ಪೇಜಾವರ ಸಭಾಗೃಹಲ್ಲಿ 22ನೇ ವಾರ್ಷಿಕ ಮಹಾಸಭೆ
ಮುಂಬಯಿ, ನ. 25: ಗಾಣಿಗ ಸಮಾಜ ಮುಂಬಯಿ (ರಿ) ಇದರ 22ನೇ ವಾರ್ಷಿಕ ಮಹಾಸಭೆಯು ಇದೇ ಬರುವ ತಾ.15.ಡಿಸೆಂಬರ್,2019ನೇ ರವಿವಾರ ಬೆಳಿಗ್ಗೆ 9.00 ಗಂಟೆಗೆ ಸರಿಯಾಗಿ ಶ್ರೀ ವಿಶ್ವೇಶ ತೀರ್ಥ ಸಭಾಗೃಹ, ಪೇಜಾವರ ಮಠ, ಮಧ್ವ ಭವನ, ಪ್ರಭಾತ್ ಕಾಲೊನಿ, ಸಾಂತಾಕ್ರೂಜ್ ಪೂರ್ವ, ಮುಂಬಯಿ ಇಲ್ಲಿ ಸಂಘದ ಅಧ್ಯಕ್ಷ ಕುತ್ಪಾಡಿ ರಾಮಚಂದ್ರ ಎಂ.ಗಾಣಿಗ ಅವರ ಅಧ್ಯಕ್ಷತೆಯಲ್ಲಿ ಜರುಗಲಿರುವುದು.
ಸದಸ್ಯರೆಲ್ಲರೂ ಕ್ಲಪ್ತ ಸಮಯಕ್ಕೆ ಹಾಜರಿದ್ದು, ಸಭೆಯನ್ನು ಯಶಸ್ವಿಗೊಳಿಸಬೇಕಾಗಿ ಆಡಳಿತ ಮಂಡಳಿ ಪರವಾಗಿ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್ ಆರ್.ಗಾಣಿಗ ಈ ಮೂಲಕ ವಿನಂತಿಸಿದ್ದಾರೆ.