Friday 4th, July 2025
canara news

ಉಡುಪಿ ರೈಲ್ವೆ ಯಾತ್ರಿ ಸಂಘದ ಅಧ್ಯಕ್ಷ ಆರ್.ಎಲ್ ಡಾಯಸ್ ನಿಧನ

Published On : 25 Mar 2021   |  Reported By : Rons Bantwal


ಮುಂಬಯಿ (ಆರ್‍ಬಿಐ), ಮಾ.25: ಭಾರತೀಯ ಭೂಸೇನೆಯ ಫಿರಂಗಿ ವಿಭಾಗದ ತಾಂತ್ರಿಕ ಸಹಾಯಕ (ಅರಣ್ಯ ಅಧಿಕಾರಿ) ಆಗಿದ್ದು ಹಿರಿಯ ನಿವೃತ್ತ ಯೋಧರೆಣಿಸಿ ಉಡುಪಿ ರೈಲ್ವೆ ಯಾತ್ರಿ ಸಂಘದ ಅಧ್ಯಕ್ಷ ಆರ್.ಎಲ್ ಡಾಯಸ್ ಹೆಸರಾಂತ ರೋಬರ್ಟ್ ಲೂಯಿಸ್ ಡಾಯಸ್ (88.) ಅವರು ಬುಧವಾರ ತಡ ರಾತ್ರಿ ಅಲ್ಪಕಾಲದ ಅನಾರೋಗ್ಯದಿಂದ ಮಣಿಪಾಲ ಇಲ್ಲಿನ ಕೆಎಂಸಿಆಸ್ಪತ್ರೆಯಲ್ಲಿ ನಿಧನರಾದರು..

ಕಳೆದ ಸುಮಾರು ಎರಡು ದಶಕಗಳಿಂದ ಡಾಯಸ್ ಅವರು ಉಡುಪಿ ರೈಲ್ವೆ ಯಾತ್ರಿ ಸಂಘದ ಅಧ್ಯಕ್ಷ ಮತ್ತು ಪದಾಧಿಕಾರಿಯಾಗಿದ್ದು ಉಡುಪಿ ಭಾಗದ ರೈಲ್ವೆ ಸೇರಿದಂತೆ ನೈಋತ್ಯ ರೈಲ್ವೆ, ದಕ್ಷಿಣ ರೈಲ್ವೆ ಸಮಸ್ಯೆಗಳಿಗೆ ನಿರಂತರವಾಗಿ ಸ್ಪಂದಿಸಿ ಸಂಬಂಧ ಪಟ್ಟ ಅಧಿಕಾರಿಗಳಿಗೆ ಮನವಿಗಳನ್ನು ಸಲ್ಲಿಸಿ ಕೆಲಸ ಮಾಡಿಸುವಲ್ಲಿ ಯಶಸ್ಸು ಕಂಡಿದ್ದರು. ಉಡುಪಿ ರೈಲ್ವೆ ಯಾತ್ರಿ ಸಂಘದ ನೇತೃತ್ವದಲ್ಲಿ ಸಂಘಟಿತ ಹೋರಾಟದಿಂದ ಉಡುಪಿ ಭಾಗದಲ್ಲಿ ಹಲವಾರು ರೈಲ್ವೆ ಯೋಜನೆಗಳು ಜಾರಿ ಗೊಳ್ಳಲು ಅವರು ಮಹತ್ವಪೂರ್ಣ ಪಾತ್ರ ವಹಿಸಿದ್ದರು.

ರೈಲ್ವೆ ಸಂಬಂದಿತ ಹೋರಾಟಗಳ ಹೊರತಾಗಿ ಇತರ ಕ್ಷೇತ್ರಗಳಲ್ಲೂ ಡಾಯಸ್ ರವರ ಸಾಮಾಜಿಕ ಕಳಕಳಿ ನಿರಂತರವಾಗಿದ್ದು ಪರ್ಕಳ ರಾಷ್ಟ್ರೀಯ ಹೆದ್ದಾರಿ ಸಮಸ್ಯೆಗಳಿಗೆ ಸ್ಪಂದನೆ, ಉಡುಪಿಯಲ್ಲಿ ನರ್ಮ್ ಬಸ್ ಓಡಾಟದ ಹಿಂದೆ ಅವರ ಪಾತ್ರ, ಈಗ ಚಾಲನೆಯಲ್ಲಿರುವ ಇಂದ್ರಾಳಿ ರೈಲ್ವೆ ಸೇತುವೆ ಕಾಮಗಾರಿಗೆ ಅವರು ನಡೆಸಿದ ಹೋರಾಟಗಳು ಇತ್ಯಾದಿ ಜನ ಮಾನಸದಲ್ಲಿ ನೆಲೆಯೂರಿದೆ.

ಮಣಿಪಾಲ ಪರ್ಕಳ ಇಲ್ಲಿನ ಹಾನೀಡೆಲ್ ನಿವಾಸಿ ಆಗಿದ್ದ ಮೃತರು ಪತ್ನಿ, ನಾಲ್ವರು ಸುಪುತ್ರಿಯರು, ಓರ್ವ ಸುಪುತ್ರ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಡಾಯಸ್ ಪಾಥಿರ್üೀವ ಶರೀರವನ್ನು ಮಾ.28ನೇ ಭಾನುವಾರ ಅಪರಾಹ್ನ 2.30 ಗಂಟೆಯಿಂದ ಕ್ರೈಸ್ಟ್ ಚರ್ಚ್ ಮಣಿಪಾಲ ಇಲ್ಲಿ ಸಾರ್ವಜನಿಕ ದರ್ಶನಕ್ಕೆ ಇರಿಸಲಾಗಿ ಬಳಿಕ 3.30 ಗಂಟೆಗೆ ಅಂತಿಮ ಸಂಸ್ಕಾರ ನಡೆಸಲಾಗುವುದು ಎಂದು ಕುಟುಂಬ ಮೂಲಗಳು ತಿಳಿಸಿದ್ದಾರೆ.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here