ಕಾರ್ಕಳ ತಾಲ್ಲೂಕಿನ ಸಾಣೂರು ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಗ್ರಾಹಕ ಮಾಹಿತಿ ಕಾರ್ಯಕ್ರಮ ಜನವರಿ 2, 2019 ರಂದು ನಡೆಯಿತು. ಮೂಡುಬಿದಿರೆಯ ಗ್ರಾಹಕ ಸಂಘಟನೆಯ ಅಧ್ಯಕ್ಷ, ರಾಜ್ಯ ಸಂಪನ್ಮೂಲ ವ್ಯಕ್ತಿ, ದ.ಕ.ಜಿಲ್ಲಾ ಗ್ರಾಹಕ ಸಂಘಟನೆ ಒಕ್ಕೂಟದ ಜತೆ ಕಾರ್ಯದರ್ಶಿ ರಾಯೀ ರಾಜಕುಮಾರರು ತಮ್ಮ 353 ನೇ ಮಾಹಿತಿ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಅವರು ತಮ್ಮ ಮಾಹಿತಿ ಕಾರ್ಯಕ್ರಮದಲ್ಲಿ ಬಳಕೆದಾರರ ಹಿತ ರಕ್ಷಣಾ ಕಾಯಿದೆಯ ಎಲ್ಲಾ ಅಂಶಗಳನ್ನೂ ತಿಳಿಸಿಕೊಟ್ಟರು. ಗ್ರಾಹಕ ಹಕ್ಕು ಹಾಗೂ ಕರ್ತವ್ಯಗಳ ಸಂಪೂರ್ಣ ಮಾಹಿತಿಯನ್ನು ಹಲವಾರು ಉದಾಹರಣೆಗಳ ಮೂಲಕ ಪ್ರಸ್ತುತ ಪಡಿಸಿದರು. ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಕೇಳಿದ ಹಲವಾರು ಪ್ರಶ್ನೆಗಳಿಗೆ ಸೂಕ್ತ ಉತ್ತರವನ್ನು ನೀಡಿ ಸಮಗ್ರ ಮಾರ್ಗದರ್ಶನ ಇತ್ತರು. ನ್ಯಾಯ, ನಿಷ್ಠೆ, ಪ್ರಾಮಾಣಿಕತೆಯಿಂದ ವ್ಯವಹರಿಸುವಂತೆ, ಲಂಚ ರಹಿತವಾಗಿ ಬದುಕುವಂತೆ ಹಾಗೂ ಇತರರಿಗೆ ಸಾಧ್ಯವಿದ್ದಷ್ಟು ಸಹಾಯ ಮಾಡುವಂತೆ ಕೇಳಿಕೊಂಡರು.
ವೇದಿಕೆಯಲ್ಲಿ ಶಾಲೆಯ ಎಲ್ಲಾ ಶಿಕ್ಷಕ ಬಂಧುಗಳೂ, ಹಾಜರಿದ್ದರು. ಶಾಲಾ ಶಿಕ್ಷಕ ಜಾನ್ ವಾಲ್ಟರ್ ಸ್ವಾಗತಿಸಿದರು. ಹಿರಿಯ ಶಿಕ್ಷಕ ಬಾಬು ಪೂಜಾರಿಯವರು ವಂದಿಸಿದರು. ವಿದ್ಯಾರ್ಥಿಗಳಿಗೆ ಗ್ರಾಹಕ ಛಾಯಾ ಪತ್ರಿಕೆಯನ್ನು ಉಚಿತವಾಗಿ ವಿತರಿಸಲಾಯಿತು.