Friday 26th, April 2024
canara news

ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥೇಶ್ವರ ಸಂಸ್ಕøತಿ ಸಂಶೋಧನಾ ಪ್ರತಿಷ್ಠಾನದ ವಿಸ್ತøತ ಗ್ರಂಥಾಲಯ ವಿಭಾಗ ಉದ್ಘಾಟನೆ

Published On : 18 Jun 2021   |  Reported By : Rons Bantwal


ಮುಂಬಯಿ (ಆರ್‍ಬಿಐ), ಜೂ.17: ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥೇಶ್ವರ ಸಂಸ್ಕøತಿ ಸಂಶೋಧನಾ ಪ್ರತಿಷ್ಠಾನದ ಗ್ರಂಥಾಲಯವನ್ನು ಮಂಜೂಷಾ ವಸ್ತು ಸಂಗ್ರಹಾಲಯದ ಕಟ್ಟಡಕ್ಕೆ ಸ್ಥಳಾಂತರಿಸಲಾಗಿದ್ದು, ಶ್ರುತ ಪಂಚಮಿಯ ಶುಭ ದಿನವಾದ ಮಂಗಳವಾರ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆ ಅವರು ಮತ್ತು ಶ್ರೀಮತಿ ಹೇಮಾವತಿ ಹೆಗ್ಗಡೆ ಅವರು ಉದ್ಘಾಟಿಸಿ ಶುಭ ಹಾರೈಸಿದರು.

ಗ್ರಂಥಾಲಯದಲ್ಲಿ 4,707 ತಾಡೋಲೆ ಹಸ್ತಪ್ರತಿಗಳು, 1468 ಕಾಗದ ಹಸ್ತಪ್ರತಿಗಳು, 302 ಕಲ್ಲಚ್ಚಿನ ಪ್ರತಿಗಳು ಹಾಗೂ 25,637 ಮುದ್ರಿತ ಪುಸ್ತಕಗಳ ಅಮೂಲ್ಯ ಸಂಗ್ರಹವಿದೆ. ಕನ್ನಡ, ಇಂಗ್ಲಿಷ್, ಸಂಸ್ಕøತ, ತುಳು, ಮರಾಠಿ, ತೆಲುಗು, ಪ್ರಾಕೃತ ಹಾಗೂ ಪಾಲಿ ಭಾಷೆಯಲ್ಲಿ ರಚಿಸಿದ ಅನೇಕ ಕೃತಿಗಳಿವೆ.

ವಿವಿಧ ವಿಶ್ವವಿದ್ಯಾಲಯಗಳ ಪ್ರಾಧ್ಯಾಪಕರುಗಳು, ವಿದ್ಯಾಥಿರ್üಗಳು ಮತ್ತು ಸಂಶೋಧಕರು ಇಲ್ಲಿ ಬಂದು ತಮ್ಮ ಅಧ್ಯಯನ ಮತ್ತು ಸಂಶೋಧನೆಗೆ ಗ್ರಂಥಾಲಯದ ಸದುಪಯೋಗ ಪಡೆಯುತ್ತಾರೆ.

ಖ್ಯಾತ ಇತಿಹಾಸತಜ್ಞ ಮಂಡ್ಯದ ಪೆÇ್ರ| ಹೆಚ್.ವಿ ನರಸಿಂಹಮೂರ್ತಿ ಅವರು ಇತಿಹಾಸ ಮತ್ತು ಸಂಶೋಧನೆಗೆ ಸಂಬಂಧಿಸಿದ ಒಂದು ಸಾವಿರ ಪುಸ್ತಕಗಳನ್ನು ಗ್ರಂಥಾಲಯಕ್ಕೆ ಕೊಡುಗೆಯಾಗಿ ಹಾಗೂ ಸಮುದಾಯ ಅಧ್ಯಯನ ಕೇಂದ್ರ ಮೈಸೂರು ಇದರ ಪ್ರಣತಾ ಅವರು 29 ಅಮೂಲ್ಯ ಪುಸ್ತಕಗಳನ್ನು ಗ್ರಂಥಾಲಯಕ್ಕೆ ನೀಡಿರುತ್ತಾರೆ.

ಡಿ.ಸುರೇಂದ್ರಕುಮಾರ್, ಅನಿತಾ ಸುರೇಂದ್ರಕುಮಾರ್, ಡಿ.ಹರ್ಷೇಂದ್ರಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್, ಅಮಿತ್, ಶ್ರದ್ಧಾ ಅಮಿತ್, ಮಾನ್ಯ, ಡಾ| ಬಿ.ಯಶೋವರ್ಮ, ಸೋನಿಯಾವರ್ಮ, ಡಿ. ಶ್ರೇಯಸ್ ಕುಮಾರ್, ಡಿ.ನಿಶ್ಚಲ್‍ಕುಮಾರ್, ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ| ಎಲ್.ಎಚ್ ಮಂಜುನಾಥ್, ಹೆಗ್ಗಡೆ ಅವರ ಆಪ್ತ ಕಾರ್ಯದರ್ಶಿ ಎ.ವಿ ಶೆಟ್ಟಿ, ಡಾ| ವಿಘ್ನರಾಜ ಎಸ್.ಆರ್ ಉಪಸ್ಥಿತರಿದ್ದರು.




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here