Thursday 28th, March 2024
canara news

ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯಿಂದ ಬಡ ಕಲಾವಿದರಿಗೆ ಸಹಾಯಧನ

Published On : 27 May 2020   |  Reported By : Rons Bantwal


ಮುಂಬಯ್, ಮೇ.25: ಕೊರೋನಾ ಕೋವಿಡ್-19 ಪರಿಣಾಮ ಪೂರ್ಣ ಲಾಕ್ಡೌನ್ ಆದದ್ದರಿಂದ ಕೊಂಕಣಿ ಭಾಷಿಕ ಬಡ ಕಲಾವಿದರು ಅತೀವ ಸಂಕಷ್ಟಕ್ಕೆ ಒಳಗಾಗಿದ್ದರು. ಅವರ ಜೀವನಕ್ರಮಕ್ಕೆ ದೊಡ್ಡ ಆಘಾತ ಉಂಟಾಗಿದ್ದು, ಇಂತಹ ಸಂದರ್ಭದಲ್ಲಿ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ವತಿಯಿಂದ ಅರ್ಹ 138 ಫಲಾನುಭವಿಗಳನ್ನು ಗುರುತಿಸಿ ಅವರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಸಿ.ಟಿ ರವಿ ಅವರ ಸಹಯೋಗದಿಂದ ಅರ್ಹ ಪ್ರತಿ ಬಡ ಕಲಾವಿದರಿಗೆ ಕೋವಿಡ್-19 ಪರಿಹಾರಾರ್ಥ ಮೊದಲ ಹಂತದಲ್ಲಿ ಸಹಾಯಧನ ರೂಪಾಯಿ 2000/- ಮೊತ್ತವÀನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಅಕೌಂಟ್‍ಗೆ ಜಮೆ ಮಾಡುವ ಮೂಲಕ ಈ ಸಂಕಷ್ಟದ ಸಮಯದಲ್ಲಿ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಮಾನವೀಯತೆಯನ್ನು ಮೆರೆದಿದೆ.

ಈ ಎಲ್ಲಾ ಕಾರ್ಯಗಳಿಗೆ ಸಹಕಾರ ನೀಡಿದ ಸನ್ಮಾನ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಸಿ.ಟಿ ರವಿಯವರಿಗೆ, ಇಲಾಖೆಯ ಪ್ರಧಾನ ಕಾರ್ಯದರ್ಶಿ ಜನ್ನು, ನಿರ್ದೇಶಕ ಎಸ್. ರಂಗಪ್ಪ, ರಾಜೇಶ್, ರಿಜಿಸ್ಟ್ರಾರ್ ಕುಮಾರ್ ಬೆಕ್ಕೇರಿ ಹಾಗೂ ಸರ್ವ ಸದಸ್ಯರಿಗೆ ಅಕಾಡೆಮಿ ವಂದಿಸಿದೆ.

ಈಗಾಗಲೇ ಇನ್ನಷ್ಟು ಬಡ ಕಲಲಾವಿದರಿಂದ ಬೇಡಿಕೆ ಬಂದಿರುವ ಹಿನ್ನೆಲೆಯಲ್ಲಿ ಇನ್ನೊಂದು ಹಂತದಲ್ಲಿ ಅರ್ಹ ಪಲಾನುಭವಿಗಳ ಬಗ್ಗೆ ಪರಿಶೀಲಿಸಿ ಹಣ ಬಿಡುಗಡೆ ಮಾಡುವ ಕುರಿತು ನಿರ್ಣಯ ತೆಗೆದುಕೊಳ್ಳಲಾಗುವುದು ಎಂದು ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಡಾ| ಜಗದೀಶ್ ಪೈ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿರುತ್ತಾರೆ.

 

 




More News

ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
 ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ
ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ

Comment Here