Sunday 11th, May 2025
canara news

ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮಂತ್ರಾಲಯಕ್ಕೆ ಭೇಟಿ

Published On : 04 Sep 2019   |  Reported By : Ronida Mumbai


(ಚಿತ್ರ / ವರದಿ : ರೊನಿಡಾ ಮುಂಬಯಿ)

ಮುಂಬಯಿ, ಸೆ.03: ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಇಂದಿಲ್ಲಿ ಮಂಗಳವಾರ ಮಹಾರಾಷ್ಟ್ರ ರಾಜ್ಯದ ಮುಖ್ಯಮಂತ್ರಿ ದೇವೇಂದ್ರ ಫಡ್ನಾವಿಸ್ ಅವರ ಭೇÉಟಿಗಾಗಿ ಮುಂಬಯಿಗೆ ಆಗಮಿಸಿದರು.

ಬೆಂಗಳೂರುನಿಂದ ಮುಂಬಯಿ ಸಹರ್ ಅಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಬಿಎಸ್ ವೈ ಜೊತೆ ಉಪಮುಖಮಂತ್ರಿ ಡಾ| ಸಿ.ಎನ್ ಅಶ್ವತ್ಥನಾರಾಯಣ ಮತ್ತು ಸಚಿವ ಬಸವರಾಜ ಬೊಮ್ಮಾಯ ಆಗಮಿಸಿದ್ದರು. ಮಹಾರಾಷ್ಟ್ರ ಎಂಎಲ್‍ಸಿ ಪ್ರಸಾದ್ ಲಾಡ್, ಎಂಎಸ್‍ಐಎಲ್ ಸಂಸ್ಥೆಯ ಹಿರಿಯ ಅಧಿಕಾರಿ ಪ್ರಶಾಂತ್ ಶೆಟ್ಟಿ ಪುಷ್ಫಗುಚ್ಛವಿತ್ತು ಸ್ವಾಗತಿಸಿದರು.

ಯಡಿಯೂರಪ್ಪ ನಿಯೋಗದೊಂದಿಗೆ ಮಹಾರಾಷ್ಟ್ರದ ವಿಧಾನಸಭೆ ಮಂತ್ರಾಲಯಕ್ಕೆ ತೆರಳಿದ್ದು, ಅಲ್ಲಿ ಸಂಪುಟ ಸಚಿವರು ಮತ್ತು ಸರಕಾರಿ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಫಡ್ನಾವಿಸ್ ಅವರು ಬರಮಾಡಿಕೊಂಡರು.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here