Monday 7th, July 2025
canara news

ಬಿಲ್ಲವರ ಭವನದಲ್ಲಿ ನೆರವೇರಿದ ವಾರ್ಷಿಕ ಓಂ-ಶನಿ-ಓಂ ಶ್ರೀ ಶನೀಶ್ವರ ಗ್ರಂಥ ಪಾರಾಯಣ

Published On : 26 Feb 2019   |  Reported By : Rons Bantwal


ಚಿತ್ರ / ವರದಿ : ರೋನ್ಸ್ ಬಂಟ್ವಾಳ್)

ಮುಂಬಯಿ, ಫೆ.23: ಬಿಲ್ಲವರ ಅಸೋಸಿಯೇಶನ್ ಮುಂಬಯಿ ಸಂಚಾಲಕತ್ವದ ಶ್ರೀ ಗುರು ನಾರಾಯಣ ಯಕ್ಷಗಾನ ಮಂಡಳಿ ವಾರ್ಷಿಕವಾಗಿ ನೆರವೇರಿಸುತ್ತಿರುವ ಸಾರ್ವಜನಿಕ ಓಂ-ಶನಿ-ಓಂ ಶ್ರೀ ಶನೀಶ್ವರ ಗ್ರಂಥ ಪಾರಾಯಣ ಧಾರ್ಮಿಕ ಕಾರ್ಯಕ್ರಮವನ್ನು ಇಂದಿಲ್ಲಿ ಶನಿವಾರ ಅಪರಾಹ್ನ ಸಾಂತಕ್ರೂಜ್ ಪೂರ್ವದಲ್ಲಿನ ಬಿಲ್ಲವರ ಭವನದÀಲ್ಲಿ ವಿಜೃಂಭನೆಯಿಂಂದ ವಿಧಿವತ್ತಾಗಿ ನೆರವೇರಿಸಿತು.

 

ರಾಷ್ಟ್ರೀಯ ಬಿಲ್ಲವರ ಮಹಾ ಮಂಡಲದ ಅಧ್ಯಕ್ಷ ಜಯ ಸಿ.ಸುವರ್ಣ ಅವರ ಮಾರ್ಗದರ್ಶನ ಹಾಗೂ ಅಸೋಸಿಯೇಶನ್‍ನ ಅಧ್ಯಕ್ಷ ಚಂದ್ರಶೇಖರ್ ಎಸ್.ಪೂಜಾರಿ ಇವರ ದಿವ್ಯೋಪಸ್ಥಿತಿಯಲ್ಲಿ ನಡೆಸಲ್ಪಟ್ಟ ಪಾರಾಯಣ ಕಾರ್ಯಕ್ರಮಕ್ಕೆ ಅಸೋಸಿಯೇಶನ್‍ನ ಮಾಜಿ ಗೌರವ ಪ್ರಧಾನ ಕೋಶಾಧಿಕಾರಿ, ಭಾರತ್ ಬ್ಯಾಂಕ್‍ನ ಮಾಜಿ ನಿರ್ದೇಶಕ ಎನ್.ಎಂ ಸನಿಲ್ ದೀಪಹಚ್ಚಿ 2019ನೇ ವಾರ್ಷಿಕ ಸಾರ್ವಜನಿಕ ಗ್ರಂಥ ಪಾರಾಯಣಕ್ಕೆ ಚಾಲನೆ ನೀಡಿದರು.

ಶ್ರೀ ಧನಂಜಯ ಶಾಂತಿ (ಅಸೋಸಿಯೇಶನ್‍ನ ಗೌರವ ಪ್ರಧಾನ ಕಾರ್ಯದರ್ಶಿ) ಮತ್ತು ಸಾಮಾಜಿಕ ಮತ್ತು ಧಾರ್ಮಿಕ ಸಮಿತಿ ಕಾರ್ಯದರ್ಶಿ ರವೀಂದ್ರ ಎ.ಶಾಂತಿ ಕಲಶ ಪ್ರತಿಷ್ಠಾಪನೆಗೈದÀು ಶ್ರೀ ಶನೀಶ್ವರ ಮಹಾಪೂಜೆ ನೆರವೇರಿಸಿ ಅನುಗ್ರಹಿಸಿದರು. ಅಸೋಸಿಯೇಶನ್‍ನ ಉಪಾಧ್ಯಕ್ಷ ದಯಾನಂದ್ ಆರ್.ಪೂಜಾರಿ (ಸಾಂಸ್ಕೃತಿಕ ಸಮಿತಿ ಕಾರ್ಯಾಧ್ಯಕ್ಷ) ಮತ್ತು ವೀಣಾ ದಯಾನಂದ್ ದಂಪತಿ ಪೂಜೆಯ ಯಜಮಾ ನತ್ವ ವಹಿಸಿದ್ದರು. ಗಂಗಾಧರ್ ಕಲ್ಲಡಿ ಪ್ರಸಾದ ವಿತರಿಸಿದರು. ಬಿ.ಎಂ ಸುವರ್ಣ ಮೂಲ್ಕಿ, ಬಾಲಕೃಷ್ಣ ಪೂಜಾರಿ, ಯಶೋಧರ ಡಿ.ಪೂಜಾರಿ, ನಾರಾಯಣ ಬಂಗೇರ ಸೇರಿದಂತೆ ಶ್ರೀ ಗುರು ನಾರಾಯಣ ಯಕ್ಷಗಾನ ಮಂಡಳಿಯ ಕಲಾವಿದರು ಶ್ರೀ ಶನೀಶ್ವರ ಗ್ರಂಥ ಪಾರಾಯಣಗೈದರು.

ಈ ಸಂದರ್ಭದಲ್ಲಿ ಅಸೋಸಿಯೇಶನ್‍ನ ಉಪಾಧ್ಯಕ್ಷ ಶ್ರೀನಿವಾಸ ಆರ್.ಕರ್ಕೇರ, ಯುವಾಭ್ಯುದಯ ಸಮಿತಿ ಕಾರ್ಯಾಧ್ಯಕ್ಷ ನಾಗೇಶ್ ಎನ್.ಕೋಟ್ಯಾನ್, ಮಾಜಿ ಗೌರವ ಪ್ರಧಾನ ಕಾರ್ಯದರ್ಶಿ ಮಹೇಶ್ ಕಾರ್ಕಳ, ಸಾಂಸ್ಕೃತಿಕ ಸಮಿತಿ ಕಾರ್ಯದರ್ಶಿ ಅಶೋಕ್ ಕುಕ್ಯಾನ್ ಸಸಿಹಿತ್ಲು, ಬಿಲ್ಲವರ ಭವನದÀ ವ್ಯವಸ್ಥಾಪಕ ಭಾಸ್ಕರ್ ಟಿ.ಪೂಜಾರಿ ಸೇರಿದಂತೆ, ಅಸೋಸಿಯೇಶನ್‍ನ ಇತರ ಪದಾಧಿಕಾರಿಗಳು, ಸ್ಥಳೀಯ ಸಮಿತಿಗಳ ಪ್ರಮುಖರು ನೂರಾರು ಭಕ್ತರು ಸಾಮೂಹಿಕ ಪೂಜೆಯಲ್ಲಿ ಪಾಲ್ಗೊಂಡÀರು.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here