Thursday 28th, March 2024
canara news

ಉಜಿರೆ ರುಡ್‌ಸೆಟ್‌ನಲ್ಲಿ ಎಸ್.ಡಿ.ಎಮ್ ಶಾಲಾ ಶಿಕ್ಷಕರಿಗೆ ಕಾರ್ಯಗಾರ

Published On : 31 May 2019   |  Reported By : Rons Bantwal


ಧರ್ಮಸ್ಥಳ: ಶಾಲೆಗಳು ಪ್ರಾರಂಭವಾಗುವ ಮೊದಲು ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲಾ ಎಲ್ಲಾ ಶಿಕ್ಷಕರಿಗೆ ಒಂದು ದಿನದ ಸಬಲೀಕರಣ ಕಾರ್ಯಗಾರವನ್ನು ಉಜಿರೆ ರುಡ್‌ಸೆಟ್‌ನಲ್ಲಿ ಹಮ್ಮಿಕೊಳ್ಳಲಾಯ್ತು. ಈ ಕಾರ್ಯಗಾರವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀಮತಿ ಶ್ರದ್ಧಾ ಅಮಿತ್ ರವರು ಉದ್ಘಾಟಿಸಿ ಮಾತನಾಡುತ್ತಾ ಮಕ್ಕಳಲ್ಲಿ ಸ್ಫೂರ್ತಿಯನ್ನು ತುಂಬುವವನೇ ನಿಜವಾದ ಶಿಕ್ಷಕ ಎಂದು ಅಭಿಪ್ರಾಯಪಟ್ಟರು.

 

ಈ ಕಾರ್ಯಗಾರದಲ್ಲಿ ಶಿಕ್ಷಕರಿಗೆ ಮಂಜುಗಡ್ಡೆ ಕರಗಿಸುವ ಆಟ, ಮಾನವೀಯ ಸಂಬಂಧಗಳ ಕುರಿತು ತರಬೇತಿ ಹಾಗೂ ಶಿಕ್ಷಕ ಮತ್ತು ಮಕ್ಕಳ ಸಂಬಂಧದ ಕುರಿತು ವಿಶೇಷ ಉಪನ್ಯಾಸವನ್ನು ನೀಡಲಾಯ್ತು. ಕಾರ್ಯಗಾರವನ್ನು ರುಡ್‌ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕರಾದ ಶ್ರೀ ಎಮ್. ಜನಾರ್ಧನ್, ಉಪನ್ಯಾಸಕರುಗಳಾದ ಶ್ರೀ ಅಬ್ರಹಂ ಜೇಮ್ಸ್, ಶ್ರೀಮತಿ ಅನಸೂಯ ಹಾಗೂ ಸ್ಥಳೀಯ ಸಂಪನ್ಮೂಲ ವ್ಯಕ್ತಿ ಶ್ರೀಯುತ ಎಸ್. ಜಿ. ಭಟ್‌ರವರು ನೆರವೇರಿಸಿಕೊಟ್ಟರು. ನಿರ್ದೇಶಕರಾದ ಶ್ರೀ ವಿನಯ್ ಕುಮಾರ್ ಸಹಕರಿಸಿದರು. ಕಾರ್ಯಗಾರದಲ್ಲಿ ಆಂಗ್ಲ ಮಾಧ್ಯಮ ಶಾಲಾ 120 ಶಿಕ್ಷಕರು ಭಾಗವಹಿಸಿದ್ದರು.

 




More News

ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
 ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ
ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ

Comment Here