Thursday 19th, May 2022
canara news

ಕು.ನಿಧಿ ಭಂಡಾರಿ-ಕರ್ನಾಟಕ ರಾಜ್ಯ ಪೆÇಲೀಸ್‍ಗೆ ನೇರ ನೇಮಕಾತಿಯಲ್ಲಿ ಪಿಎಸ್‍ಐ ಆಯ್ಕೆ

Published On : 12 Nov 2020   |  Reported By : Rons Bantwal


ಮುಂಬಯಿ (ಆರ್ ಬಿಐ), ನ.10: ಬಂಟ್ವಾಳ ಗ್ರಾಮಾಂತರ ಪೆÇಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ತಾಲೂಕು ಪಂಜಿಕಲ್ಲು ಗ್ರಾಮದ ಬಂಡಸಾಲೆ ಮನೆ ನಿವಾಸಿ ನಾರಾಯಣ ಭಂಡಾರಿ ಅವರ ಸುಪುತ್ರಿ ಕು| ನಿಧಿ ಎನ್ ಭಂಡಾರಿ ಅವರು ಕರ್ನಾಟಕ ರಾಜ್ಯ ಪೆÇಲೀಸ್ ಇಲಾಖೆಯಲ್ಲಿ ಪಿಎಸ್‍ಐ ನೇರ ನೇಮಕಾತಿ ಹುದ್ದೆಗೆ ಆಯ್ಕೆಯಾಗಿದ್ದು ಈಕೆಯನ್ನು ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲಾ ಪೆÇಲೀಸ್ ಇಲಾಖೆ ವತಿಯಿಂದ ಬಂಟ್ವಾಳ ಗ್ರಾಮಾಂತರ ಪೆÇಲೀಸ್ ಠಾಣೆಯಲ್ಲಿ ಬಂಟ್ವಾಳ ಉಪ ವಿಭಾಗದ ಪೆÇಲೀಸ್ ಉಪಾಧೀಕ್ಷಕ (ಡಿವೈಎಸ್‍ಪಿ) ವಲೈಂಟಯ್ನ್ ಡಿಸೋಜಾ ಸನ್ಮಾನಿಸಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ ನಾಗರಾಜ್, ಬಂಟ್ವಾಳ ಗ್ರಾಮಾಂತರ ಠಾಣಾ ಪಿಎಸ್‍ಐ ಪ್ರಸನ್ನ ಎಂ.ಎಸ್ ಹಾಗೂ ಬಂಟ್ವಾಳ ಗ್ರಾಮಾಂತರ ಠಾಣಾ ಅಧಿಕಾರಿ, ಸಿಬ್ಬಂದಿಗಳು ಉಪಸ್ಥಿತರಿದ್ದು ಕು| ನಿಧಿ ಇವರಿಗೆ ಅಭಿನಂದಿಸಿದರು.

ಭಂಡಾರಿ ಮಹಾ ಮಂಡಲ ಸ್ಥಾಪಕಾಧ್ಯಕ್ಷ ಕಡಂದಲೆ ಸುರೇಶ್ ಎಸ್.ಭಂಡಾರಿ, ಅಧ್ಯಕ್ಷ ಭಂಡಾರಿ ಸದಾಶಿವ ಎ.ಸಕಲೇಶಪುರ, ಕಚ್ಚೂರು ಶ್ರೀ ನಾಗೇಶ್ವರ ದೇವಸ್ಥಾನ ಸಮಿತಿಯ ಗೌ| ಪ್ರ| ಕಾರ್ಯದರ್ಶಿ ಸೋಮಶೇಖರ್ ಭಂಡಾರಿ, ಭಂಡಾರಿ ಸೇವಾ ಸಂಘ ಮುಂಬಯಿ ಇದರ ಅಧ್ಯಕ್ಷ ನ್ಯಾ| ಆರ್. ಎಂ ಭಂಡಾರಿ ಮತ್ತಿತರ ಗಣ್ಯರು ಕು| ನಿಧಿಗೆ ಅಭಿನಂದಿಸಿದ್ದಾರೆ.

 
More News

ಮೇ.06: ತೋನ್ಸೆ ಕಾಂತು ಪೂಜಾರಿ ಕುಟುಂಬದ ಪರಿವಾರ ದೈವಗಳ ನೇಮೋತ್ಸವ
ಮೇ.06: ತೋನ್ಸೆ ಕಾಂತು ಪೂಜಾರಿ ಕುಟುಂಬದ ಪರಿವಾರ ದೈವಗಳ ನೇಮೋತ್ಸವ
ಕಾಶೀ ಮಠ-ಪರ್ತಗಾಳಿ ಮಠ-ಕೈವಲ್ಯ ಮಠ-ಚಿತ್ರಾಪುರ್ ಮಠಾಧೀಶರ ಸಮನ್ವಯತೆಯಲ್ಲಿ
ಕಾಶೀ ಮಠ-ಪರ್ತಗಾಳಿ ಮಠ-ಕೈವಲ್ಯ ಮಠ-ಚಿತ್ರಾಪುರ್ ಮಠಾಧೀಶರ ಸಮನ್ವಯತೆಯಲ್ಲಿ
ಮಾರ್ನಾಡು ಯುವಕ ಮಂಡಲದ ಸುವರ್ಣ ಮಹೋತ್ಸವ-ಮಹಾವೀರ ಶಾಲಾ ನವೀಕರಣ
ಮಾರ್ನಾಡು ಯುವಕ ಮಂಡಲದ ಸುವರ್ಣ ಮಹೋತ್ಸವ-ಮಹಾವೀರ ಶಾಲಾ ನವೀಕರಣ

Comment Here