Wednesday 24th, April 2024
canara news

ಪೆÇ| ಬಿ. ಎಂ ಇಚ್ಲಂಗೋಡು ನಿಧನಕ್ಕೆ ಬ್ಯಾರಿ ಅಧ್ಯಯನ ಪೀಠ ಸಂತಾಪ

Published On : 24 May 2021   |  Reported By : Rons Bantwal


ಮುಂಬಯಿ (ಆರ್‍ಬಿಐ), ಮೇ.24: ಮಂಗಳೂರು ನಾಡಿನ ಹಿರಿಯ ಸಾಹಿತಿ, ಬ್ಯಾರಿ ಸಂಶೋಧಕ, ಪತ್ರಕರ್ತ, ನಿವೃತ್ತ ಉಪನ್ಯಾಸಕ ಪೆÇ್ರ| ಬಿ.ಎಂ ಇಚ್ಲಂಗೋಡು (84.) ನಗರದ ಖಾಸಗಿ ಆಸ್ಪತ್ರೆಯಲ್ಲಿ ರವಿವಾರ ತಡರಾತ್ರಿ ನಿಧನರಾದರು. ನಗರದ ಅತ್ತಾವರ ನಂದಿಗುಡ್ಡೆಯ ನಿವಾಸಿಯಾಗಿದ್ದ ಬಿ.ಎಂ ಇಚ್ಲಂಗೋಡು ಅವರು ಪತ್ನಿ, ನಾಲ್ವರು ಪುತ್ರರು, ಓರ್ವ ಪುತ್ರಿ ಹಾಗೂ ಅಪಾರ ಬಂಧು ಬಳಗ ಅಗಲಿದ್ದಾರೆ.

ಬ್ಯಾರಿ ಕ್ಷೇತ್ರ ಕಾರ್ಯದಲ್ಲಿ ಆಳವಾದ ಅಧ್ಯಯನ ನಡೆಸಿದ್ದ ಅವರು ಇಳಿ ವಯಸ್ಸಿನಲ್ಲೂ ಯುವಕರನ್ನು ನಾಚಿಸುವಂತೆ ಸಂಶೋಧನೆಯಲ್ಲಿ ನಿರತರಾಗಿದ್ದರು. ಅನೇಕ ಯುವ ಸಂಶೋಧಕರಿಗೆ ಮಾರ್ಗದರ್ಶನ ನೀಡಿದ್ದರು. ಮನೆ ಸಮೀಪವೇ ಕಚೇರಿಯನ್ನು ಹೊಂದಿದ್ದ ಅವರು ಗ್ರಾಹಕರಿಗಾಗುತ್ತಿದ್ದ ಅನ್ಯಾಯದ ವಿರುದ್ಧ ಕಾನೂನು ಹೋರಾಟ ಮಾಡಿ ಗಮನ ಸೆಳೆದಿದ್ದರು. ಅಲ್ಲದೆ ಜನಸಾಮಾನ್ಯರಿಗೆ ಕಾನೂನು ನೆರವು ನೀಡುತ್ತಿದ್ದರು. ಇಳಿವಯಸ್ಸಿನಲ್ಲೂ ಸಾಹಿತ್ಯ, ಅಧ್ಯಯನದಲ್ಲಿ ಉತ್ಸಾಹದಿಂದ ತೊಡಗಿಸಿಕೊಂಡಿದ್ದರು.

ಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ಕೈಯಾಡಿಸಿದ್ದರು. ಆಳವಾದ ಅಧ್ಯಯನ, ಕ್ಷೇತ್ರ ಕಾರ್ಯಗಳ ಮೂಲಕ ಮೌಲ್ಯಯುತ ಪ್ರಬಂಧಗಳನ್ನು ಮಂಡಿಸಿದ್ದ ಅವರು ಕತೆ, ಕವನ, ಲೇಖನ, ಹಾಸ್ಯಲೇಖನಗಳನ್ನೂ ಬರೆದು ಗಮನ ಸೆಳೆದಿದ್ದರು. ಸದ್ದಿಲ್ಲದೆ ಸಮಾಜ ಸೇವೆಯಲ್ಲೂ ತೊಡಗಿಸಿ ಕೊಂಡಿದ್ದರು.

