Saturday 20th, April 2024
canara news

ಕೋವಿಡ್ ಸಂದರ್ಭದಲ್ಲಿ ಧಾರ್ಮಿಕ ಆಚರಣೆಗಳಿಗೆ ಪರಿಹಾರವಿದೆ- ಡಾ| ವೀರೇಂದ್ರ ಹೆಗ್ಗಡೆ

Published On : 16 May 2021   |  Reported By : Rons Bantwal


ಮುಂಬಯಿ (ಆರ್‍ಬಿಐ), ಮೇ.16: ಅವಿಭಜಿತದಕ್ಷಿಣಕನ್ನಡಜಿಲ್ಲೆಯಲ್ಲಿಎಪ್ರಿಲ್ ಮತ್ತು ಮೇ ತಿಂಗಳು ಧಾರ್ಮಿಕ ಚಟುವಟಿಕೆಗಳಿಗೆ ಪ್ರಮುಖವಾದ ಮಾಸವಾಗಿದೆ.ಈ ಉಭಯ ಜಿಲ್ಲೆಗಳಲ್ಲಿ ಪ್ರಾಕೃತಿಕವಾಗಿಯೂ ಮೇ ತಿಂಗಳ ಬಳಿಕ 4 ರಿಂದ 5 ತಿಂಗಳು ಮಳೆಗಾಲವಾದುದರಿಂದಕೃಷಿಯನ್ನು ಹೊರತುಪಡಿಸಿ ಯಾವುದೇ ಚಟುವಟಿಕೆಗಳನ್ನು ನಡೆಸಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಹತ್ತನಾವಧಿ ಅಂದರೆ ವರ್ಷದಲ್ಲಿದೇವಸ್ಥಾನ, ದೈವಸ್ಥಾನ, ಭೂತಸ್ಥಾನ ಮತ್ತುಕೌಟುಂಬಿಕ ಸಾನಿಧ್ಯಗಳ ನಾಗಾರಾಧನೆ ಇತ್ಯಾದಿ ನಡೆಯುತ್ತದೆ. ಆ ಬಳಿಕ ದೀಪಾವಳಿವರೆಗೂ ಎಲ್ಲಾ ಧಾರ್ಮಿಕ ಚಟುವಟಿಕೆಗಳಿಗೆ ವಿಶ್ರಾಂತಿ ಇರುತ್ತದೆ ಮತ್ತು ಬಳಕೆಯ ಭಾಷೆಯಲ್ಲಿ ಹೇಳುವುದಾದರೆ ದೇವರು ಒಳಗಾಗುವುದು, ದೈವಗಳ ಭೂತಾರಾಧನೆ ಮರೆಯಾಗುವುದು ಎನ್ನುವ ಪದ ಉಪಯೋಗಿಸಲ್ಪಡುತ್ತದೆ. ಧರ್ಮಸ್ಥಳದಲ್ಲಿಯೂ ದೇವಸ್ಥಾನದಲ್ಲಿ ಹತ್ತನಾವಧಿ ಬಳಿಕ ಯಾವುದೇ ಧಾರ್ಮಿಕ ಆರಾಧನೆಗಳಿರುವುದಿಲ್ಲ ಎಂದು ಶ್ರೀ ಕ್ಷೇತ್ರದ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ತಿಳಿಸಿರುತ್ತಾರೆ.

ಜನರು ಸದ್ಯಕೊರೋನಾ ವ್ಯಾಧಿಯಿಂದಾಗಿಒಟ್ಟಾಗಿ ಈ ಧಾರ್ಮಿಕ ಕಾರ್ಯಕ್ರಮಗಳನ್ನು ಮಾಡುವುದು ಸಾದ್ಯವಾಗುತ್ತಿಲ್ಲ. ಪ್ರಾಕೃತಿಕವಾಗಿಯೂ ಹಗಲು ಬಿಸಿಲು ಇರುವುದರಿಂದ ಈ ಎಲ್ಲಾ ಭೂತಾರಾಧನೆಗಳು ರಾತ್ರಿ ವೇಳೆಯಲ್ಲಿ ನಡೆಯುತ್ತದೆ. ಸದ್ಯ ಅನೇಕ ಕಡೆಗಳಲ್ಲಿ ಹಗಲು ಜನ ಸೇರುವಂತಿಲ್ಲ. ರಾತ್ರಿಅಂತೂ ಭೂತದ ಕೋಲ, ಪರ್ವಇತ್ಯಾದಿ ಸಮರ್ಪಣೆಗಳು ನಡೆಯುವಂತಿಲ್ಲ. ಈ ಜಿಜ್ಞಾಸೆಗೆ ಪರಿಹಾರವೆಂದರೆ ಕಾಲೋಚಿತ ಮತ್ತು ಸಮಯೋಚಿತವಾಗಿ ಈ ಎಲ್ಲಾ ಕ್ರಿಯೆಗಳನ್ನು ಹಿಂದಿನಂತೆ ವ್ಯಾಪಕವಾಗಿ ಮತ್ತು ವಿಜೃಂಭಣೆಯಿಂದ ಮಾಡುವ ಬದಲುತಾತ್ವಿಕವಾಗಿಶ್ರದ್ಧಾ ಭಕ್ತಿಯಿಂದ ಪ್ರಾಥಿರ್üಸಿಕೊಂಡು ಕ್ಷಮೆ ಕೇಳಬಹುದು. ದೈವದ ಪರ್ವಗಳನ್ನು ಹಗಲು ಹೊತ್ತಿನಲ್ಲಿ ಮಾಡಬಹುದು.

