Saturday 10th, May 2025
canara news

ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಅವರ ನೆರೆ ಪರಿಹಾರ ನಿಧಿಗೆ ಎರಡು ಲಕ್ಷ ದೇಣಿಗೆ

Published On : 18 Sep 2019   |  Reported By : Rons Bantwal


ನೀಡಿದ ಬಂಟರ ಸಂಘ ಮುಂಬಯಿ-ಅಂಧೇರಿ ಬಾಂದ್ರ ಪ್ರಾದೇಶಿಕ ಸಮಿತಿ

ಮುಂಬಯಿ, ಸೆ.16: ಬಂಟರ ಸಂಘ ಮುಂಬಯಿ ಇದರ ಅಂಧೇರಿ ಬಾಂದ್ರ ಪ್ರಾದೇಶಿಕ ಸಮಿತಿ ಕಾರ್ಯಾಧ್ಯಕ್ಷ ಡಾ| ಆರ್.ಕೆ ಶೆಟ್ಟಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯದಾದ್ಯಂತ ಸೃಷ್ಟಿಯಾದ ನೆರೆ ಪ್ರವಾಹದಿಂದ ಸಂಕಷ್ಟಕ್ಕೊಳಗಾದ ಜನತೆಯ ಸಹಾಯಾರ್ಥ ಕರ್ನಾಟಕದ ಮುಖ್ಯಮಂತ್ರಿ ನೆರೆ ಪರಿಹಾರ ನಿಧಿಗೆ (ರಿಲೀಫ್ ಫಂಡ್‍ಗೆ) ಎರಡು ಲಕ್ಷ ರೂಪಾಯಿ ಮೊತ್ತವನ್ನು ಇಂದಿಲ್ಲಿ ನೀಡಲಾಯಿತು.

ಇಂದಿಲ್ಲಿ ಸೋಮವಾರ ಭೇಟಿಯಾದ ಡಾ| ಆರ್.ಕೆ ಶೆಟ್ಟಿ ನಿಯೋಗವು ಈ ಚೆಕ್‍ನ್ನು ರಾಜ್ಯದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಹಸ್ತಾಂತರಿಸಿತು. ಈ ಸಂದರ್ಭದಲ್ಲಿ ಅಂಧೇರಿ ಬಾಂದ್ರ ಪ್ರಾದೇಶಿಕ ಸಮಿತಿಯ ಗೌರವ ಕಾರ್ಯದರ್ಶಿ ರವಿ ಆರ್.ಶೆಟ್ಟಿ, ಜೊತೆ ಕಾರ್ಯದರ್ಶಿ ರಮೇಶ್ ಡಿ.ರೈ ಕಯ್ಯಾರು ಉಪಸ್ಥಿತರಿದ್ದರು.

ಕರ್ನಾಟಕ ರಾಜ್ಯದ ರಾಜಧಾನಿ ಮೆಂಗಳೂರು ಮಹಾನಗರದ ರವೀಂದ್ರ ಕಲಾ ಕ್ಷೇತ್ರದಲ್ಲಿ 2010ರ ನವೆಂಬರ್ 02ರಂದು ಅಂದಿನ ಕನ್ನಡ ಮತ್ತು ಸಂಸ್ಕೃತಿ, ವಾರ್ತಾ ಸಚಿವ ಗೋವಿಂದ್ ಕರಜೋಲ್ ಸಮ್ಮುಖದಲ್ಲಿ ತನ್ನ ಹಸ್ತಗಳಲ್ಲೇ 2010ರ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ಪ್ರದಾನಿಸಿದ್ದನ್ನು ಮುಖ್ಯಮಂತ್ರಿ ನೆನಪಿಸಿ ಹರ್ಷ ವ್ಯಕ್ತಪಡಿಸಿದರು.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here