Tuesday 23rd, April 2024
canara news

ಮುಂಬಯಿ ವಿಶ್ವವಿದ್ಯಾಲಯದ ಕನ್ನಡ ವಿಭಾಗ ಮುಖ್ಯಸ್ಥ ಡಾ| ಜಿ.ಎನ್.ಉಪಾಧ್ಯ ಅವರಿಗೆ 2021ನೇ ಸಾಲಿನ ನರಹಳ್ಳಿ ಪ್ರಶಸ್ತಿ

Published On : 07 Aug 2021   |  Reported By : Rons Bantwal


ಮುಂಬಯಿ (ಆರ್‍ಬಿಐ), ಆ.03: ಹಿರಿಯ ವಿಮರ್ಶಕ ಮತ್ತು ಸಂಸ್ಕೃತಿ ಚಿಂತಕ ನರಹಳ್ಳಿ ಬಾಲಸುಬ್ರಹ್ಮಣ್ಯ ಅವರು ವಾರ್ಷಿಕವಾಗಿ ಕೊಡಮಾಡುವ ಈ ಬಾರಿಯ 2021ನೇ ಸಾಲಿನ ನರಹಳ್ಳಿ ಪ್ರಶಸ್ತಿಗೆ ಮುಂಬಯಿ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ವಿಭಾಗದ ಪ್ರಾಧ್ಯಾಪಕ, ಮುಖ್ಯಸ್ಥ ಡಾ| ಜಿ.ಎನ್.ಉಪಾಧ್ಯ ಭಾಜನರಾಗಿದ್ದಾರೆ.

ನರಹಳ್ಳಿ ಬಾಲಸುಬ್ರಹ್ಮಣ್ಯ ತಮಗೆ ಬಂದ ಪ್ರಶಸ್ತಿ ಮತ್ತು ಗೌರವಗಳ ಮೊತ್ತವನ್ನು ಕೆರೆಯ ನೀರನು ಕೆರೆಗೆ ಚೆಲ್ಲು ಎನ್ನುವಂತೆ ಇಡುಗಂಟಾಗಿಸಿ ಅದರಿಂದ ಬರುವ ಬಡ್ಡಿಯಿಂದ ವರ್ಷಂಪ್ರತಿ ಪ್ರತಿಭಾನ್ವಿತ ಮತ್ತು ಸರ್ವೋತ್ಕೃಷ್ಟ ಬರಹಗಾರುರು, ಲೇಖಕÀರಿಗೆ ಕೊಡಲು ಅನುವು ಮಾಡಿಕೊಟ್ಟಿದ್ದಾರೆ. ಹಿರಿಯ ಕವಿಗಳಾದ ಡಾ| ಎಚ್.ಎಸ್ ವೆಂಕಟೇಶಮೂರ್ತಿ ಅವರ ಸಮರ್ಥ ಅಧ್ಯಕ್ಷತೆಯಲ್ಲಿ ಕಳೆದ ಆರು ವರ್ಷಗಳಿಂದ ಈ ಪ್ರಶಸ್ತಿಯನ್ನು ನೀಡುತ್ತಾ ಬಂದಿದೆ. 2014ನೇಯ ಸಾಲಿನಲ್ಲಿ ಟಿ.ಯಲ್ಲಪ್ಪ ಅವರಿಗೆ, 2015ರಲ್ಲಿ ಪಿ.ಚಂದ್ರಿಕಾ ಅವರಿಗೆ, 2016ರಲ್ಲಿ ಎಂ.ಆರ್ ದತ್ತಾತ್ರಿ ಅವರಿಗೆ, 2017ರಲ್ಲಿ ವಿನಯಾ ಅವರಿಗೆ, 2018ರಲ್ಲಿ ರಾಜೇಂದ್ರ ಪ್ರಸಾದ್ ಅವರಿಗೆ, 2019ರಲ್ಲಿ ವೆಂಕಟಗಿರಿದಳವಾಯಿ ಅವರಿಗೆ, 2020ರಲ್ಲಿ ಚಿದಾನಂದ ಸಾಲಿ ಅವರಿಗೆ ಪ್ರಶಸ್ತಿಗಳನ್ನು ನೀಡಲಾಗಿತ್ತು.

