ ಸ್ವಾವಲಂಬಿ ಜೀವನ: ಡಾ.ಡಿ.ವೀರೇಂದ್ರ ಹೆಗ್ಗಡೆ

Published On : 25 Dec 2018   |  Reported By : Rons Bantwal


ಕರ್ನಾಟಕ ಜೈನ್ ಸ್ವಯಂ ಸೇವಾ ಚಾರಿಟೇಬಲ್ ಟ್ರಸ್ಟ್ ಮೂಡುಬಿದಿರೆಯ ಪದ್ಮಾವತಿ ಕಲಾಮಂದಿರದಲ್ಲಿ ಭಾನುವಾರ (ಡಿ.23) ಆಯೋಜಿಸಿದ್ದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸ್ವಸಹಾಯ ಸಂಘಗಳ ಸಮಾವೇಶವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪದ್ಮವಿಭೂಷಣ ರಾಜರ್ಷಿ ಡಾ.ಡಿ.ವೀರೇಂದ್ರ ಹೆಗ್ಗಡೆ ಉದ್ಘಾಟಿಸಿದರು. ಮೂಡುಬಿದಿರೆ ಶ್ರೀ ಜೈನ ಮಠದ ‘ಭಾರತಭೂಷಣ’ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿಯವರು, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್, ಮಾಜಿ ಸಚಿವ ಕೆ.ಅಭಯಚಂದ್ರ ಜೈನ್, ಕರ್ನಾಟಕ ಜೈನ್ ಸ್ವಯಂ ಸೇವಾ ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷ ನೇಮಿರಾಜ ಆರಿಗ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಶ್ರೀಧರ ಭಂಡಾರಿ ಮತ್ತಿತರರು ಉಪಸ್ಥಿತರಿದ್ದರು.

ಮೂಡಬಿದ್ರೆ(ದಕ್ಷಿಣ ಕನ್ನಡ ಜಿಲ್ಲೆ): ಸ್ವಸಹಾಯ ಸಂಘಗಳು ಮಹಿಳೆಯರು ಸ್ವಾವಲಂಬಿ ಜೀವನ ನಡೆಸಲು ನೆರವಾಗಿವೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪದ್ಮವಿಭೂಷಣ ರಾಜರ್ಷಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅಭಿಪ್ರಾಯಪಟ್ಟರು.

ಕರ್ನಾಟಕ ಜೈನ್ ಸ್ವಯಂ ಸೇವಾ ಚಾರಿಟೇಬಲ್ ಟ್ರಸ್ಟ್‍ಮೂಡುಬಿದಿರೆ ಪದ್ಮಾವತಿ ಕಲಾಮಂದಿರದಲ್ಲಿ ಭಾನುವಾರ (ಡಿ.23) ಆಯೋಜಿಸಿದ್ದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸ್ವಸಹಾಯ ಸಂಘಗಳ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿ, ಸಣ್ಣಪುಟ್ಟ ಖರ್ಚಿಗೂ ಪುರಷರನ್ನು ಅವಲಂಬಿಸಬೇಕಿದ್ದ ಮಹಿಳೆಯರು ಇಂದು ಸ್ವಸಹಾಯ ಸಂಘಗಳಲ್ಲಿ ತೊಡಗಿ ಪುರಷರಿಗೇ ಆರ್ಥಿಕವಾಗಿ ನೆರವಾಗುವಷ್ಟು ಸಬಲರಾಗಿದ್ದಾರೆ ಎಂದರು.

ಸ್ವಯಂಸೇವೆಯಿಂದ ವ್ಯಕ್ತಿ ಬಲಿಷ್ಟನಾದರೆ, ಸ್ವಸಹಾಯ ಸಂಘಗಳು ಸಂಸಾರ ಹಾಗೂ ಸಮಾಜವನ್ನು ಸದೃಢಗೊಳಿಸುತ್ತವೆ ಎಂದ ಅವರು, ಪುರಷರು ಉದ್ಯೋಗ, ವ್ಯವಹಾರದಲ್ಲೇ ಮುಳಿಗಿರುವ ಇಂದಿನ ಕಾಲದಲ್ಲಿ ಸಂಸಾರದ ಜತೆಗೆ ಧರ್ಮ ರಕ್ಷಣೆಯ ಜವಾಬ್ದಾರಿಯೂ ಮಹಿಳೆಯರ ಮೇಲಿದೆ ಎಂದು ನುಡಿದರು.

