Thursday 25th, April 2024
canara news

ಮುಕ್ಕ ಚಚ್೯ನಲ್ಲಿ ಪರಿಸರ ದಿನಾಚರಣೆ

Published On : 09 Jul 2019   |  Reported By : Rons Bantwal


ಮುಂಬಯಿ (ಸುರತ್ಕಲ್),ಜು.08: ಕಥೊಲಿಕ್ ಸಭಾ ಮಂಗಳೂರು ಪ್ರದೇಶ, ಸುರತ್ಕಲ್ ವಲಯ ಮತ್ತು ಘಟಕಗಳ ವತಿಯಿಂದ ಪರಿಸರ ಜಾಗೃತಿ ಅಭಿಯಾನ-2019 ಪ್ರಯುಕ್ತ ಅರಣ್ಯ ಇಲಾಖೆಯ ಸಹಭಾಗಿತ್ವದೊಂದಿಗೆ ಪರಿಸರ ದಿನಾಚರಣೆ ಮುಕ್ಕ ಚಚ್೯ ವಠಾರದಲ್ಲಿ ನಡೆಯಿತು.

ಮಂಗಳೂರು ಧರ್ಮಪ್ರಾಂತ್ಯ ಶ್ರೇಷ್ಠ ಗುರು ಮ್ಯಾಕ್ಸಿಂ ಎಲ್. ನೊರೊನ್ಹಾ ಅಶೀರ್ವಚನಗೈದರು.

ಮುಖ್ಯ ಮಂತ್ರಿಗಳ ಸಂಸದೀಯ ಕಾರ್ಯದರ್ಶಿ ಐವನ್ ಡಿ'ಸೋಜಾ ಗೀಡ ನೆಡುವ ಮೂಲಕ ಪರಿಸರ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಮಂಗಳೂರು ಉತ್ತರ ಕ್ಷೇತ್ರ ಶಾಸಕ ಡಾ.ವೈ ಭರತ್ ಶೆಟ್ಟಿ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದರು.

ಕಿನ್ನಿಗೋಳಿ ವಲಯ ಅರಣ್ಯಾಧಿಕಾರಿ ಕೆ.ಸಿ ಮ್ಯಾಥ್ಯು ಪರಿಸರ ಸಂರಕ್ಷಣೆ ಮತ್ತು ಮಳೆ ನೀರು ಇಂಗಿಸುವಿಕೆ ಬಗ್ಗೆ ಮಾಹಿತಿ ನೀಡಿದರು.

ಕಥೋಲಿಕ್ ಸಭಾದ ಅಧ್ಯಾತ್ಮಿಕ ನಿರ್ದೇಶಕ ಮ್ಯಾಥ್ಯು ವಾಸ್, ಸುರತ್ಕಲ್ ವಲಯದ ಪಾವ್ಲ್ ಪಿಂಟೊ, ಅಧ್ಯಾತ್ಮಿಕ ನಿರ್ದೇಶಕ ಸಿರಿಲ್ ಪಿಂಟೊ, ಮಂಗಳೂರು ವಲಯ ಅರಣ್ಯಾಧಿಕಾರಿ ಪಿ.ಶ್ರೀಧರ್, ಮುಕ್ಕ ಚಚ್೯ ಸಮಿತಿಯ ಉಪಾಧ್ಯಕ್ಷ ರೋಶನ್ ಡಿಸೋಜ, ಕಾರ್ಯದರ್ಶಿ ಶೈಲಾ ಡಿಸೋಜ, ಕೇಂದ್ರೀಯ ಸಮಿತಿ ಅಧ್ಯಕ್ಷ ಪಾವ್ಲ್ ರೊಲ್ಫಿ ಡಿಕೊಸ್ತಾ, , ಮುಕ್ಕ ಘಟಕ ಅಧ್ಯಕ್ಷ ಸಂತೋಷ್ ಸಿಕ್ವೇರಾ, ಪರಿಸರ ಸಂರಕ್ಷಣಾ ಸಮಿತಿ ಸಂಚಾಲಕ ಹೆನ್ರಿ ವಾಲ್ಡರ್ ಉಪಸ್ಥಿತರಿದರು.

ಕಥೋಲಿಕ್ ಸಭಾ ಸುರತ್ಕಲ್ ವಲಯಾಧ್ಯಕ್ಷ ರಸ್ಸೆಲ್ ರೊಚ್ ಸ್ವಾಗತಿಸಿದರು. ಕೇಂದ್ರೀಯ ಕಾರ್ಯದರ್ಶಿ ನವೀನ್ ಬ್ರ್ಯಾಗ್ಸ್ ವಂದಿಸಿದರು. ಮುಕ್ಕ ಘಟಕ ಕಾರ್ಯದರ್ಶಿ ಫ್ಲೇವಿ ರೊಡ್ರಿಗಸ್ ಕಾರ್ಯಕ್ರಮ ನಿರೂಪಿಸಿದರು.




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here