Wednesday 18th, May 2022
canara news

ಆಗಲಿದ ಬಿಲ್ಲವ ಕುಲತಿಲಕ ಜಯ ಸಿ.ಸುವರ್ಣ ಅವರಿಗೆಪೇ ಜಾವರ ಮಠ ಮುಂಬಯಿ ವತಿಯಿಂದ ಶ್ರದ್ಧಾಂಜಲಿ ಸಭೆ

Published On : 12 Nov 2020   |  Reported By : Rons Bantwal


ಮುಂಬಯಿ, ನ.10: ಬಿಲ್ಲವರ ಅಸೋಸಿಯೇಶನ್ ಮುಂಬಯಿ ಇದರ ಅಜೀವ ಗೌರವಾಧ್ಯಕ್ಷರು, ರಾಷ್ಟೀಯ ಬಿಲ್ಲವ ಮಹಾಮಂಡಲದ ಮಾಜಿ ಅಧ್ಯಕ್ಷರು, ಭಾರತ್ ಬ್ಯಾಂಕ್‍ನ ನಿಕಟಪೂರ್ವ ಕಾರ್ಯಾಧ್ಯಕ್ಷರಾಗಿದ್ದು ಕರ್ನಾಟಕ ರಾಜೋತ್ಸವ ಪ್ರಶಸ್ತಿ ಪುರಸ್ಕೃತರಾಗಿ ಇತ್ತೀಚೆಗೆ ದೈವಾಧೀನರಾದ ಜಯ ಸಿ.ಸುವರ್ಣ ಅವರಿಗೆ ಶ್ರದ್ಧಾಂಜಲಿ ಮತ್ತು ಸಂತಾಪ ಸೂಚಕ ಸಭೆಯನ್ನು ಇದೇ ನ.13ನೇ ಶುಕ್ರವಾರ ಮಧ್ಯಾಹ್ನ 12.05 ಗಂಟೆಗೆ ಶ್ರೀ ವಿಶ್ವೇಶ ತೀರ್ಥ ಸಭಾಗೃಹ, ಪೇಜಾವರ ಮಠ, ಮಧ್ವ ಭವನ, ಪ್ರಭಾತ್ ಕಾಲೊನಿ, ಸಾಂತಾಕ್ರೂಜ್ ಪೂರ್ವ, ಮುಂಬಯಿ ಇಲ್ಲಿ ಆಯೋಜಿಸಲಾಗಿದೆ.

ಜಗದ್ಗುರು ಶ್ರೀ ಮಧ್ವಾಚಾರ್ಯ ಮಹಾ ಸಂಸ್ಥಾನದ ಉಡುಪಿ ಶ್ರೀ ಪೇಜಾವರ ಅಧೋಕ್ಷಜ ಮಠಧೀಶ ಪೂಜ್ಯ ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಅವರ ದಿವ್ಯೋಪÀಸ್ಥಿತಿಯಲ್ಲಿ ಜರುಗುವ ಸಭೆಯಲ್ಲಿ ಬಿಲ್ಲವರ ಅಸೋಸಿಯೇಶನ್ ಮುಂಬಯಿ ಇದರ ಅಧ್ಯಕ್ಷ ಚಂದ್ರಶೇಖರ ಎಸ್.ಪೂಜಾರಿ ಮತ್ತು ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರುಗಳ ಉಪಸ್ಥಿತಿಯಲ್ಲಿ ನುಡಿ ನಮನ ಕಾರ್ಯಕ್ರಮ ನಡೆಸಲಾಗುವುದು ಎಂದು ಶ್ರೀ ಪೇಜಾವರ ಮಠದ ವ್ಯವಸ್ಥಾಪಕರಾದ ಡಾ| ರಾಮದಾಸ ಉಪಾಧ್ಯಾಯ ರೆಂಜಾಳ, ಪ್ರಕಾಶ ಆಚಾರ್ಯ ರಾಮಕುಂಜ, ಹರಿ ಭಟ್ ಪುತ್ತಿಗೆ, ನಿರಂಜನ್ ಗೋಗ್ಟೆ ಈ ಮೂಲಕ ತಿಳಿಸಿದ್ದಾರೆ.
More News

ಮೇ.06: ತೋನ್ಸೆ ಕಾಂತು ಪೂಜಾರಿ ಕುಟುಂಬದ ಪರಿವಾರ ದೈವಗಳ ನೇಮೋತ್ಸವ
ಮೇ.06: ತೋನ್ಸೆ ಕಾಂತು ಪೂಜಾರಿ ಕುಟುಂಬದ ಪರಿವಾರ ದೈವಗಳ ನೇಮೋತ್ಸವ
ಕಾಶೀ ಮಠ-ಪರ್ತಗಾಳಿ ಮಠ-ಕೈವಲ್ಯ ಮಠ-ಚಿತ್ರಾಪುರ್ ಮಠಾಧೀಶರ ಸಮನ್ವಯತೆಯಲ್ಲಿ
ಕಾಶೀ ಮಠ-ಪರ್ತಗಾಳಿ ಮಠ-ಕೈವಲ್ಯ ಮಠ-ಚಿತ್ರಾಪುರ್ ಮಠಾಧೀಶರ ಸಮನ್ವಯತೆಯಲ್ಲಿ
ಮಾರ್ನಾಡು ಯುವಕ ಮಂಡಲದ ಸುವರ್ಣ ಮಹೋತ್ಸವ-ಮಹಾವೀರ ಶಾಲಾ ನವೀಕರಣ
ಮಾರ್ನಾಡು ಯುವಕ ಮಂಡಲದ ಸುವರ್ಣ ಮಹೋತ್ಸವ-ಮಹಾವೀರ ಶಾಲಾ ನವೀಕರಣ

Comment Here