Saturday 10th, May 2025
canara news

ಅಂಗನವಾಡಿಯಿಂದಲೇ ವಿದ್ಯಾಥಿರ್üಗಳ ಉತ್ತಮ ಭವಿಷ್ಯಕ್ಕಾಗಿ ಉತ್ತಮ ಶಿಕ್ಷಣ ಸಾಧ್ಯ: ಯು.ಟಿ ಖಾದರ್

Published On : 04 Jul 2020   |  Reported By : Rons Bantwal


ಮುಂಬಯಿ (ಉಳ್ಳಾಲ), ಜೂ.29: ವಿದ್ಯಾಥಿರ್üಗಳ ಉತ್ತಮ ಭವಿಷ್ಯಕ್ಕಾಗಿ ಅಂಗನವಾಡಿಯಿಂದಲೇ ಉತ್ತಮ ಶಿಕ್ಷಣ ನೀಡಲಾಗುತ್ತದೆ ಶಾಸಕ ಯು.ಟಿ ಖಾದರ್ ಹೇಳಿದರು. ಅವರು ಮಂಜನಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಟೆಕಲ್ ನಲ್ಲಿ ಮಂಜನಾಡಿ ಗ್ರಾಮ ಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಎಂಜಿನರೇಗಾ ಮತ್ತು ಎಂಆರ್‍ಪಿಎಲ್ ಸಹಯೋಗದಿಂದ ನಿರ್ಮಿಸಿದ ಅಂಗನವಾಡಿ ಕೇಂದ್ರದ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದರು.

ಉತ್ತಮವಾದ ಅಂಗನವಾಡಿ ಕೇಂದ್ರ ಇರಬೇಕೆಂಬ ಉದ್ದೇಶದಿಂದ ಎಂಆರ್‍ಪಿಎಲ್ ಸಹಯೋಗದಿಂದ ಮಂಗಳೂರು ವಿಧಾನ ಸಭಾ ಕ್ಷೇತ್ರದಲ್ಲಿ 12 ಅಂಗನವಾಡಿ ಕೇಂದ್ರಗಳುನ್ನು ನಿರ್ಮಿಸಲಾಗಿದೆ ಎಂದು ಹೇಳಿದರು. ಮಂಗಳೂರು ತಾಲೂಕು ಪಂಚಾಯತ್ ಅಧ್ಯಕ್ಷ ಮೊಹಮ್ಮದ್ ಮೋನು ಮುಖ್ಯ ಅತಿಥಿüಯಾಗಿ ಭಾಗವಹಿಸಿ ಮಾತನಾಡಿ ಮಂಗಳೂರು ತಾಲೂಕಿನಲ್ಲಿ 21 ಗ್ರಾಮಗಳಲ್ಲಿ ದಿನದಿಂದ ದಿನಕ್ಕೆ ಅಭಿವೃದ್ಧಿ ಹೊಂದುತ್ತಿರು ಗ್ರಾಮವಾಗಿದೆ. ಮಂಜನಾಡಿ ಗ್ರಾಮ. ಸುಂದರ ಗ್ರಾಮ ಗಾಂಧೀಜಿಯ ಕನಸಾಗಿದೆ ಕನಸನ್ನು ನನಸು ಮಾಡಿದ ಮಂಜನಾಡಿ ಗ್ರಾಮವಾಗಿ ಎಂದು ಹೇಳಿದರು.

ತಾಲೂಕು ಪಂಚಾಯತ್ ಸದಸ್ಯೆ ಸುರೇಖಾ ಚಂದ್ರಹಾಸ್ ಭಾಗವಹಿಸಿ ಮಾತನಾಡಿ ಮಕ್ಕಳ ಭವಿಷ್ಯ ಭಾರತದ ಭವಿಷ್ಯ ಎಂಬ ದೇಯದೊಂದಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ತುಂಬಾ ಉತ್ತಮ ಕಾರ್ಯಕ್ರಮಗಳನ್ನು ಮಾಡುತ್ತ ಬಂದಿದೆ. ಕೋರೋಣ ನಿಯಂತ್ರಿಸುವಲ್ಲಿ ಅಂಗನವಾಡಿ ಕಾರ್ಯಕರ್ತರ ಕಾರ್ಯ ಶ್ಲಾಘನೀಯ.


ಕಾಂಗ್ರೆಸ್ ಅಲ್ಪ ಸಂಖ್ಯಾತರ ಘಟಕ ದ.ಕ ಅಧ್ಯಕ್ಷ ಎನ್.ಎಸ್ ಕರೀಂ, ಮಂಜನಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಮರಿಯಮ್ಮ, ಎಂಆರ್ಪಿಎಲ್ ಸಂಸ್ಥೆಯ ಅಧಿಕಾರಿ ವಿಜಯೇಂದ್ರ ಭಟ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ವಿಭಾಗದ ಜಿಲ್ಲಾ ನಿರೂಪಣಾಧಿಕಾರ ಶಾಮಲಾ, ಸಿಡಿಪಿಓ ಹರೀಶ್ ಕುಮಾರ್, ಮಂಜನಾಡಿ ಗ್ರಾಮ ಪಂಚಾಯತ್ ಸದಸ್ಯರಾದ ಎಂ.ಎಂ ಅಬ್ಬಾಸ್, ಪ್ರೇಮ, ಅಬ್ದುಲ್ ಖಾದರ್ ಕಲ್ಕಟ್ಟ, ಅಶ್ರಫ್ ಕೆ.ಪಿ, ಮೊಯಿದ್ದೀನ್ ಉಪಸ್ಥಿತರಿದ್ದು ಮಂಜನಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಮಹಮ್ಮದ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದು ಈ ಸಂದರ್ಭ ಗುತ್ತಿಗೆದಾರರಾದ ಶಂಶುದ್ದೀನ್ ಹರೇಕಳ ಅವರನ್ನು ಸನ್ಮಾನಿಸಲಾಯಿತು.

ಮಂಜನಾಡಿ ಗ್ರಾಮ ಪಂಚಾಯತ್ ಸದಸ್ಯ ಇಸ್ಮಾಯಿಲ್ ದೊಡ್ಡಮನೆ ಸ್ವಾಗತಿಸಿದರು. ಮಂಜನಾಡಿ ಗ್ರಾಮ ಪಂಚಾಯತ್ ಸಿಬ್ಬಂದಿ ಶಾಹುಲ್ ಹಮೀದ್ ವಂದಿಸಿದರು. ಅಭಿವೃದ್ಧಿ ಅಧಿಕಾರಿ ಮಂಜಪ್ಪ ಕಾರ್ಯಕ್ರಮ ನಿರೂಪಿಸಿದರು.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here