ಮುಂಬಯಿ, ಡಿ.30: ಬಂಟರ ಸಂಘ ಮುಂಬಯಿ ಇದರ ಅಂಧೇರಿ-ಬಾಂದ್ರಾ ಪ್ರಾದೇಶಿಕ ಸಮಿತಿಯು 2020ನೇ ನೂತನ ವರ್ಷ ಹಾಗೂ ವೈಕುಂಠ ಏಕಾದಶಿಯ ಪವಿತ್ರ ದಿನದ ಶುಭ ಮಹೂರ್ತದಲ್ಲಿ ಸಮಸ್ತ ಬಂಟ ಬಾಂಧವರು ಮತ್ತು ತುಳು ಕನ್ನಡಿಗರ ಕಲ್ಯಾಣಾರ್ಥವಾಗಿ ಇದೇ ಬರುವ ಜ.06ನೇ ಸೋಮವಾರ ಅಪರಾಹ್ನ 3.30 ಗಂಟೆಯಿಂದ ಕುರ್ಲಾ ಪೂರ್ವದ ಬಂಟರ ಭವನದ ಶ್ರೀಮತಿ ರಾಧಾಬಾಯಿ ಟಿ.ಭಂಡಾರಿ ಸಭಾಗೃಹದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ಧಾರ್ಮಿಕ ಕಾರ್ಯಕ್ರಮ ವಿಜೃಂಭಣೆಯಿಂದ ಜರಗಿಸಲಿದೆ.
Padmanabh S Payyade Ikala Harish Shetty
Ashok Shetty Dr R K Shetty
ಬಂಟರ ಸಂಘ ಮುಂಬಯಿ ಅಧ್ಯಕ್ಷ ಪದ್ಮನಾಭ ಎಸ್.ಪಯ್ಯಡೆ ಹಾಗೂ ಪದಾಧಿಕಾರಿಗಳ ಮಾರ್ಗದರ್ಶನದ ಲ್ಲಿ ಸಂಘದ ಅಂಧೇರಿ-ಬಾಂದ್ರಾ ಪ್ರಾದೇಶಿಕ ಸಮಿತಿ ಕಾರ್ಯಾಧ್ಯಕ್ಷ ಡಾ| ಆರ್.ಕೆ ಶೆಟ್ಟಿ ಮತ್ತು ಪದಾಧಿಕಾರಿಗಳ ನೇತೃತ್ವದಲ್ಲಿ ಈ ಧಾರ್ಮಿಕ ಕಾರ್ಯಕ್ರಮ ಸಂಯೋಜಿಸಿದೆ. ಅಧ್ಯಕ್ಷ ಪದ್ಮನಾಭ ಎಸ್.ಪಯ್ಯಡೆ ಅವರ ಅಧ್ಯಕ್ಷತೆಯಲ್ಲಿ ಜರುಗುವ ಧಾರ್ಮಿಕ ಸಭೆಯಲ್ಲಿ ಮುಖ್ಯ ಅತಿಥಿsಯಾಗಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಗೌರವ ಅತಿಥಿsಯಾಗಿ ಹೊಟೇಲ್ ಶಾರದಾ ದಾದರ್ ಇದರ ಅಶೋಕ್ ಎನ್.ಶೆಟ್ಟಿ ಆಗಮಿಸಲಿದ್ದಾರೆ ಎಂದು ಸಂಘದ ಉಪಾಧ್ಯಕ್ಷ ಚಂದ್ರಹಾಸ ಕೆ.ಶೆಟ್ಟಿ, ಗೌ| ಪ್ರ| ಕಾರ್ಯದರ್ಶಿ ಸಿಎ| ಸಂಜೀವ ಶೆಟ್ಟಿ, ಗೌ| ಕೋಶಾಧಿಕಾರಿ ಪ್ರವೀಣ್ ಬಿ.ಶೆಟ್ಟಿ, ಜತೆ ಕಾರ್ಯದರ್ಶಿ ಮಹೇಶ್ ಎಸ್.ಶೆಟ್ಟಿ, ಜತೆ ಕೋಶಾಧಿಕಾರಿ ಗುಣಪಾಲ್ ಶೆಟ್ಟಿ ಐಕಳ ತಿಳಿಸಿದ್ದಾರೆ.
