Sunday 11th, May 2025
canara news

ಡಾ| ರಜನಿ ವಿ.ಪೈ ಅವರಿಗೆ `ವಿಶ್ವಮಾನ್ಯ ಕನ್ನಡಿಗ ಪ್ರಶಸ್ತಿ-2019'

Published On : 19 Jun 2019   |  Reported By : Rons Bantwal


ಮುಂಬಯಿ,ಜೂ.17: ಕರ್ನಾಟಕ ಮೈಸೂರು ಅಲ್ಲಿನ ರೋಟರಿ ಸಭಾಂಗಣದಲ್ಲಿ ಗ್ರಾಮಾಂತರ ಬುದ್ಧಿಜೀವಿಗಳ ಬಳಗವು ಇತ್ತೀಚೆಗೆ (ಜೂ.09) ಆಯೋಜಿಸಿದ್ದ ಪ್ರೇಮಕವಿ ಕೆ.ಎಸ್.ನ ರಾಜ್ಯ ಮಟ್ಟದ ಸಾಹಿತ್ಯೋತ್ಸವ ಕಾರ್ಯಕ್ರಮದಲ್ಲಿ ಮುಂಬಯಿ ಅಲ್ಲಿನ ಹೆಸರಾಂತ ಸಮಾಜ ಸೇವಕಿ ಡಾ| ರಜನಿ ವಿ. ಪೈ ಇವರಿಗೆ ಹೊರನಾಡಿನ ಸಮಾಜ ಸೇವೆಗಾಗಿ "ವಿಶ್ವಮಾನ್ಯ ಕನ್ನಡಿಗ ಪ್ರಶಸ್ತಿ-2019"
ಪ್ರದಾನಿಸಿ ಗೌರವಿತು.

ಈ ಕಾರ್ಯಕ್ರಮದಲ್ಲಿ ನಾಡೋಜ ಡಾ| ಮಹೇಶ್ ಜೋಶಿ, ಡಾ| ಲತಾ ರಾಜಶೇಖರ್, ಡಾ| ಸಿ.ಪಿ.ಕೆ ಹಾಗೂ ಅನೇಕ ಹಿರಿಯ ಸಾಹಿತಿಗಳು, ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ಡಾ| ಭೇರ್ಯ ರಾಮಕುಮಾರ್ (ಅಧ್ಯಕ್ಷರು) ಪ್ರಶಸ್ತಿ ಪ್ರದಾನಿಸಿ ಅಭಿನಂದಿಸಿದರು.

ರಜನಿ ಪೈ ಅವರು ಕಳೆದ ಒಂದು ದಶಕದಿಂದ ಮುಂಬಯಿಯಲ್ಲಿನ ಅನೇಕ ಸಂಘ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಮಹಾನಗರದ ಹಿರಿಯ ಕನ್ನಡ ಸಂಸ್ಥೆಯಾದ ಮುಂಬಯಿ ಕನ್ನಡ ಸಂಘ (ಮಾಟುಂಗ) ಇದರ ಮಹಿಳಾ ವಿಭಾಗಧ್ಯಕ್ಷೆಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮುಂಬಯಿ ಮುಲುಂಡ್ ಪ್ರದೇಶದಲ್ಲಿ ನೆಲೆಸಿರುವ ಇವರು ಮಹಿಳೆ, ಮಕ್ಕಳಿಗಾಗಿ, ಬಡ ಮತ್ತು ದಲಿತರಿಗಾಗಿ ಅನೇಕ ಸಮಾಜಮುಖಿ ಕಾರ್ಯಕ್ರಮಗಳಲ್ಲಿ ತೊಡಗಿಸಿ ಕೊಂಡಿದ್ದಾರೆ.

ರಜನಿ ಪೈ ಅವರ ಸೇವೆಗಾಗಿ ಡಾಕ್ಟರೇಟ್, ಕರ್ನಾಟಕ ವಿಕಾಸ ರತ್ನ, ಸೌರಭ ರತ್ನ, ಕ್ರಿಯಾಶೀಲ ಕನ್ನಡತಿ, ಅಂತಾರಾಷ್ಟ್ರೀಯ ಗೋಲ್ಡನ್ ಅಚೀವ್ಮೆಂಟ್ ಪ್ರಶಸ್ತಿ ಹೀಗೆ ಅನೇಕ ಪುರಸ್ಕಾರಗಳು ದೊರೆತಿವೆ.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here