Wednesday 14th, May 2025
canara news

ಜ.20:ಕಾರ್ಕಳದಲ್ಲಿ ದಶವಾರ್ಷಿಕ ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನ

Published On : 18 Jan 2019   |  Reported By : Rons Bantwal


ಕನ್ನಡ ವೆಲ್ಫೇರ್ ಸೊಸೈಟಿ ಘಾಟ್ಕೋಪರ್‍ಗೆ ಕರ್ನಾಟಕ ಸಂಘ ರತ್ನ ಪುರಸ್ಕಾರ

ಮುಂಬಯಿ, ಜ.16: ದಶ ವಾರ್ಷಿಕ ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನವು ಇದೇ ಆದಿತ್ಯವಾರ (ಜ.20) ಸಂಜೆ 5.00 ಗಂಟೆಗೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕು ಅಲ್ಲಿನ ಬಾಹುಬಲಿ ಬೆಟ್ಟದಲ್ಲಿನ ಶ್ರೀ ಗೋಮಟೇಶ್ವರ ಸನ್ನಿಧಿಯಲ್ಲಿ ಹತ್ತು ಮಹಾ ಕಾವಗಳ ಮಹಾ ಕವಿ ಡಾ| ಪ್ರದೀಪ್‍ಕುಮಾರ್ ಹೆಬ್ರಿ ಅಧ್ಯಕ್ಷತೆಯಲ್ಲಿ ಜರುಗಲಿದ್ದು, 80ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನಾಧ್ಯಕ್ಷ, ಶ್ರೇಷ್ಠ ಸಾಹಿತಿ ಡಾ| ನಾ.ಡಿಸೋಜ ಸಮ್ಮೇಳನ ಉದ್ಘಾಟಿಸುವರು ಎಂದು ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ, ಪತ್ರಕರ್ತ, ಲೇಖಕ, ಶೇಖರ ಅಜೆಕಾರು ತಿಳಿಸಿದ್ದಾರೆ.

    

               Naa Dsouza                         Pradeepkumar Hbri                   Suresh S. Bhandary

   

 Suresh Shetty Gurme            Navin Shetty Innabalike

Shekar Ajekar

ನಾಗೇಶ್ವರ ಸಿನಿ ಕ್ರಿಯೇಷನ್ಸ್‍ನ ಆಡಳಿತ ನಿರ್ದೇಶಕ, ಚಲನಚಿತ್ರ ನಿಮಾಪಕ, ಭಂಡಾರಿ ಮಹಾ ಮಂಡಲದ ಸ್ಥಾಪಕಾಧ್ಯಕ್ಷ ಕಡಂದಲೆ ಸುರೇಶ್ ಎಸ್.ಭಂಡಾರಿ ಅವರು ಗೌರವ ಪ್ರದಾನ ಕಾರ್ಯಕ್ರಮದ ಅಧ್ಯಕ್ಷತೆ ಕಡಂದಲೆ ಸುರೇಶ್ ಎಸ್.ಭಂಡಾರಿ ವಹಿಸಲಿದ್ದು, ಮುಂಬಯಿ ಮಹಾನಗರದಲ್ಲಿನ ಕನ್ನಡ ವೆಲ್ಫೇರ್ ಸೊಸೈಟಿ ಘಾಟ್ಕೋಪರ್ ಸಂಸ್ಥೆಗೆ ಕರ್ನಾಟಕ ಸಂಘ ರತ್ನ ಪುರಸ್ಕಾರ ಪ್ರದಾನಿಸಲಾಗುವುದು. ಕನ್ನಡ ವೆಲ್ಫೇರ್ ಪರವಾಗಿ ಅಧ್ಯಕ್ಷ ನವೀನ್ ಶೆಟ್ಟಿ ಇನ್ನಾಬಾಳಿಕೆ ಅವರನ್ನು ಗೌರವಿಸಲಾಗುವುದು. ಸುರೇಶ್ ಶೆಟ್ಟಿ ಗುರ್ಮೆ ವಿಶೇಷ ಮಾತುಕತೆ ನಡೆಸಲಿದ್ದಾರೆÉ.

ದಶಮಾನೋತ್ಸವ ಸಂಭ್ರಮದ ಬೆಳದಿಂಗಳ ಕವಿಗೋಷ್ಠಿಯನ್ನು ಜ್ಯೋತಿ ಗುರುಪ್ರಸಾದ್ ಕಾರ್ಕಳ ಉದ್ಘಾಟಿಸಲಿದ್ದು ಮುಂಬಯಿನ ಕವಿ, ಕಥೆಗಾರ, ಗೋಪಾಲ ತ್ರಾಸಿ ಪ್ರಾರಂಭೋತ್ಸವ ಕವಿತೆ ಹಾಡಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here