Saturday 20th, April 2024
canara news

ಧರ್ಮಸ್ಥಳದಲ್ಲಿ ಧರ್ಮಶ್ರೀ ನೂತನ ವಿಸ್ತøತ ಕಟ್ಟಡ ಉದ್ಘಾಟನೆ

Published On : 28 Jan 2020   |  Reported By : Rons Bantwal


ಧರ್ಮಸ್ಥಳದ ಸೇವಾ ಕಾರ್ಯಗಳಿಂದ ಸರ್ಕಾರಕ್ಕೆ ಪ್ರೇರಣೆ-ಡಿ.ವಿ ಸದಾನಂದ ಗೌಡ

ಮುಂಬಯಿ (ಉಜಿರೆ), ಜ.24: ಸ್ವಾತಂತ್ರ್ಯ ಆಂದೋಲನದ ರೀತಿಯಲ್ಲಿ ಸ್ವಚ್ಛತಾ ಅಭಿಯಾನ ಆಂದೋಲನವಾಗಿ ಸ್ವಚ್ಛ ಭಾರತದ ಕನಸು ನನಸಾಗಬೇಕು. ಸೈನಿಕರು ದೇಶದ ರಕ್ಷಣೆ ಮಾಡಿದಂತೆ ನಾವು ಸಮಾಜದ ರಕ್ಷಣೆ ಮಾಡೋಣ ಎಂದು ಕೇಂದ್ರ ಸರ್ಕಾರದ ರಾಸಾಯನಿಕ ಮತ್ತು ಗೊಬ್ಬರ ಖಾತೆ ಸಚಿವ ಡಿ.ವಿ. ಸದಾನಂದ ಗೌಡ ಹೇಳಿದರು. ಧರ್ಮಸ್ಥಳದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ಆಡಳಿತ ಕಚೇರಿ

ಧರ್ಮಶ್ರೀ ನೂತನ ವಿಸ್ತøತ ಕಟ್ಟಡವನ್ನು ಶುಕ್ರವಾರ ಅವರು ಉದ್ಘಾಟಿಸಿ ಮಾತನಾಡಿ ಕೇವಲ ರಸ್ತೆ, ಆಸ್ಪತ್ರೆ, ಶಾಲೆ ಅಭಿವೃದ್ಧಿ ಆದರೆ ಅದು ಪ್ರಗತಿಯ ದ್ಯೋತಕವಲ್ಲ. ಪ್ರತಿಯೊಬ್ಬ ವ್ಯಕ್ತಿಯೂ ಸ್ವ-ಸಾಮಥ್ರ್ಯದಿಂದ, ಸರ್ಕಾರದ ಹಂಗಿಲ್ಲದೆ ಸಮಾಜದ ಸತ್ವಯುತ ಶಕ್ತಿಯಾಗಿ ಬೆಳೆದರೆ ಅದು ನಿಜವಾದ ಪ್ರಗತಿಯಾಗಿದೆ. ಸಮಾಜದ ಅಭಿವೃದ್ಧಿಯ ಮೂಲಮಂತ್ರ ಆಗಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅದ್ಭುತ ಯೋಜನೆಯಾಗಿದ್ದು ಸರ್ಕಾರ ಕೂಡಾ ಹೆಗ್ಗಡೆಯವರಿಂದ ಮಾರ್ಗದರ್ಶನ, ಪ್ರೇರಣೆ ಪಡೆಯುತ್ತದೆ. ಧರ್ಮಸ್ಥಳ ದ ಗ್ರಾಮಾಭಿವೃದ್ಧಿ ಯೋಜನೆ ಮಹಿಳಾ ಸಬಲೀಕರಣದೊಂದಿಗೆ ಗ್ರಾಮೀಣ ಪ್ರದೇಶದ ಸರ್ವತೋಮುಖ ಪ್ರಗತಿಯೊಂದಿಗೆ ಸಾಮಾಜಿಕ ಸಾಮರಸ್ಯದ ಜೀವನಕ್ಕೆ ಪ್ರೇರಕ ಶಕ್ತಿಯಾಗಿದೆ. ಮಾನವೀಯ ಸಂಬಂಧವೂ ಬೆಳೆಯುತ್ತದೆ ಎಂದರು.

