Sunday 11th, May 2025
canara news

ಪತ್ರಕರ್ತ ಮುಹಮ್ಮದ್ ಆರಿಫ್ ಅವರಿಗೆ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿ

Published On : 24 Jun 2019   |  Reported By : Rons Bantwal


ಮುಂಬಯಿ (ಮಂಗಳೂರು), ಜೂ.22: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮಾನವೀಯ ವೌಲ್ಯ ಮತ್ತು ಸೌಹಾರ್ದತೆಯನ್ನು ಬಿಂಬಿಸುವ ವರದಿಗೆ ನೀಡಲಾಗುವ ಸುಕೇಶ್ ಕುಮಾರ್ ದತ್ತಿನಿಧಿ ‘ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ವಿಜಯ ಕರ್ನಾಟಕ ಮಂಗಳೂರು ಆವೃತ್ತಿಯ ಹಿರಿಯ ವರದಿಗಾರ ಮುಹಮ್ಮದ್ ಆರಿಫ್ ಪಡುಬಿದ್ರಿ ಅವರು ಆಯ್ಕೆಯಾಗಿದ್ದಾರೆ.+

ವಿಜಯ ಕರ್ನಾಟಕದಲ್ಲಿ 2018, ಎಪ್ರಿಲ್ 9ರಂದು ಪ್ರಕಟಗೊಂಡ ‘ ಭಜನೋತ್ಸವಕ್ಕೆ ಮುಸ್ಲಿಂರಿಂದ ಅಕ್ಕಿ ಹೊರೆಕಾಣಿಕೆ ’ ವರದಿಗೆ ಚೊಚ್ಚಲ ಪ್ರಶಸ್ತಿ ಲಭಿಸಿದೆ. ಪ್ರಶಸ್ತಿಯು ರೂ. 5,001 ನಗದು, ಪ್ರಶಸ್ತಿ ಪತ್ರ ಮತ್ತು ಸ್ಮರಣಿಕೆಯನ್ನು ಒಳಗೊಂಡಿರುತ್ತದೆ.

ಮಂಗಳೂರು ಆಕಾಶವಾಣಿಯ ನಿವೃತ್ತ ನಿರ್ದೇಶಕರಾದ ಡಾ,ವಸಂತ ಕುಮಾರ್ ಪೆರ್ಲ ಮತ್ತು ಬೆಸೆಂಟ್ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥೆ ಸ್ಮಿತಾ ಶೆಣೈ ಅವರನ್ನೊಳಗೊಂಡ ತೀರ್ಪುಗಾರರ ಸಮಿತಿಯು ಈ ಆಯ್ಕೆ ನಡೆಸಿದೆ.

ಜುಲೈ1ರಂದು ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿರುವ ದ.ಕ. ಜಿಲ್ಲಾ ಪತ್ರಕರ್ತರ ಸಮ್ಮೇಳನದಲ್ಲಿ ರಾಜ್ಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಕಮಲ್ ಪಂತ್ ಪ್ರಶಸ್ತಿ ಪ್ರದಾನ ಮಾಡಲಿರುವರು ಎಂದು ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here