ಈ ವರ್ಷ ಮುಂಬಯಿ ಅಲ್ಲಿನ ಪ್ರಸಿದ್ಧ ವಿಮರ್ಶಕರೂ, ಸಂಶೋಧಕರೂ ಆದ ಡಾ| ಜಿ.ಎನ್ ಉಪಾಧ್ಯಾ ಅವರಿಗೆ ಪ್ರದಾನಿಸಲಾಗುವುದು. ಪ್ರಶಸ್ತಿಯು ರೂಪಾಯಿ ಹದಿನೈದು ಸಾವಿರ ನಗದು ಮತ್ತು ಫಲಕವನ್ನು ಒಳಗೊಂಡಿರುತ್ತದೆ. ಡಾ| ಹೆಚ್.ಎಸ್ ವೆಂಕಟೇಶಮೂರ್ತಿ, ಬಿ.ಆರ್ ಲಕ್ಷ ್ಮಣರಾವ್, ಲಕ್ಷ ್ಮಣ ಕೊಡಸೆ, ರಜನಿ ನರಹಳ್ಳಿ, ಆನಂದರಾಮ ಉಪಾಧ್ಯ, ನ.ರವಿಕುಮಾರ್, ಸಿ.ಕೆ ರಾಮೇಗೌಡ ಅವರನ್ನೊಳಗೊಂಡ ಸಮಿತಿಯು ಈ ಪ್ರಶಸ್ತಿಗೆ ಡಾ| ಉಪಾಧ್ಯ ಅವರನ್ನು ಆಯ್ಕೆ ಮಾಡಿದೆ.

ಡಾ| ಜಿ.ಎನ್.ಉಪಾಧ್ಯ
ಉಡುಪಿ ತಾಲೂಕು ಕೋಟ ಮೂಲತಃ ಡಾ| ಜಿ.ಎನ್ ಉಪಾಧ್ಯ ಅವರು ಕಳೆದ ಅನೇಕ ವರ್ಷಗಳಿಂದ ಮುಂಬಯಿ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ವಿಭಾಗದ ಪ್ರಾಧ್ಯಾಪಕರಾಗಿ, ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕರ್ನಾಟಕ ವಿಶ್ವವಿದ್ಯಾಲಯದಿಂದ ಸ್ನಾತಕ ಪದವಿ, ವರದರಾಜ ಆದ್ಯ ಸ್ವರ್ಣಪದಕ ಹಾಗೂ ಪ್ರಥಮ ರ್ಯಾಂಕ್‍ನೊಂದಿಗೆ ಮುಂಬಯಿ ವಿಶ್ವವಿದ್ಯಾಲಯದಿಂದ ಎಂ.ಎ ಪದವೀಧರರಾಗಿ ಮಹಾರಾಷ್ಟ್ರದ ಕನ್ನಡ ಶಾಸನಗಳ ಸಾಂಸ್ಕೃತಿಕ ಅಧ್ಯಯನದ ಮಹಾ ಪ್ರಬಂಧದೊಂದಿಗೆ ಪಿಎಚ್‍ಡಿಗೆ ಪಾತ್ರರಾಗಿರುವರು. ಸಾಂಸ್ಕೃತಿಕ, ಅಧ್ಯಯನ, ವಿಮರ್ಶೆ, ಭಾಷಾ ವಿಜಾನ ಮತ್ತು ಪತ್ರಿಕೋದ್ಯಮ ಅವರ ಅಸಕ್ತಿಯ ಕ್ಷೇತ್ರಗಳು, ಸೊಲ್ಲಾಪುರ ಒಂದು ಸಾಂಸ್ಕೃತಿಕ ಅಧ್ಯಯನ, ಮಹಾರಾಷ್ಟ್ರದ ಕನ್ನಡ ಶಾಸನಗಳ ವರ್ಣಾನಾತ್ಮಕ ಸೂಚೆ, ಮಹಾರಾಷ್ಟ್ರದ ಕನ್ನಡ ಸ್ಥಳನಾಮಗಳು, ಮಹಾರಾಷ್ಟ್ರ ಕರ್ನಾಟಕ ಸಾಂಸ್ಕೃತಿಕ ಬಾಂಧವ್ಯ ಮೊದಲಾದ ಸಂಶೋಧನ ಯೋಜನೆಗಳನ್ನು ಯಶಸ್ವಿಯಾಗಿ ಮುಗಿಸಿದ್ದಾರೆ. ಕೆಲಕಾಲ ಅವರು ಸಂಯುಕ್ತ ಕರ್ನಾಟಕ ಪತ್ರಿಕೆಯ ಪುಸ್ತಕ ಅವಲೋಕನದ ವಿಮರ್ಶಕರಾಗಿಯೂ ಕಾರ್ಯ ನಿರ್ವಹಿಸಿದ್ದರು. ಹೊರನಾಡದ ಮುಂಬಯಿಯಲ್ಲಿ ಅಭಿಜಿತ್ ಪ್ರಕಾಶನವನ್ನು ಆರಂಭಿಸಿ ಬೇರೆ ಬೇರೆ ಲೇಖಕರ ನೂರಕ್ಕೂ ಹೆಚ್ಚು ಕೃತಿಗಳನ್ನು ಹೊರತಂದಿದ್ದಾರೆ. ಈವರೆಗೆ ಡಾ| ಉಪಾಧ್ಯ ಅವರು ಎಪ್ಪತ್ತು ಕೃತಿಗಳು ಬೆಳಕು ಕಂಡಿವೆ. ಅವರ ಮಾರ್ಗದರ್ಶನದಲ್ಲಿ ಈವರೆಗೆ 70 ಮಂದಿ ಎಂ.ಫಿಲ್, ಪಿಎಚ್‍ಡಿ ಪದವಿಯನ್ನು ಪಡೆದಿದ್ದಾರೆ.