ತ್ಯಾಜ್ಯ ಸಂಗ್ರಹಣಾ ಬುಟ್ಟಿಗಳನ್ನು ವಿತರಿಸಿದ ಮುಜರಾಯಿ ಮತ್ತು ಮೀನುಗಾರಿಕಾ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಸರ್ಕಾರದ ಜನಮಂಗಳ ಕಾರ್ಯಗಳಿಗೆ ಹೆಗ್ಗಡೆಯವರೇ ಪ್ರೇರಕ ಶಕ್ತಿಯಾಗಿದ್ದಾರೆ. ಧರ್ಮಸ್ಥಳದ ಮಾದರಿಯಲ್ಲೆ ಎಪ್ರಿಲ್ 26 ರಂದು ರಾಜ್ಯದ 110 ದೇವಸ್ಥಾನಗಳಲ್ಲಿ ಸರ್ಕಾರದ ವತಿಯಿಂದ ಸಾಮೂಹಿಕ ವಿವಾಹ ನಡೆಸಲಾಗುವುದು. ಯಾವುದಾದರೂ ಒಂದು ದೇವಸ್ಥಾನದ ಸಾಮೂಹಿಕ ವಿವಾಹಕ್ಕೆ ಹೆಗ್ಗಡೆಯವರು ಮತ್ತು ಹೇಮಾವತಿ ಹೆಗ್ಗಡೆಯವರು ಬಂದು ಆಶೀರ್ವದಿಸಬೇಕು ಎಂದು ಸಚಿವರು ಅವರನ್ನು ಆಮಂತ್ರಿಸಿದರು.

ಎಲ್ಲಾ ದೇವಸ್ಥಾನಗಳಲ್ಲಿ ಸ್ವಚ್ಛತೆಯನ್ನು ಕಾಪಾಡುವುದರೊಂದಿಗೆ, ಸುಂದರವಾಗಿದ್ದು ಭಕ್ತರನ್ನು ಆಕರ್ಷಿಸುವ ಕೇಂದ್ರಗಳಾಗಬೇಕು ಎಂದು ಅವರು ಸಲಹೆ ನೀಡಿದರು. ಜಲಾಭಿಷೇಕ ಯೋಜನೆ: ನೂತನ ಜಲಾಭಿಷೇಕ ಯೋಜನೆಯಡಿ ರಾಜ್ಯದಲ್ಲಿ ದೇವಸ್ಥಾನಗಳ ಬಳಿ ಇರುವ ಕೆರೆಗಳನ್ನು (ಪುಷ್ಕರಣಿ) ಧಾರ್ಮಿಕ ದತ್ತಿ ಇಲಾಖೆ ವತಿಯಿಂದ ಶುಚೀಕರಣಗೊಳಿಸಲಾಗುವದು ಎಂದು ಸಚಿವರು ಪ್ರಕಟಿಸಿದರು.

