Sunday 11th, May 2025
canara news

ಬಿಲ್ಲವ ಅಸೋಸಿಯೇಶನ್ ಮುಂಬಯಿ ಸಂಸ್ಥೆಗೆ `ತೌಳವ ಸಾಧಕ ಸಂಸ್ಥೆ'

Published On : 26 Apr 2019   |  Reported By : Rons Bantwal


ತೌಳವ ಉಚ್ಛಯ ವಿಶ್ವ ತುಳುವರ ಸಮ್ಮಿಲನ-2019 ಗೌರವ ಪ್ರದಾನ
(ಚಿತ್ರ / ವರದಿ : ರೋನ್ಸ್ ಬಂಟ್ವಾಳ್)

ಮುಂಬಯಿ, ಎ.24: ತುಳುನಾಡ ರಕ್ಷಣಾ ವೇದಿಕೆಯ ದಶಸಂಭ್ರಮದ ಅಂಗವಾಗಿ ಇತ್ತೀಚೆಗೆ ಮಂಗಳೂರು ಪುರಭವನದಲ್ಲಿ ನಡೆದ ತೌಳವ ಉಚ್ಛಯ ವಿಶ್ವ ತುಳುವರ ಸಮ್ಮಿಲನ-2019 ಸಂಭ್ರಮದಲ್ಲಿ ಭಾಗವಹಿಸಲು ಅನಾನುಕೂಲವಾಗಿದ್ದ ಬಿಲ್ಲವರ ಅಸೋಸಿಯೇಶನ್ ಮುಂಬಯಿ ಅಧ್ಯಕ್ಷ ಚಂದ್ರಶೇಖರ ಎಸ್.ಪೂಜಾರಿ ಇವರನ್ನು ಕಳೆದ ಮಂಗಳವಾರ ಸಾಂತಕ್ರೂಜ್ ಪೂರ್ವದಲ್ಲಿನ ಬಿಲ್ಲವ ಭವನದಲ್ಲಿ ನಡೆಸಲ್ಪಟ್ಟ ಗುರುಮೂರ್ತಿ ರಜತ ಪ್ರತಿಷ್ಠಾಪನಾ ದಿನಾಚರಣೆ ಸಂಭ್ರದಲ್ಲಿ ತೌಳವ ಉಚ್ಛಯದ ಪ್ರಧಾನ ಸಂಘಟಕ, ತುಳುನಾಡ ರಕ್ಷಣಾ ವೇದಿಕೆ ಮಂಗಳೂರು ಇದರ ಸ್ಥಾಪಕಾಧ್ಯಕ್ಷ ಯೋಗಿಶ್ ಶೆಟ್ಟಿ ಜೆಪ್ಪು ಅವರು ಬಿಲ್ಲವರ ಅಸೋಸಿಯೇಶನ್‍ನ ಸಮುದಾಯ ಹಾಗೂ ಸಮಾಜ ಸೇವಾ ಕ್ಷೇತ್ರದ ಅನುಪಮ ಸೇವೆ ಗುರುತಿಸಿ ಮುಂಬಯಿನ ಸಮಗ್ರ ಬಿಲ್ಲವರ ಪರವಾಗಿ ಅಧ್ಯಕ್ಷ ಚಂದ್ರಶೇಖರ ಎಸ್.ಪೂಜಾರಿ ಅವರನ್ನು `ತೌಳವ ಸಾಧಕ ಸಂಸ್ಥೆ' ಗೌರವ ಪ್ರದಾನಿಸಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ವೇದಿಕೆಯಲ್ಲಿ ನಗರದ ಹಿರಿಯ ಉದ್ಯಮಿಗಳಾದ ಗಣೇಶ್ ಬೆರ್ಮು ಪೂಜಾರಿ, ವಾಮನ್ ಡಿ.ಪೂಜಾರಿ, ಶಿವರಾಮ ಸಿ.ಪೂಜಾರಿ (ಬಾಲಾಜಿ), ಬಿಸಿಸಿಐ ಕಾರ್ಯಾಧ್ಯಕ್ಷ ಎನ್.ಟಿ ಪೂಜಾರಿ, ಭಾರತ್ ಬ್ಯಾಂಕ್‍ನ ನಿರ್ದೇಶಕರಾದ ದಾಮೋದರ್ ಸಿ.ಕುಂದರ್, ಭಾಸ್ಕರ್ ಎಂ.ಸಾಲ್ಯಾನ್, ಪುರುಷೋತ್ತಮ ಎಸ್.ಕೋಟ್ಯಾನ್, ಪ್ರೇಮನಾಥ್ ಪಿ.ಕೋಟ್ಯಾನ್, ಬಿಲ್ಲವರ ಅಸೋಸಿಯೇಶನ್‍ನ ಮಾಜಿ ಅಧ್ಯಕ್ಷ ನಿತ್ಯಾನಂದ ಡಿ.ಕೋಟ್ಯಾನ್, ಹಾಲಿ ಉಪಾಧ್ಯಕ್ಷರುಗಳಾದ ಶಂಕರ ಡಿ.ಪೂಜಾರಿ, ದಯಾನಂದ್ ಆರ್.ಪೂಜಾರಿ, ಹರೀಶ್ ಜಿ.ಅವಿೂನ್, ಶ್ರೀನಿವಾಸ ಆರ್.ಕರ್ಕೇರ, ಗೌರವ ಪ್ರಧಾನ ಕಾರ್ಯದರ್ಶಿ ಧನಂಜಯ ಶಾಂತಿ, ಗೌರವ ಪ್ರಧಾನ ಕೋಶಾಧಿಕಾರಿ ರಾಜೇಶ್ ಜೆ.ಬಂಗೇರ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಜಯಂತಿ ವಿ.ಉಳ್ಳಾಲ್, ಮಾಜಿ ಕಾರ್ಯಾಧ್ಯಕ್ಷೆ ಶಕುಂತಳಾ ಕೆ.ಕೋಟ್ಯಾನ್, ಸೇವಾದಳದ ದಳಪತಿ ಗಣೇಶ್ ಜಿ.ಪೂಜಾರಿ, ಸಾಮಾಜಿಕ ಮತ್ತು ಧಾರ್ಮಿಕ ಸಮಿತಿ ಕಾರ್ಯಧ್ಯಕ್ಷ ಮೋಹನ್‍ದಾಸ್ ಜಿ.ಪೂಜಾರಿ, ಕಾರ್ಯದರ್ಶಿ ರವೀಂದ್ರ ಎ.ಶಾಂತಿ, ಅಶೋಕ್ ಕುಕ್ಯಾನ್ ಸಸಿಹಿತ್ಲು, ಭವನದ ವ್ಯವಸ್ಥಾಪಕ ಭಾಸ್ಕರ್ ಟಿ.ಪೂಜಾರಿ ಸೇರಿದಂತೆ ಅಸೋಸಿಯೇಶನ್‍ನ ಸ್ಥಳೀಯ ಸಮಿತಿಗಳ ಮುಖ್ಯಸ್ಥರು ಸದಸ್ಯರನೇಕರು ಹಾಜರಿದ್ದರು.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here