Tuesday 19th, March 2024
canara news

ರುಡ್‍ಸೆಟ್ ಸಂಸ್ಥೆ: ಆಡಳಿತ ವಿಭಾಗದ ನೂತನ ಕಟ್ಟಡ ಉದ್ಘಾಟನೆ

Published On : 14 Nov 2020   |  Reported By : Rons Bantwal


ಉಜಿರೆ: ಕೆನರಾ ಬ್ಯಾಂಕ್‍ನಲಿ ್ಲಸಂಪೂರ್ಣವಾಗಿ ಆಧುನಿಕ ತಂತ್ರಜ್ಞಾನ ಬಳಸಿದ್ದು ಸಿಂಡಿಕೇಟ್ ಬ್ಯಾಂಕ್‍ನ ಗ್ರಾಹಕರು ಯಾವುದೇ ಕೆನರಾ ಬ್ಯಾಂಕ್ ಶಾಖೆಗೆ ಹೋಗಿ ತಮ್ಮ ವ್ಯವಹಾರ ನಡೆಸಬಹುದು ಎಂದು ಕೆನರಾ ಬ್ಯಾಂಕ್‍ನ ಆಡಳಿತ ನಿರ್ದೇಶಕಿ ಎ. ಮಣಿಮೇಖಲಾಯಿ ಹೇಳಿದರು.


ಅವರು ಗುರುವಾರ ಉಜಿರೆಯಲ್ಲಿ ಗ್ರಾಮಾಭಿವೃದ್ಧಿ ಮತ್ತು ಸ್ವ-ಉದ್ಯೋಗ ತರಬೇತಿ ಕೇಂದ್ರಗಳ ಆಡಳಿತ ವಿಭಾಗದ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು.

ಕೇಂದ್ರ ಸರ್ಕಾರದ ನಿರ್ದೇಶನದಂತೆ ವಿವಿಧ ಯೋಜನೆಯಡಿ ಕೆನರಾ ಬ್ಯಾಂಕ್ ಗ್ರಾಹಕರಿಗೆ ಸಾಲ ನೀಡುತ್ತಿದೆ. ನಿರುದ್ಯೋಗಿಗಳು ರುಡ್‍ಸೆಟ್ ಸಂಸ್ಥೆ ಸಂಸ್ಥೆಗಳ ಮೂಲಕ ತರಬೇತಿ ಪಡೆದು ಸ್ವ-ಉದ್ಯೋಗ ಪ್ರಾರಂಭಿಸಲು ಕೆನರಾ ಬ್ಯಾಂಕ್ ಕಡಿಮೆ ಬಡ್ಡಿದರದಲ್ಲಿ ಸಾಲ ನೀಡುತ್ತಿದೆ. ಶೇ. 75 ರಷ್ಟು ಮಂದಿ ಸಾಲ ಮರುಪಾವತಿಸಿ ಯಶಸ್ವಿಯಾಗಿ ಸ್ವ-ಉದ್ಯೋಗ ಮಾಡುತ್ತಿದ್ದಾರೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಅಧ್ಯಕ್ಷತೆ ವಹಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ, ಭಾರತದಲ್ಲಿ ಅಪಾರ ಜನಸಂಖ್ಯೆ ಎಂದೂ ಸಮಸ್ಯೆ ಆಗಲಾರದು. ಪ್ರತಿಯೊಬ್ಬ ವ್ಯಕ್ತಿಯಲ್ಲಿ ಪ್ರತಿಭೆ, ಬುದ್ಧಿವಂತಿಕೆ ಹಾಗೂ ಸಾಮಥ್ರ್ಯ ಇರುತ್ತದೆ. ಅವರಿಗೆ ಸಕಾಲದಲ್ಲಿ ಮಾಹಿತಿ ಹಾಗೂ ತರಬೇತಿ ನೀಡಿ ಸ್ವ-ಉದ್ಯೋಗ ಮಾಡಲು ಪ್ರೇರಣೆ ನೀಡುವುದೇ ರುಡ್‍ಸೆಟ್ ಸಂಸ್ಥೆಯ ಉದ್ದೇಶವಾಗಿದೆ. 1982 ರಲ್ಲಿ ಉಜಿರೆಯಲ್ಲಿ ಪ್ರಾಯೋಗಿಕವಾಗಿ ಪ್ರಾರಂಭಿಸಿದ ರುಡ್‍ಸೆಟ್ ಸಂಸ್ಥೆ ಇಂದು ದೇಶದೆಲ್ಲೆಡೆ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದೆ.

ಮಹಿಳೆಯರು ಕೂಡಾ ಸ್ವ-ಉದ್ಯೋಗಿಗಳಾಗಿ ಸ್ವಾವಲಂಬಿ ಜೀವನ ನಡೆಸುತ್ತಿದ್ದಾರೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಕೆನರಾ ಬ್ಯಾಂಕ್‍ನ ಮಹಾಪ್ರಬಂಧಕರುಗಳಾದ ರಾಕೇಶ್ ಕಶ್ಯಪ್ ಮತ್ತು ಬಿ. ಯೋಗೀಶ್ ಆಚಾರ್ಯ, ಡಿ.ಜಿ.ಎಂ. ಸತ್ಯಮೂರ್ತಿ ಹಾಗೂ ಬಿಪುಲ್‍ಚಂದ್ರ ಶಹಾ, ರುಡ್‍ಸೆಟ್ ಸಂಸ್ಥೆಗಳ ಕೇಂದ್ರೀಯ ಆಡಳಿತ ನಿರ್ದೇಶಕ ಎಂ. ಜನಾರ್ದನ್ ಮತ್ತು ನಿರ್ದೇಶಕ ಪಿ.ಸಿ. ಹಿರೇಮಠ ಉಪಸ್ಥಿತರಿದ್ದರು.

 




More News

 ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ
ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ
ಬ್ರಹ್ಮಕುಮಾರಿ ಸಂಸ್ಥೆಯ ಸಯನ್  ಸೆಂಟರ್‍ನಿಂದ ಮಹಿಳಾ ದಿನಾಚರಣೆ
ಬ್ರಹ್ಮಕುಮಾರಿ ಸಂಸ್ಥೆಯ ಸಯನ್ ಸೆಂಟರ್‍ನಿಂದ ಮಹಿಳಾ ದಿನಾಚರಣೆ
ಅನಿತಾ ಪಿ.ತಾಕೊಡೆ ಅವರ ಕಥಾ ಸಂಕಲನಕ್ಕೆ ಕನ್ನಡ ಸಾಹಿತ್ಯ ಪರಿಷತ್ತ್ತ್‍ನ ದತ್ತಿ ಪ್ರಶಸ್ತಿ
ಅನಿತಾ ಪಿ.ತಾಕೊಡೆ ಅವರ ಕಥಾ ಸಂಕಲನಕ್ಕೆ ಕನ್ನಡ ಸಾಹಿತ್ಯ ಪರಿಷತ್ತ್ತ್‍ನ ದತ್ತಿ ಪ್ರಶಸ್ತಿ

Comment Here