Friday 19th, April 2024
canara news

ತೊಕ್ಕೊಟ್ಟು: ಭೀಕರ ಅಪಘಾತ ನವದಂಪತಿ ದಾರುಣ ಸಾವು

Published On : 27 Oct 2020   |  Reported By : Roshan Kinnigoli


ಉಳ್ಳಾಲ: ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಳಿ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನವದಂಪತಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಮಂಗಳವಾರ ಸಂಜೆ ಸಂಭವಿಸಿದೆ.

 

ಬಜಾಲ್ ನಿವಾಸಿ ರಯಾನ್ ಫೆರ್ನಾಂಡಿಸ್ (30) ಮತ್ತು ಪ್ರಿಯಾ ಫೆರ್ನಾಂಡಿಸ್ (32) ಮೃತರು. ಕಂಕನಾಡಿ ಫಾದರ್ ಮುಲ್ಲಸ್೯ ಆಸ್ಪತ್ರೆಯಲ್ಲಿ ಸಿಬ್ಬಂದಿಯಾಗಿರುವ ಇಬ್ಬರು ಕರ್ತವ್ಯ ಮುಗಿಸಿ ಉಳ್ಳಾಲ ಬಂಗೇರ ಲೇನ್ ನಲ್ಲಿರುವ ಬಾಡಿಗೆ ಮನೆಗೆ ತೆರಳುವ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ..

ಘಟನೆ ವಿವರ : ಮಂಗಳೂರಿನಿಂದ ಕೆಲಸ ಮುಗಿಸಿ ತೊಕ್ಕೊಟ್ಟು ಮಾರ್ಗವಾಗಿ ಓವರ್ ಬ್ರಿಡ್ಜ್ ಬಳಿ ಬಳಿ ಉಳ್ಳಾಲ ಕಡೆ ಬೈಕ್ ತಿರುಗಿಸುತ್ತಿದ್ದಾಗ ಪ್ಲೈಓವರ್ ಮೇಲಿಂದ ಕೆಋಳ ಕಡೆ ಸಂಚರಿಸುತ್ತಿದ್ದ ಲಾರಿ ಬೈಕ್ ಗೆ ಡಿಕ್ಕಿ ಹೊಡೆದು ಬೈಕ್ ಮೇಲಿದ್ದ ಇಬ್ಬರ ಮೇಲೂ ಚಲಿಸಿ ಕೆಲ ಮೀಟರ್ ದೂರಕ್ಕೆ ಎಳೆದುಕೊಂಡು ಹೋಗಿ ನಿಂತಿದೆ. ಘಟನೆಯಿಂದ ಪ್ರಿಯಾ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ರಯಾನ್ ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಸಾವನ್ನಪ್ಪಿದ್ದಾರೆ.

ದಕ್ಷಿಣ ವಲಯ ಸಂಚಾರಿ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು ಘಟನೆಯ ನಂತರ ಸುಮಾರು ಎರಡು ಗಂಟೆಗಳ ಕಾಲ ಸಂಚಾರ ಅಸ್ತವ್ಯಸ್ತವಾಗಿದ್ದು ಪೊಲೀಸರು ಸುಗಮ ಸಂಚಾರಕ್ಜೆ ವ್ಯವಸ್ಥೆ ಮಾಡಿದರು




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here