ಬಂಟರ ಸಂಘದ ಜ್ಞಾನ ಮಂದಿರ ಸಮಿತಿ ಕಾರ್ಯಧ್ಯಕ್ಷ ರವೀಂದ್ರನಾಥ ಎಂ.ಭಂಡಾರಿ, ಮಾಜಿ ಅಧ್ಯಕ್ಷ ಪ್ರಭಾಕರ ಎಲ್.ಶೆಟ್ಟಿ, ಚಂದ್ರಹಾಸ ಕೆ.ಶೆಟ್ಟಿ, ರಘುರಾಮ ಶೆಟ್ಟಿ ಬೋಳ, ಅಪ್ಪಣ್ಣ ಎಂ.ಶೆಟ್ಟಿ, ಉಳ್ತೂರು ಮೋಹನದಾಸ್ ಶೆಟ್ಟಿ, ರತ್ನಾಕರ ಶೆಟ್ಟಿ ಮುಂಡ್ಕೂರು, ಬಾಲಕೃಷ್ಣ ಶೆಟ್ಟಿ, ಜಗನ್ನಾಥ ಎನ್.ರೈ, ಕರುಣಾಕರ ಎಂ.ಶೆಟ್ಟಿ, ಪಾಂಡುರಂಗ ಎಸ್.ಶೆಟ್ಟಿ ಮತ್ತಿತರ ಗಣ್ಯರ ಸಹಕಾರ ಮತ್ತು ಸಂಘದ ಅಂಧೇರಿ-ಬಾಂದ್ರಾ ಪ್ರಾದೇಶಿಕ ಸಮಿತಿ ಕಾರ್ಯಾಧ್ಯಕ್ಷ ಡಾ| ಆರ್.ಕೆ ಶೆಟ್ಟಿ ಇವರ ಸಾರಥ್ಯ ಹಾಗೂ ಪಶ್ಚಿಮ ವಲಯ ಸಂಚಾಲಕ ಡಾ| ಪ್ರಭಾಕರ್ ಶೆಟ್ಟಿ ಬೋಳ, ಉಪ ಕಾರ್ಯಾಧ್ಯಕ್ಷ ನ್ಯಾಯವಾದಿ ಆರ್.ಜಿ ಶೆಟ್ಟಿ, ಕೋಶಾಧಿಕಾರಿ ಕೆ.ವಿ ಶೆಟ್ಟಿ, ಜತೆ ಕಾರ್ಯದರ್ಶಿ ರಮೇಶ್ ಡಿ.ರೈ ಕಯ್ಯಾರು, ಜೊತೆ ಕೋಶಾಧಿಕಾರಿ ಪ್ರಸಾದ್ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ರಂಜನಿ ಸುಧಾಕರ್ ಹೆಗ್ಡೆ, ಯುವ ವಿಭಾಗದ ಕಾರ್ಯಾಧ್ಯಕ್ಷ ಶರತ್ ವಿಜಯ್ ಶೆಟ್ಟಿ, ಪ್ರಾದೇಶಿಕ ಸಮಿತಿ ಮಹಿಳಾ ವಿಭಾಗಧ್ಯಕ್ಷೆ ವನಿತಾ ವೈ.ನೋಂಡಾ, ಯುವ ವಿಭಾಗದ ಕಾರ್ಯಾಧ್ಯಕ್ಷ ಅಭಿಷೇಕ್ ಶೆಟ್ಟಿ, ಪ್ರಾದೇಶಿಕ ಸಮಿತಿ ಸಮಾಜ ಕಲ್ಯಾಣ ಸಮಿತಿ ಸಮಾಜ ಕಲ್ಯಾಣ ಸಮಿತಿ ಕಾರ್ಯಾಧ್ಯಕ್ಷ ಪ್ರಭಾಕರ ಶೆಟ್ಟಿ ನಾನಯರ ಗರಡಿ, ನಿಧಿ ಸಂಗ್ರಹ ಸಮಿತಿ ಕಾರ್ಯಾಧ್ಯಕ್ಷ ಯಶವಂತ ಶೆಟ್ಟಿ, ಸದಸ್ಯತ್ವ ಸಮಿತಿ ಕಾರ್ಯಾಧ್ಯಕ್ಷ ಲಕ್ಷ್ಮಣ್ ಶೆಟ್ಟಿ, ಸಾಂಸ್ಕೃತಿಕ ಸಮಿತಿ ಕಾರ್ಯಾಧ್ಯಕ್ಷೆ ಸವಿತಾ ಶೆಟ್ಟಿ, ಕ್ರೀಡಾ ಸಮಿತಿ ಕಾರ್ಯಾಧ್ಯಕ್ಷ ಸೂರಜ್ ಶೆಟ್ಟಿ, ವೈವಾಹಿಕ ಸಮಿತಿ ಕಾರ್ಯಾಧ್ಯಕ್ಷ ಕೃಷ್ಣ ಶೆಟ್ಟಿ, ದತ್ತು ಸ್ವೀಕಾರ ಸಮಿತಿ ಕಾರ್ಯಾಧ್ಯಕ್ಷ ಸತೀಶ್ ಶೆಟ್ಟಿ, ಉದ್ಯೋಗ ಸಮಿತಿ ಕಾರ್ಯಾಧ್ಯಕ್ಷ ಪ್ರಕಾಶ್ ಆಳ್ವ, ವೈದ್ಯಕೀಯ ಸಮಿತಿ ಕಾರ್ಯಾಧ್ಯಕ್ಷ ಆನಂದ್ ಶೆಟ್ಟಿ ಸಹಯೋಗದಲ್ಲಿ ನೆರವೇರಲಿರುವ ಸಪ್ತಗಿರೀಶ ಶ್ರೀನಿವಾಸನ ಈ ಧಾರ್ಮಿಕ ಮಂಗಳ ಉತ್ಸವದಲ್ಲಿ ಭಗವದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕೃಪಾರ್ಥರಾಗಬೇಕೆಂದು ಸಂಘದ ಅಂಧೇರಿ-ಬಾಂದ್ರಾ ಪ್ರಾದೇಶಿಕ ಸಮಿತಿಯ ಗೌರವ ಕಾರ್ಯದರ್ಶಿ ರವಿ ಆರ್.ಶೆಟ್ಟಿ ಮತ್ತು ಸಮಿತಿ ಸದಸ್ಯರು ಈ ಮೂಲಕ ತಿಳಿಸಿದ್ದಾರೆ.