ಬ್ಯಾರಿ ಭಾಷೆ, ಸಂಸ್ಕೃತಿ, ಸಾಹಿತ್ಯ ಕ್ಷೇತ್ರದಲ್ಲಿ ದುಡಿದ ಸಾಧಕ, ನಿವೃತ್ತ ಪ್ರಾಧ್ಯಾಪಕ, ಸಂಶೋಧಕ ಹಾಗೂ ಸಾಹಿತಿ ಪೆÇ್ರ| ಬಿ.ಎಂ ಇಚ್ಲಂಗೋಡು ನಿಧನಕ್ಕೆ ಮಂಗಳೂರು ವಿಶ್ವವಿದ್ಯಾನಿಲಯ ಬ್ಯಾರಿ ಅಧ್ಯಯನ ಪೀಠವು ತೀವ್ರ ಸಂತಾಪ ವ್ಯಕ್ತಪಡಿಸಿದೆ.

ಬ್ಯಾರಿ ಭಾಷೆ, ಸಂಸ್ಕೃತಿ, ಸಾಹಿತ್ಯ ಕ್ಷೇತ್ರದಲ್ಲಿ ಆಳವಾದ ಅಧ್ಯಯನ ನಡೆಸಿದ್ದ ಇವರು ಹಲವಾರು ಸಂಶೋಧನಾತ್ಮಕ ಪುಸ್ತಕಗಳು ಹಾಗೂ ಲೇಖನಗಳನ್ನು ಪ್ರಕಟಿಸಿದ್ದಾರೆ. 2001ರಲ್ಲಿ ಉಡುಪಿಯಲ್ಲಿ ನಡೆದ ಮೂರನೇ ಬ್ಯಾರಿ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದ ಇವರು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಪ್ರಥಮ ಅವಧಿಯ ಸದಸ್ಯರಾಗಿದ್ದರು. ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ಹೊರತಂದ ಬ್ಯಾರಿ, ಕನ್ನಡ, ಇಂಗ್ಲೀಷ್ ಶಬ್ಧಕೋಶದ ಪ್ರಧಾನ ಸಂಪಾದಕರಾಗಿ ಸೇವೆ ಸಲ್ಲಿಸಿದ್ದರು. ಇವರು ಬಳಕೆದಾರರ ಆಂದೋಲನದಲ್ಲಿ ತೊಡಗಿಸಿಕೊಂಡು, ಬಳಕೆದಾರರಿಗೆ ಮಾರುಕಟ್ಟೆಯಲ್ಲಾಗುತ್ತಿದ್ದ ಶೋಷಣೆಯ ವಿರುದ್ಧ ಕಾನೂನು ಹೋರಾಟ ಮಾಡಿ ಬಳಕೆದಾರರಿಗೆ ನೆರವಾಗುತ್ತಿದ್ದರು. ಇವರ ಸೇವೆಯನ್ನು ಗುರುತಿಸಿದ ಅನೇಕ ಪ್ರಶಸ್ತಿ, ಸನ್ಮಾನ, ಗೌರವಗಳಿಗೆ ಇವರು ಭಾಜನರಾಗಿದ್ದಾರೆ.

ಬಿ.ಎಂ ಇಚ್ಲಂಗೋಡು ನಿಧನಕ್ಕೆ ಬ್ಯಾರಿ ಅಧ್ಯಯನ ಪೀಠದ ಸಂಯೋಜಕ ಡಾ| ಅಬುಬಕ್ಕರ್ ಸಿದ್ಧಿಕ್, ಸಲಹಾ ಸಮಿತಿ ಸದಸ್ಯರೂ, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ರಹೀಂ ಉಚ್ಚಿಲ್, ಅಹಮ್ಮದ್ ಬಾವ ಮೊೈದಿನ್, ಇಬ್ರಾಹಿಂ ಕೋಡಿಜಾಲ್, ಅಬ್ದುಲ್ ರಹಿಮಾನ್ ಕುತ್ತೆತ್ತೂರು, ಷಂಶುದ್ದೀನ್ ಮಡಿಕೇರಿ ಹಾಗೂ ಮಹಮ್ಮದ್ ಕುಳಾಯಿ ಇವರೂ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here