ಅಪರಿಚಿತ ವಾಹನವೊಂದು ಡಿಕ್ಕಿಯಾಗಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಕಿನ್ನಿಗೋಳಿಯ ಪೆಟ್ರೋಲ್ ಪಂಪ್ ಸಮೀಪ ನಿನ್ನೆ ತಡರಾತ್ರಿ ನಡೆದಿದೆ.
ಅಪಘಾತದಲ್ಲಿ ಸಾವನ್ನಪ್ಪಿದ ವ್ಯಕ್ತಿ ಕಟೀಲು ಸಮೀಪದ ಎಕ್ಕಾರು ಕೆಂಚಗುಡ್ಡೆ ನಿವಾಸಿ ರಾಮಚಂದ್ರ (65)ಎಂದು ಗುರುತಿಸಲಾಗಿದೆ.
ವ್ಯಕ್ತಿಯು ನಿನ್ನೆ ರಾತ್ರಿ ರಸ್ತೆಯ ಸಮೀಪ ನಡೆದುಕೊಂಡು ಹೋಗುವಾಗ ವೇಗವಾಗಿ ಬಂದ ಅಪರಿಚಿತ ವಾಹನವೊಂದು ಇವರಿಗೆ ಡಿಕ್ಕಿಯಾಗಿದೆ ಎನ್ನಲಾಗಿದೆ.