ಪಂಚಮಹಾವೈಭವ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 2019ರ ಫೆಬ್ರವರಿಯಲ್ಲಿ ನಡೆಯಲಿರುವ ಮಹಾಮಸ್ತಕಾಭಿಷೇಕದಲ್ಲಿ ಈ ಬಾರಿ ಪಂಚಕಲ್ಯಾಣದ ಬದಲು ಶ್ರೀ ಬಾಹುಬಲಿ ಸ್ವಾಮಿಯ ಪಂಚಮಹಾ ವೈಭವ ಆಯೋಜಿಸುವ ಮೂಲಕ ಐತಿಹಾಸಿಕ ನಿರ್ಧಾರವೊಂದನ್ನು ತೆಗೆದುಕೊಳ್ಳಲಾಗಿದೆ ಎಂದು ಡಾ.ಡಿ.ವೀರೇಂದ್ರ ಹೆಗ್ಗಡೆ ತಿಳಿಸಿದರು.
ಮೂಡುಬಿದಿರೆ ಶ್ರೀ ಜೈನಮಠದ‘ಭಾರತಭೂಷಣ’ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿಯವರು ಆಶೀರ್ವಚನ ನೀಡಿ, ರಾಜಕಾರಣಿಗಳನ್ನು, ಅಧಿಕಾರಿಗಳನ್ನು ಸಂದೇಹದಿಂದ ನೋಡುವುದನ್ನು ಬಿಟ್ಟು ದೇಶದ ಪ್ರಗತಿಯಲ್ಲಿ ಅವರ ಕೊಡುಗೆಯನ್ನು ಸ್ಮರಿಸಬೇಕು ಎಂದು ಹೇಳಿದರು.
ಜೈನ ಧರ್ಮೀಯರನ್ನು 2ಬಿ ಪ್ರವರ್ಗಕ್ಕೆ ಸೇರಿಸುವ ಬೇಡಿಕೆಗೆ ಕುರಿತು ಮಾತನಾಡಿ, ಸರಕಾರ ಈ ಬೇಡಿಕೆಯನ್ನು ಗಂಭೀರವಾಗಿ ತೆಗೆದುಕೊಂಡು ಬೇರೆ ಸಮುದಾಯದವರೊಂದಿಗೆ ಜೈನ ಸಮುದಾಯದ ಪ್ರಗತಿಗೆ ನೆರವಾಗಬೇಕು ಎಂದು ಸ್ವಾಮೀಜಿ ಒತ್ತಾಯಿಸಿದರು.

ಜೈನ ಧರ್ಮೀಯರನ್ನು 2ಬಿ ಪ್ರವರ್ಗಕ್ಕೆ ಸೇರಿಸುವುದು, ಜೈನ ಸಮುದಾಯಕ್ಕೆ ಪ್ರತ್ಯೇಕ ನಿಗಮ ಸ್ಥಾಪನೆ ಮತ್ತಿತರ ಬೇಡಿಕೆಗಳ ಹಕ್ಕೋತ್ತಾಯ ಪತ್ರವನ್ನು ಟ್ರಸ್ಟ್‍ನಿಂದ ಸ್ವೀಕರಿಸಿ ಮಾತನಾಡಿದ ಶಾಸಕ ಉಮಾನಾಥ ಕೋಟ್ಯಾನ್ ಅವರು ತಾವು ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ಅಭಿವೃದ್ಧಿ ಸಮಿತಿ ಸದಸ್ಯರಾಗಿದ್ದು ಸಮಿತಿಯ ಮುಂದಿನ ಸಭೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿ ಬೇಡಿಕೆ ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಮಾತನಾಡಿ, ಸ್ವಸಹಾಯ ಸಂಘಗಳಿಂದ ‘ನಾನು’ ಶಬ್ಧದ ಬಳಕೆ ಕಡೆಮೆಯಾಗಿ ‘ನಾವು’ ಶಬ್ಧ ಬಳಕೆ ಹೆಚ್ಚಾಗಿರುವುದು ಉತ್ತಮ ಬೆಳವಣಿಗೆ ಎಂದು ನುಡಿದರು.

