ಮೋಹನ್ ಮಾರ್ನಾಡ್‍ಗೆ ನಾಟಕ ಅಕಾಡಮಿ ಪ್ರಶಸ್ತಿಪ್ರದಾನ-`ಮೋಹನ ತರಂಗ' ಕೃತಿ ಬಿಡುಗಡೆ
ಮುಂಬಯಿ, ನ.28: ಕರ್ನಾಟಕ ನಾಟಕ ಅಕಾಡಮಿ ಬೆಂಗಳೂರು, ಮುಂಬಯಿ ವಿಶ್ವವಿದ್ಯಾಲಯದ ಕನ್ನಡ ವಿಭಾಗ ಮತ್ತು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹೊರನಾಡ ಸಂಸ್ಥೆ ಕರ್ನಾಟಕ ಸಂಘ ಮುಂಬಯಿ ಜೊತೆಗೂಡಿ ನಾಳೆ ಶನಿವಾರ (ನ.30) ಅಪರಾಹ್ನ 2.30 ಗಂಟೆಗೆ ಸಾಂತಾಕ್ರೂಜ್ ಪೂರ್ವದ ಕಲೀನಾ ಕ್ಯಾಂಪಸ್‍ನ ವಿದ್ಯಾನಗರಿ ಅಲ್ಲಿನ ಕವಿವರ್ಯ ಡಾ| ಕುಸುಮಾಗ್ರಜ ಮರಾಠಿ ಭಾಷಾ ಭವನದಲ್ಲಿ ಆಯೋಜಿಸಿರುವ ಸಮಾರಂಭದಲ್ಲಿ ಮುಂಬಯಿಯ ಹೆಸರಾಂತ ರಂಗನಟ ಮೋಹನ್ ಮಾರ್ನಾಡ್ ಅವರಿಗೆ `ಕರ್ನಾಟಕ ನಾಟಕ ಅಕಾಡಮಿ ಪ್ರಶಸ್ತಿ-2018' ಪ್ರದಾನಿಸಲಿದ್ದಾದೆ ಎಂದು ಕರ್ನಾಟಕ ನಾಟಕ ಅಕಾಡಮಿಯ ರಿಜಿಸ್ಟ್ರಾರ್ ಡಾ| ಶೈಲಜಾ ಎ.ಸಿ ತಿಳಿಸಿದ್ದಾರೆ.
ಕರ್ನಾಟಕ ಸಂಘ ಮುಂಬಯಿ ಅಧ್ಯಕ್ಷ ಮನೋಹರ ಎಂ.ಕೋರಿ ಅಧ್ಯಕ್ಷತೆಯಲ್ಲಿ ನಡೆಯಲಿರು ಸಮಾರಂಭದಲ್ಲಿ ಮುಖ್ಯ ಅತಿಥಿüಯಾಗಿ ಕರ್ನಾಟಕ ನಾಟಕ ಅಕಾಡಮಿಯ ಪೂರ್ವಾಧ್ಯಕ್ಷ, ಹಿರಿಯ ರಂಗತಜ್ಞ ಜೆ.ಲೋಕೇಶ್ ಗೌರವ್ವಾನಿತ ಅತಿಥಿüಗಳಾಗಿ ಬೋಂಬೆ ಬಂಟ್ಸ್ ಎಸೋಸಿಯೇಶನ್ ಹಾಗೂ ಜವಾಬ್ ಸಂಸ್ಥೆಗಳ ಮಾಜಿ ಅಧ್ಯಕ್ಷ ಎನ್.ಸಿ ಶೆಟ್ಟಿ, ಅಖಿಲ ಭಾರತ ತುಳು ಒಕ್ಕೂಟದ ಅಧ್ಯಕ್ಷ ಧರ್ಮಪಾಲ ಯು.ದೇವಾಡಿಗ, ರಂಗತಜ್ಞ ಡಾ| ಬಿ.ಆರ್ ಮಂಜುನಾಥ್, ಚಲನಚಿತ್ರ ನಿರ್ಮಾಪಕ ಮಹೇಶ್ ತಲಕಾಡ್, ನೀನಾಸಂ ಸಂಸ್ಥೆಯ ರಂಗ ನಿರ್ದೇಶಕ ಎಂ.ಗಣೇಶ್ ಆಗಮಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ ಇದರ ಕಾರ್ಯಕಾರಿ ಸಮಿತಿ ಸದಸ್ಯೆ, ಪ್ರಶಸ್ತಿ ಪುರಸ್ಕೃತ ಲೇಖಕಿ, ಕವಯತ್ರಿ ಅನಿತಾ ಪಿ.ಪೂಜಾರಿ ತಾಕೋಡೆ ರಚಿತ ಕೃತಿ ಮೋಹನ್ ಮಾರ್ನಾಡ್ ಅವರ ಜೀವನ ಕಥನ `ಮೋಹನ ತರಂಗ' ಕೃತಿ ಬಿಡುಗಡೆ ಗೊಳಿಸಲಾಗುವುದು. ರಂಗ ಕಲಾವಿದ ಅವಿನಾಶ್ ಕಾಮತ್ ಕೃತಿ ಪರಿಚಯಿಸಲಿದ್ದು, ಕರ್ನಾಟಕ ಸಂಘದ ಮಾಜಿ ಉಪಾಧ್ಯಕ್ಷ ಡಾ| ಭರತ್‍ಕುಮಾರ್ ಪೆÇಲಿಪು ರಚಿತ ಮೋಹನ್ ಮಾರ್ನಾಡ್ ಅವರ ಜೀವನಾಧಾರಿತ ಸಾಕ್ಷ ್ಯ ಪ್ರದರ್ಶಿಸಲಾಗುವುದು ಎಂದು ಮುಂಬಯಿ ವಿವಿ ಕನ್ನಡದ ವಿಭಾಗದ ಮುಖ್ಯಸ್ಥ ಡಾ| ಜಿ.ಎನ್ ಉಪಾಧ್ಯ ತಿಳಿಸಿದ್ದಾರೆ.
ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಮುಂಬಯಿ ಮಹಾನಗರದ ಎಲ್ಲಾ ತುಳು-ಕನ್ನಡ, ಸಾಹಿತ್ಯ ಹಾಗೂ ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕರ್ನಾಟಕ ಸಂಘದ ಗೌರವ ಕಾರ್ಯದರ್ಶಿ ಓಂದಾಸ್ ಕಣ್ಣಂಗಾರ್ ಈ ಮೂಲಕ ತಿಳಿಸಿದ್ದಾರೆ.