Sunday 11th, May 2025
canara news

ದೆಹಲಿಯಲ್ಲಿ ಪೇಜಾವರಶ್ರೀ ವಿಶ್ವೇಶತೀರ್ಥ ಶ್ರೀಪಾದಂಗಳವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ಗುರುವಂದನೆ

Published On : 17 Jul 2019   |  Reported By : Ronida Mumbai


(ರೊನಿಡಾ ಮುಂಬಯಿ)

ಮುಂಬಯಿ, ಜು.16: ಗುರುಪೂರ್ಣಿಮೆಯ ಶುಭಾವಸರದಲ್ಲಿ ಜಗದ್ಗುರು ಶ್ರೀ ಮಧ್ವಾಚಾರ್ಯ ಮಹಾ ಸಂಸ್ಥಾನದ ಉಡುಪಿ ಶ್ರೀ ಪೇಜಾವರ ಅಧೋಕ್ಷಜ ಮಠಧೀಶ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ದೆಹಲಿಯಲ್ಲಿ ಮೊಕ್ಕಂ ಹೂಡಿದ್ದು, ಭಾರತ ರಾಷ್ಟ್ರದ ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆ ಮತ್ತು ಪಿಂಚಣಿ, ಅಣು ಇಂಧನ ಇಲಾಖೆ, ಬಾಹ್ಯಾಕಾಶ ಇಲಾಖೆ ಮತ್ತು ಎಲ್ಲ ಮಹತ್ವದ ನೀತಿ ವಿಚಾರಗಳ ಇತ್ಯಾದಿ ಖಾತೆಗಳ ಹೊಣೆ ವಹಿಸಿ ವಿಶ್ವಮಾನ್ಯ ಪ್ರಧಾನಿ ಹೆಸರಾಂತ ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಶ್ರೀಗಳಿಗೆ ಗುರುವಂದನೆ ಸಲ್ಲಿಸಿದರು.

ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ಕೇಂದ್ರೀಯ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರು ಮತ್ತು ಸೂಕ್ಷ ್ಮ, ಸಣ್ಣ ಮತ್ತು ಮಧ್ಯಮ ಉದ್ದಿಮೆ ಸಚಿವ ನಿತಿನ್ ಜೈರಾಮ್ ಗಡ್ಕರಿ, ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ (ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ) ಡಿ.ವಿ ಸದಾನಂದ ಗೌಡ, ಮಾಜಿ ಸಚಿವೆ ಉಮಾ ಭಾರತಿ, ಹರೀಶ್ ಪೆÇಕ್ರೈಲ್ ಸೇರಿದಂತೆ ನೂರಾರು ಗಣ್ಯರು ಆಗಮಿಸಿ ಗುರುವಂದನೆ ಸಲ್ಲಿಸಿದರು.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here