Friday 9th, May 2025
canara news

ಮೂಲ್ಕಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾನಿಗಳಿಂದÀ ಗೃಹಪಯೋಗಿ ವಸ್ತುಗಳ ಕೊಡುಗೆ

Published On : 21 Jun 2021


ಮೂಡಬಿದ್ರೆ ಶಾಸಕ ಉಮಾನಾಥ್ ಕೋಟ್ಯಾನ್ ಮುಖೇನ ಮೂಲ್ಕಿ ಆರೋಗ್ಯ ಕೇಂದ್ರಕ್ಕೆ ಹಸ್ತಾಂತರ

ಮುಂಬಯಿ (ಆರ್‍ಬಿಐ), ಜೂ.21: ಮಹಾನಗರದಲ್ಲಿ ಬಂಟರ ಸಂಘ ಮುಂಬಯಿ ಇದರ ಶೈಕ್ಷಣಿಕ ನೂತನ ಯೋಜನಾ ಸಮಿತಿ ಉಪಾಧ್ಯಕ್ಷ, ಉತ್ತರ ಮುಂಬಯಿ (ಬೋರಿವಿಲಿ) ಜಿಲ್ಲಾ ಬಿಜೆಪಿ ಉಪಾಧ್ಯಕ್ಷ, ಹೆಸರಾಂತ ಸಂಘಟಕ, ಸಮಾಜ ಸೇವಕ ಎರ್ಮಾಳ್ ಹರೀಶ್ ಶೆಟ್ಟಿ ಇವರು ಇಂದಿಲ್ಲಿ ಮಂಗಳೂರು ಇಲ್ಲಿನ ಮೂಲ್ಕಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಸುಮಾರು ಒಂದು ಲಕ್ಷ ರೂಪಾಯಿ ವೆಚ್ಚದ ವಾಷಿಂಗ್ ಮೆಷಿನ್ ಮತ್ತು ಹವಾ ನಿಯಂತ್ರಣಯಂತ್ರವನ್ನು ಮೂಡಬಿದ್ರೆ ಶಾಸಕ ಉಮಾನಾಥ್ ಕೋಟ್ಯಾನ್ ಅವರ ಮುಖೇನ ಮೂಲ್ಕಿ ಆರೋಗ್ಯ ಕೇಂದ್ರಕ್ಕೆ ಒದಗಿಸಿದರು.

ಶಾಸಕ ಕೋಟ್ಯಾನ್ ಅವರು ಎರ್ಮಾಳ್ ಹರೀಶ್ ಶೆಟ್ಟಿ ಮತ್ತು ಪದ್ಮನಾಭ ಶೆಟ್ಟಿ ಮುಂಬಯಿ ಇವರು ನೀಡಿರುವ ಅತ್ಯವಶ್ಯ ಉಪಯೋಗಿ ಗೃಹಪಯೋಗಿ ವಸ್ತುಗಳನ್ನು ದಾನಿಗಳಿಬ್ಬರ ಸಮ್ಮುಖದಲ್ಲಿ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಿಗೆ ಹಸ್ತಾಂತರಿಸಿದರು. ಕಳೆದ ವರ್ಷ ಜುಲಾಯಿನಲ್ಲಿ ಎರ್ಮಾಳ್ ಹರೀಶ್ ಅವರು ಮೂಲ್ಕಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಸುಸಜ್ಜಿತ ಅಂಬ್ಯುಲೆನ್ಸ್ ಒದಗಿಸುವಲ್ಲಿ ಶ್ರಮಿಸಿದ್ದರು.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here