`ಕರ್ನಾಟಕ ಮಲ್ಲ' ಕನ್ನಡ ದೈನಿಕದಲ್ಲಿ ಉಪಸಂಪಾದಕರಾಗಿ ಕೆಲಕಾಲ ಕೆಲಸ ಮಾಡಿದ್ದ ಇವರು ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ (ರಿ.) ಇದರ ಸದಸ್ಯರೂ ಆಗಿದ್ದಾರೆ. ಮಹಾರಾಷ್ಟ್ರ ಸರಕಾರದ ಶಿಕ್ಷಣ ಇಲಾಖೆ, ಮಹಾರಾಷ್ಟ್ರ ರಾಜ್ಯ ಪಠ್ಯಪುಸ್ತಕ ಮಂಡಲಿ, ಮಹಾರಾಷ್ಟ್ರ ಸರಕಾರದ ಗುಪ್ತಚರ ಇಲಾಖೆ ಮೊದಲಾದ ಉನ್ನತ ಸಂಸ್ಥೆಗಳಲ್ಲಿ ವಿಷಯ ತಜ್ಞರಾಗಿ, ಮಾರ್ಗದರ್ಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರಿಗೆ ಬೆಂಗಳೂರಲ್ಲಿ ನಡೆದ 77ನೆಯ ಸಾಹಿತ್ಯ ಸಮ್ಮೇಳನದಲ್ಲಿ ಇವರಿಗೆ `ಕರ್ನಾಟಕಶ್ರೀ' ಪ್ರಶಸ್ತಿ, ಚಿತ್ರದುರ್ಗದ ಮುರುಘಾಮಠ ಅವರಿಗೆ ಶಿಕ್ಷಣ ವಿಭೂಷಣ ಪ್ರಶಸ್ತಿ, ಉಪಾಧ್ಯರ ಕೃತಿಗೆ ಸಾಹಿತ್ಯ ಪರಿಷತ್ತ್‍ನ ಪ್ರತಿಷ್ಠಿತ ಶಾಂತಿಲಾಲ್ ಪ್ರಶಸ್ತಿ, ಮಹಾರಾಷ್ಟ್ರ ಕರ್ನಾಟಕ ಆದಾನ ಪ್ರದಾನ ಕೃತಿಗೆ ಗದ್ಯ ವಿಭಾಗದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ರತ್ನಾಕರವರ್ಣಿ ಮುದ್ದಣ ಅನಾಮಿಕ ದತ್ತಿ ಬಹುಮಾನ, ಬಿಲ್ಲವರ ಅಸೋಸಿಯೇಶನ್ ಮುಂಬಯಿ ಇದರ ಶ್ರೀ ಗುರುನಾರಾಯಣ ಸಾಹಿತ್ಯ ಪ್ರಶಸ್ತಿ ಸೇರಿದಂತೆ ಹತ್ತರು ಪ್ರಶಸ್ತಿಗಳಿಂದ ಗೌರವಿಸಲ್ಪಟ್ಟ ಮುಂಬಯಿವಾಸಿ ಕನ್ನಡಿಗರ ಬಹುತೇಕರ ಪಾಲಿನ ಗುರು ಎಂದೇ ಹೆಸರುವಾಸಿಯಾಗಿದ್ದಾರೆ.

 




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here