Thursday 18th, April 2024
canara news

ಧರ್ಮಸ್ಥಳ: ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕೃಷಿ ಚಟುವಟಿಕೆಯಲ್ಲಿ ಖುಷಿ ಕಂಡ ವಿದ್ಯಾರ್ಥಿಗಳು

Published On : 16 Jul 2019   |  Reported By : Rons Bantwal

ಉಜಿರೆ: ಧರ್ಮಸ್ಥಳದಲ್ಲಿರುವ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಂಗಳವಾರ ವಿದ್ಯಾರ್ಥಿಗಳು ಕೃಷಿ ಕಾಯಕದಲ್ಲಿ ತೊಡಗಿ ಖುಷಿ ಪಡೆದರು.

ತುಳು ಹಾಡುಗಳು, ಕೋಲಾಟ, ಜಾನಪದ ಹಾಡುಗಳು, ಕೆಸರು ಗದ್ದೆಯಲ್ಲಿ ಮಕ್ಕಳ ಆಟ-ಓಟ ಇತ್ಯಾದಿ ಕೃಷಿ ಚಟುವಟಿಕೆಗಳಿಂದ ವಿದ್ಯಾರ್ಥಿಗಳು ಸಂತೋಷ, ಸಂಭ್ರಮ ಅನುಭವಿಸಿದರು.

ಪಾಠದ ಕಾಟವಿಲ್ಲ. ವಿದ್ಯಾರ್ಥಿಗಳು ಹಾಡಿ ಕುಣಿದರು. ಕುಣಿದು ಹಾಡಿದರು. ನೇಜಿ ನೆಟ್ಟರು. ಸಂದಿ-ಪಾಡ್ದನ ಹಾಡಿದರು.

ಹೇಮಾವತಿ ವಿ. ಹೆಗ್ಗಡೆಯವರು ಮತ್ತು ಸುಪ್ರಿಯಾ ಹಷೇಂದ್ರ ಕುಮಾರ್ ಮಕ್ಕಳ ಚಟುವಟಿಕೆಗಳನ್ನು ವೀಕ್ಷಿಸಿ ಅಭಿನಂದಿಸಿದರು.

ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಸೋಮಶೇಖರ ಶೆಟ್ಟಿ ಉಪಸ್ಥಿತರಿದ್ದರು.

ಶಾಲಾ ಮುಖ್ಯೋಪಾಧ್ಯಾಯಿನಿ ಪರಿಮಳ, ಎಂ.ವಿ. ನೇತೃತ್ವದಲ್ಲಿ ಶಿಕ್ಷಕ ವೃಂದದವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿ ಸಹಕರಿಸಿದರು.

More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here