Thursday 25th, April 2024
canara news

ಧರ್ಮಸ್ಥಳ ಭಜನಾ ತರಬೇತಿ ಶಿಬಿರ ಉದ್ಘಾಟನೆ

Published On : 18 Sep 2019   |  Reported By : Rons Bantwal


ಭಜನಾ ಸಂಸ್ಕøತಿಯಿಂದ ಸಭ್ಯ, ಸುಸಂಸ್ಕøತ ಆರೋಗ್ಯ ಪೂರ್ಣ ಸಮಾಜ ನಿರ್ಮಾಣ

ಉಜಿರೆ: ದೆವರ ಅನುಗ್ರಹಕ್ಕೆ ಪಾತ್ರರಾಗಲು ಭಜನೆ ಸರಳ ಮಾಧ್ಯಮವಾಗಿದೆ. ಭಜನಾ ಸಂಸ್ಕøತಿಯಿಂದ ಸಭ್ಯ, ಸುಸಂಸ್ಕøತ ಆರೋಗ್ಯಪೂರ್ಣ ಸಮಾಜ ನಿರ್ಮಾಣವಾಗುತ್ತದೆ ಎಂದು ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದ ಆಡಳಿತ ಧರ್ಮದರ್ಶಿ ಕೆ. ಸೂರ್ಯನಾರಾಯಣ ಉಪಾಧ್ಯಾಯ ಹೇಳಿದರು.

ಅವರು ಸೋಮವಾರ ಧರ್ಮಸ್ಥಳದಲ್ಲಿ ಇಪ್ಪತ್ತೊಂದನೆ ವರ್ಷದ ಭಜನಾ ತರಬೇತಿ ಶಿಬಿರ ಮತ್ತು ಸಂಸ್ಕøತಿ ಸಂವರ್ಧನಾ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಮುನುಷ್ಯ ಜನ್ಮ ಶ್ರೇಷ್ಠ ಅವಕಾಶವಾಗಿದ್ದು ಸತ್ಯ, ಸದಾಚಾರ ಮತ್ತು ಸತ್ಕಾರ್ಯಗಳೊಂದಿಗೆ ಸಾರ್ಥಕ ಜಿವನ ನಡೆಸಬೇಕು. ನವವಿಧ ಭಕ್ತಿಯಿಂದ ದೆವರ ಸ್ತುತಿ, ಆರಾಧನೆ ಮಾಡಬೇಕು. ದುಶ್ಚಟಗಳಿಂದ ದೂರವಿದ್ದು ಸತ್ಸಂಗದಿಂದ ಭಜನೆ ಮೂಲಕ ಉತ್ತಮ ಜೀವನ ನಡೆಸಬೇಕು ಎಂದು ಅವರು ಸಲಹೆ ನೀಡಿದರು.

ರಾಗ, ತಾಳ, ಲಯ ಬದ್ಧವಾಗಿ ಶಿಸ್ತಿನಿಂದ ಭಜನಾ ಸಂಸ್ಕøತಿ ಪ್ರಸಾರಕ್ಕೆ ಧರ್ಮಸ್ಥಳದ ಕೊಡುಗೆಯನ್ನು ಅವರು ಶ್ಲಾಘಿಸಿ ಅಭಿನಂದಿಸಿದರು.

ಮಾಣಿಲದ ಮೋಹನದಾಸ ಸ್ವಾಮೀಜಿ ಆಶೀರ್ವಚನ ನೀಡಿದರು.

ಅಧ್ಯಕ್ಷತೆ ವಹಿಸಿದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಭಜನೆಯಿಂದ ವ್ಯಕ್ತಿತ್ವದ ಸರ್ವತೋಮುಖ ಬೆಳವಣಿಗೆಯಾಗಿ ಸಾಮಾಜಿಕ ಪರಿವರ್ತನೆಯಾಗಬೇಕು. ಗ್ರಾಮಗಳಲ್ಲಿ ಸ್ವಚ್ಛತೆಯೊಂದಿಗೆ ಉತ್ತಮ ಸಂಸ್ಕಾರ ಮೂಡಿ ಬರಬೇಕು. ಭಜನಾ ಪಟುಗಳು ಆದರ್ಶ ನಾಯಕತ್ವದೊಂದಿಗೆ ಊರಿನ ಸರ್ವತೋಮುಖ ಪ್ರಗತಿಯ ರೂವಾರಿಗಳಾಗಬೇಕು ಎಂದು ಹೆಗ್ಗಡೆಯವರು ಕಿವಿ ಮಾತು ಹೇಳಿದರು.

ಹೇಮಾವತಿ ವಿ. ಹೆಗ್ಗಡೆ, ಡಿ. ಹರ್ಷೆಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್ ಉಪಸ್ಥಿತರಿದ್ದರು.

ಭಜನಾ ತರಬೇತಿ ಶಿಬಿರದ ಸಂಚಾಲಕ ಸುಬ್ರಹ್ಮಣ್ಯ ಪ್ರಸಾದ್ ಸ್ವಾಗತಿಸಿದರು. ಕಾರ್ಯದರ್ಶಿ ಮಮತಾ ರಾವ್ ಧನ್ಯವಾದವಿತ್ತರು. ಶ್ರೀನಿವಾಸ ರಾವ್ ಕಾರ್ಯಕ್ರಮ ನಿರ್ವಹಿಸಿದರು.

ಮುಖ್ಯಾಂಶಗಳು:
• 1920 ಭಜನಾ ಮಂಡಳಿಗಳ 3840 ಮಂದಿಗೆ ಕಳೆದ 20 ವರ್ಷಗಳಲ್ಲಿ ಭಜನಾ ತರಬೇತಿ ನೀಡಲಾಗಿದೆ.
• ಈ ಬಾರಿ 145 ಪುರುಷರು ಹಾಗೂ 105 ಮಹಿಳೆಯರು ತರಬೇತಿ ಶಿಬಿರದಲ್ಲಿ ಭಾಗವಹಸುತ್ತಿದ್ದಾರೆ.
• ಶಿಬಿರದಲ್ಲಿ ಉಪನ್ಯಾಸ, ಚರ್ಚೆ, ಚಿಂತನ ಮಂಥನ, ಯೋಗಾಭ್ಯಾಸ, ನಗರ ಭಜನೆಯೊಂದಿಗೆ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾದ ಚಟುವಟಿಕೆಗಳನ್ನು ಅಳವಡಿಸಲಾಗಿದೆ.
• ಇದೇ 22ರಂದು ಭಾನುವಾರ ಸಮಾರೋಪ ಸಮಾರಂಭ ಹಾಗೂ 500 ಭಜನಾ ಪಟುಗಳಿಂದ ನೃತ್ಯ ಭಜನೆ ನಡೆಯಲಿದೆ.




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here