ಕಳೆದ ವರ್ಷ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಾಯಿ ನಡಾವಳಿ ಮತ್ತು ವಿಷು ಜಾತ್ರೆಗಳು, ಕೋಲ, ನೇಮಗಳು ನಡೆಸಲು ಸಾಧ್ಯವಾಗಿರುವುದಿಲ್ಲ. ಈ ವಿಚಾರದಲ್ಲಿ ಪ್ರಶ್ನೆ ಚಿಂತನೆ ಮಾಡಿದಾಗ ದೈವವಾಣಿ ಆದದ್ದೇನೆಂದರೆ ಈ ವರ್ಷದ ಎಲ್ಲಾ ಆರಾಧನೆಯ ಚಟುವಟಿಕೆಗಳನ್ನು ಸಾಂಕೇತಿಕವಾಗಿ ಮಾಡಿ ಎಂದು ಆದೇಶವಾಗಿರುತ್ತದೆ. ರಥೋತ್ಸವ ಹಾಗೂ ಗಗ್ಗರಕಟ್ಟಿ ಮಾಡುವ ಕೋಲಗಳು ನಡೆಸಬೇಕಾಗಿಲ್ಲವೆಂದು ಈ ಉಲ್ಲೇಖ. ಯಾಕೆಂದರೆ ಅನೇಕ ಕ್ಷೇತ್ರಗಳಲ್ಲಿಯೂ ಈ ರೀತಿಯ ಸಾಂಕೇತಿಕ ಸೇವೆಗಳು ನಡೆದಿದೆ. ಆದುದರಿಂದ ಈ ವರ್ಷ ಹತ್ತನಾವಧಿಯ ಒಳಗೆ ನಡೆಯಬೇಕಾಗಿರುವ ಚಟುವಟಿಕೆಗಳಾದ ನೇಮ, ಕೋಲಾದಿಗಳನ್ನು ನಿಲ್ಲಿಸಿ ಆಯಾಯ ಅಥವಾ ಸಾನಿಧ್ಯದಲ್ಲಿ ಕ್ಷಮೆಯನ್ನು ಯಾಚಿಸಿ, ಪ್ರಾಥಿರ್üಸಿ ಪರಿಹಾರ ಕಂಡುಕೊಳ್ಳಬಹುದು.

ಈ ಕಾರಣದಿಂದ ವೃತ್ತಿಪರರಿಗೆ ಅನೇಕ ವ್ಯವಹಾರಿಕಾವಾಗಿ ನಷ್ಟಗಳುಉಂಟಾಗಬಹುದು. ಅವರು ಈ ಸಂದರ್ಭವನ್ನು ಪರಿಗಣಿಸಿ ತಮ್ಮ ಆರೋಗ್ಯವನ್ನು ರಕ್ಷಿಸಿಕೊಂಡು ಈ ಕಾರ್ಯಕ್ರಮಗಳಲ್ಲಿ ಜನ ಭಾಗವಹಿಸುವ ಸಂದರ್ಭಗಳನ್ನು ಕಡಿತಗೊಳಿಸಿ ಸಹಕರಿಸುವುದು ಉಚಿತ. ಈ ವಿಷಯದಲ್ಲಿ ಅನೇಕರು ಪರಿಹಾರವನ್ನು ವಿಚಾರಿಸುತ್ತಿರುವುದರಿಂದ ಈ ಮಾಹಿತಿಯನ್ನು ನೀಡಲಾಗಿದೆ ಎಂದು ಶ್ರೀ ಕ್ಷೇತ್ರದ ಧರ್ಮಸ್ಥಳದ ಕಚೇರಿ ಮೂಲಗಳು ತಿಳಿಸಿವೆ.




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here