Saturday 10th, May 2025
canara news

ಗೃಹಿಣಿ ಅನಿತಾ ಡಾಲು ರವಿ ನಿಧನ-ವಾರದ ಹಿಂದೆ ನಡೆಸಲ್ಪಟ್ಟ ಗೃಹ ಪ್ರವೇಶ

Published On : 13 May 2021   |  Reported By : Rons Bantwal


ಅಂತ್ಯಸಂಸ್ಕಾರ ನೆರವೇರಿಸಿದ ಆರ್‍ಎಸ್‍ಎಸ್ ಸ್ವಯಂ ಸೇವಕರು

ಕೆ.ಆರ್.ಪೇಟೆ, ಮೇ.11: ಕೆ.ಆರ್.ಪೇಟೆ ತಾಲೂಕು ಅಲ್ಲಿನ ಕಾಂಗ್ರೆಸ್ ಮುಖಂಡ ಹಾಗೂ ಮಂಡ್ಯ ಜಿಲ್ಲಾ ಹಾಲು ಒಕ್ಕೂಟದ ನಿರ್ದೇಶಕ ಡಾಲು ರವಿ ಅವರ ಪತ್ನಿ ಅನಿತಾ (40.) ಕೋವಿಡ್ ಸೋಂಕಿಗೆ ತುತ್ತಾಗಿ ಕಳೆದ ಸೋಮವಾರ ಮೃತಪಟ್ಟಿದ್ದಾರೆ.

ಪಟ್ಟಣದ ಜಯನಗರ ಬಡಾವಣೆಯಲ್ಲಿ ಹೊಸ ಮನೆ ನಿರ್ಮಿಸಿ ಲಾಕ್‍ಡೌನ್‍ಗೂ ಮುನ್ನ ವಾರದ ಹಿಂದೆಯಷ್ಟೇ ಗೃಹ ಪ್ರವೇಶ ನೆರವೇರಿಸಿದ್ದರು. ಗೃಹ ಪ್ರವೇಶದ ಮೂರು ದಿನಗಳ ಬಳಿಕ ಅನಿತಾ ಅವರಿಗೆ ಕೋವಿಡ್ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿದ್ದ ಹಿನ್ನೆಲೆ ಅವರನ್ನು ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಕಳೆದ ಮೂರು ದಿನಗಳಿಂದ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿತ್ತು. ಆದರೆ ಸೋಮವಾರ ಸಂಜೆ ಉಸಿರಾಟದ ತೊಂದರೆ ಕಾಣಿಸಿಕೊಂಡು ಚಿಕಿತ್ಸೆಗೆ ಸ್ಪಂಧಿಸದೇ ಮೃತಪಟ್ಟಿರುವರು.

ಅನಿತಾ ಅವರ ಅಂತ್ಯಸಂಸ್ಕಾರವನ್ನು ಆರ್‍ಎಸ್‍ಎಸ್ ಸ್ವಯಂ ಸೇವಕರು ಅವರ ಸ್ವಗ್ರಾಮ ಕೈಗೋನಹಳ್ಳಿ ಗ್ರಾಮದಲ್ಲಿ ನೆರವೇರಿಸಿದರು. ಮಾಜಿ ಶಾಸಕರಾದ ಕೆ.ಬಿ ಚಂದ್ರಶೇಖರ್ ಸೇರಿದಂತೆ ಕುಟುಂಬದ ಕೆಲವು ಸದಸ್ಯರ ಸಮ್ಮುಖದಲ್ಲಿ ಕೋವಿಡ್ ನಿಯಮಾನುಸಾರ ಅಂತ್ಯ ಸಂಸ್ಕಾರ ನೆರವೇರಿ




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here