ಸಮಾವೇಶದಲ್ಲಿ ಟ್ರಸ್ಟಿ ಶಮಂತ್ ಕುಮಾರ್ ಜೈನ್, ಅಂತಾರಾಷ್ಟ್ರೀಯ ಕರಾಟೆ ಸಾಧಕ ಸುಪಾಶ್ರ್ವ ಕೊಂಬ, ರಾಷ್ಟ್ರಪ್ರಶಸ್ತಿ ಪುರಸ್ಕøತ ಪ್ರತಿಭೆ ಪಂಚಮಿ ಮಾರೂರು, ಮಂಗಳೂರು ಎಪಿಎಂಸಿ ನೂತನ ಅಧ್ಯಕ್ಷ ಪ್ರವೀಣ್ ಜೈನ್, ಕಾರ್ಕಳ ಎಪಿಎಂಸಿ ಅಧ್ಯಕ್ಷ ಮಪಾಲು ಜಯವರ್ಮ ಜೈನ್ ಅವರನ್ನು ಸನ್ಮಾನಿಸಲಾಯಿತು.

ಮಾಜಿ ಸಚಿವ ಕೆ.ಅಭಯಚಂದ್ರ ಜೈನ್, ಕರ್ನಾಟಕ ಜೈನ್ ಸ್ವಯಂ ಸೇವಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ನೇಮಿರಾಜ ಆರಿಗ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಶ್ರೀಧರ ಭಂಡಾರಿ, ದ.ಕ. ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರದ ಮಾಹಿತಿ ಸಂಯೋಜಕ ಅಬ್ದುಲ್ ಖಾದರ್, ಮೂಡುಬಿದಿರೆ ಜೈನ್ ಮಿಲನ್ ಅಧ್ಯಕ್ಷೆ ಶ್ವೇತಾ ಜೈನ್, ಸಂಘದ ಮೂಡುಬಿದಿರೆ ವಿಧಾನಸಭಾ ಕ್ಷೇತ್ರ ಸಲಹಾ ಸಮಿತಿ ಅಧ್ಯಕ್ಷೆಶ್ವೇತಾ ಪ್ರವೀಣ್, ಸಂಚಾಲಕ ಸುದೀಪ್ ಜೈನ್, ನ್ಯಾಯವಾದಿ ಶಶಿಕಿರಣ್ ಜೈನ್, ಸ್ವಸಹಾಯ ಸಂಘಗಳ ಮೇಲ್ವಿಚಾರಕ ಶಿವರಾಜ್ ಜೈನ್, ಟ್ರಸ್ಟಿಗಳಾದ ಎ.ವಿ.ಶೆಟ್ಟಿ ಧರ್ಮಸ್ಥಳ, ಶಶಿಕಿರಣ್, ಶಮಂತ್ ಕುಮಾರ್ ಜೈನ್, ಸುಜಾತಾ ಎನ್.ಆರಿಗ ಉಪಸ್ಥಿತರಿದ್ದರು. ತ್ರಿಶಲಾ, ಪ್ರಮೀಳಾ, ಧನಶ್ರೀ ಪ್ರಾರ್ಥಿಸಿದರು.ಸರಳಾ ಸಂಪತ್ ಸ್ವಾಗತಿಸಿದರು. ಜೀವಿತಾ, ಅಭಿಲಾಷಾ ಕಾರ್ಯಕ್ರಮ ನಿರೂಪಿಸಿದರು. ತ್ರಿಶಲ ವಂದಿಸಿದರು.

ಈ ಸಂದರ್ಭದಲ್ಲಿ ಸ್ವಸಹಾಯ ಸಂಘಗಳ ಸದಸ್ಯರಿಗೆ ಹಾಗೂ ಮಕ್ಕಳಿಗೆ ವಿವಿಧ ಸ್ಪರ್ಧೆಗಳು ಹಾಗೂ ಸದಸ್ಯರಿಂದ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆದವು.

 




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here