ಅಧ್ಯಕ್ಷತೆ ವಹಿಸಿದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಮಾತನಾಡಿ, ರಾಜ್ಯದೆಲ್ಲೆಡೆ 1500 ಮಂದಿ ಸೇವಾ ಪ್ರತಿನಿಧಿಗಳು ಸೇವೆ ಮಾಡಿ ಯೋಜನೆಯನ್ನು ಯಶಸ್ವಿಗೊಳಿಸಿದ್ದಾರೆ. ಜನರ ವ್ಯಕ್ತಿತ್ವದಲ್ಲಿ, ಜೀವನ ಶೈಲಿಯಲ್ಲಿ ಸುಧಾರಣೆಯಾಗಿ ಸಾಮಾಜಿಕ ಪರಿವರ್ತನೆಯಾಗಿದೆ. ದುಶ್ಚಟಗಳು ದೂರವಾಗಿವೆ. ಶುಚಿತ್ವದ ಕಲ್ಪನೆ ಸಾರ್ವತ್ರಿಕವಾಗಿ ಮೂಡಿ ಬಂದಿದೆ. ಫಲಾನುಭವಿಗಳೆಲ್ಲ ಪ್ರಗತಿಯ ಹರಿಕಾರರಾಗಿ ಯೋಜನೆಯ ಯಶಸ್ಸಿನ ಪಾಲುದಾರರಾಗಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಜನಮಂಗಳ ಕಾರ್ಯಕ್ರಮದಡಿಯಲ್ಲಿ ವಿಶೇಷ ಚೇತನರಿಗೆ ಶಾಸಕ ಹರೀಶ್ ಪೂಂಜ ಸಲಕರಣೆಗಳನ್ನು ವಿತರಿಸಿ
ಮಾತನಾಡಿ ಭಜನಾ ಮಂದಿರಗಳಲ್ಲಿ ಮೂಲ ದಾಖಲೆಗಳು ಇಲ್ಲದ ಕಾರಣ ಅಡಚಣೆಯಾಗುತ್ತಿದೆ. ಈ ದಿಸೆಯಲ್ಲಿ ಸಚಿವರು ಸೂಕ್ತ ಸಹಕಾರ ನೀಡಬೇಕು ಎಂದು ಕೋರಿದರು.

ಆಶಯ ಭಾಷಣ ಮಾಡಿದ ಹೇಮಾವತಿ ವಿ.ಹೆಗ್ಗಡೆ ಅವರು, ಸಾರ್ವಜನಿಕರು ಸಂವೇದನಾಶೀಲರಾಗಿ, ಆಯಾ ಊರಿನ ದೇವಸ್ಥಾನಗಳು, ನದಿಗಳು ಹಾಗೂ ಕೆರೆಗಳನ್ನು ಸ್ವಚ್ಛವಾಗಿರಿಸುವ ಬಗ್ಯೆ ಗಮನ ಹರಿಸಬೇಕು ಎಂದು ಸಲಹೆ ನೀಡಿದರು. ಶುದ್ಧ ಗಾಳಿ, ನೀರು ಮತ್ತು ಸ್ವಚ್ಛ ಪರಿಸರ ನಮ್ಮ ಆರೋಗ್ಯ ರಕ್ಷಣೆಗೆ ಅತಿ ಅಗತ್ಯ ಎಂದು ಹೇಳಿದರು.
ಧರ್ಮಸ್ಥಳ ವಲಯದ 9 ಒಕ್ಕೂಟಗಳ ಪದಗ್ರಹಣ ಸಮಾರಂಭ ನಡೆಯಿತು. ಕಟ್ಟಡ ನಿರ್ಮಾಣದ ರೂವಾರಿ ಡಿ. ಹರ್ಷೇಂದ್ರ ಕುಮಾರ್, ವಾಸ್ತು ಶಿಲ್ಪಿ ಬ್ರಹ್ಮೆ ಮತ್ತು ಗೋಪಾಲ ಮೆನನ್ ಅವರನ್ನು ಗೌರವಿಸಲಾಯಿತು. ಡಾ| ಎಲ್.ಹೆಚ್ ಮಂಜುನಾಥ್ ಸ್ವಾಗತಿಸಿದರು. ಪ್ರಾದೇಶಿಕ ನಿರ್ದೇಶಕ ಶ್ರೀಹರಿ ಮತ್ತು ಮಮತಾ ರಾವ್ ಕಾರ್ಯಕ್ರಮ ನಿರ್ವಹಿಸಿದರು. ಯೋಜನಾಧಿಕಾರಿ ಜಯಕರ ಶೆಟ್ಟಿ ಧನ್ಯವಾದವಿತ್ತರು.




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here