Saturday 20th, April 2024
canara news

ಶಾಲಾ ಗ್ರಾಹಕ ಕ್ಲಬ್‍ಗಳ ಸಂಯೋಜಕ ಶಿಕ್ಷಕರಿಗೆ ಕಾರ್ಯಾಗಾರ.

Published On : 16 Jul 2019   |  Reported By : Media Release


ಜಿಲ್ಲಾ ಗ್ರಾಹಕ ಸಂಘಟನೆಗಳ ಒಕ್ಕೂಟವು ಶಾಲಾ ಗ್ರಾಹಕ ಕ್ಲಬ್‍ಗಳ ಸಂಯೋಜಕ ಶಿಕ್ಷಕರಿಗೆ ಒಂದು ದಿನದ ಕಾರ್ಯಾಗಾರವನ್ನು ತಾ| 11.07.2019ರಂದು ಏರ್ಪಡಿಸಿತ್ತು. ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರ ಕಚೇರಿಯಲ್ಲಿ ನಡೆದ ಈ ಕಾರ್ಯಾಗಾರದಲ್ಲಿ 38 ಶಾಲೆಗಳ ಸಂಯೋಜಕ ಶಿಕ್ಷಕರು ಪಾಲ್ಗೊಂಡಿದ್ದರು.

ಮುಖ್ಯ ಸಂಪನ್ಮೂಲ ಅತಿಥಿ ಗಳಾಗಿ ದಕ್ಷಿಣ ಕನ್ನಡ ಜಿಲ್ಲಾ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಕಛೇರಿ ಪ್ರಬಂಧಕರು ಶ್ರೀಮತಿ ಸುನಂದಾ ಅವರು ಭಾಗ ವಹಿಸಿದ್ದರು ಮತ್ತು ಮಾತನಾಡುತ್ತ ಆರ್‍ಟಿಐ ಬಗ್ಗೆ ಸಂಕ್ಷಿಪ್ತ ಮಾಹಿತಿ ನೀಡಿದರು. ಇನ್ನೋರ್ವ ಸಂಪನ್ಮೂಲ ವ್ಯಕ್ತಿ ಸುರತ್ಕಲ್ಲಿನ ಗೋವಿಂದ ದಾಸ ಕಾಲೇಜಿನ ಪ್ರೊ. ಪಿ ಕೃಷ್ಣ ಮೂರ್ತಿ ಅವರು ಭಾಗವಹಿಸಿ ಗ್ರಾಹಕರ ಹಕ್ಕುಗಳು, ವಿದ್ಯಾರ್ಥಿಗಳಿಗೆ ಗ್ರಾಹಕ ಶಿಕ್ಷಣದ ಅಗತ್ಯದ ಬಗ್ಗೆ ಮಾತನಾಡಿ ತಮ್ಮ ಅನುಭವಗಳನ್ನು ಹಂಚಿ ಕೊಂಡರು.

ಒಕ್ಕೂಟದ ಅಧ್ಯಕ್ಷರು ಶ್ರೀ ಎಂ.ಜೆ. ಸಾಲಿಯಾನ್ ಅವರು ಪ್ರಾಸ್ತಾವಿಕ ಮಾತನಾಡಿ ಸಂಯೋಜಕ ಶಿಕ್ಷಕರ ಕರ್ತವ್ಯ ಮತ್ತು ಹೊಣೆಗಾರಿಕೆಯ ಬಗ್ಗೆ ಮಾಹಿತಿಯನ್ನು ನೀಡಿದರು. ಶ್ರೀ ವಿಷ್ಣು ನಾಯಕ್ ಅವರು ಕ್ಲಬ್ ರಚನೆ, ನಿಯಮಗಳು, ಕಾರ್ಯಕ್ರಮ ಹಮ್ಮಿಕೊಳ್ಳುವುದು, ವರದಿ ತಯಾರಿ ಮೊದಲಾದ ವಿಚಾರಗಳ ಬಗ್ಗೆ ಮಾಹಿತಿ ಒದಗಿಸಿದರು. ಕೆಲವು ಶಿಕ್ಷಕರು ತಮ್ಮ ಅನುಭವಗಳನ್ನು ಹಂಚಿಕೊಂಡರು. ಇನ್ನರ್‍ವೀಲ್ ಮಂಗಳೂರು ಉತ್ತರ ಇದರ ಕಾರ್ಯದರ್ಶಿ ಶ್ರೀಮತಿ ವಸಂತಿ ಕಾಮತ್ ಕಾರ್ಯಾಗಾರದಲ್ಲಿ ಉಪಸ್ಥಿತ ರಿದ್ದರು. ಉಪ್ಪಿನಂಗಡಿ ಸರಕಾರಿ ಶಾಲೆಯ ಶಿಕ್ಷಕರು ಶ್ರೀ ಗುಡ್ಡಪ್ಪ ಬಲ್ಯ ಅವರು ಕಾರ್ಯಕ್ರಮ ನಿರ್ವಹಿಸಿದರು.




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here