Friday 9th, May 2025
canara news

ಶ್ರೀ ಕೃಷ್ಣ ವೇಷ ಸ್ಪರ್ಧೆ ನಿಜಕ್ಕೂ ಶ್ಲಾಘನೀಯ : ಶಾಸಕ ವೇದವ್ಯಾಸ ಕಾಮತ್

Published On : 01 Sep 2021   |  Reported By : Rons Bantwal


ಮುಂಬಯಿ (ಆರ್‍ಬಿಐ), ಆ.30: ಮಕ್ಕಳಲ್ಲಿ ಧಾರ್ಮಿಕ ಪ್ರಜ್ಞೆಯನ್ನು ಬೆಳೆಸುವ ಪ್ರಯತ್ನವಾಗಿ ಮತ್ತು ಅವರಲ್ಲಿನ ಪ್ರತಿಭೆಯನ್ನು ಗುರುತಿಸಿ ಬೆಳೆಸುವ ಸದುದ್ದೇಶದಿಂದ ಕಳೆದ ಮೂರುವರೆದಶಕಗಳಿಂದ ಕಲ್ಕೂರ ಪ್ರತಿಷ್ಠಾನವು ನಡೆಸಿಕೊಂಡು ಬಂದಿರುವ ರಾಷ್ಟ್ರೀಯ ಮಕ್ಕಳ ಉತ್ಸವ-ಶ್ರೀ ಕೃಷ್ಣ ವೇಷ ಸ್ಪರ್ಧೆ ನಿಜಕ್ಕೂ ಶ್ಲಾಘನೀಯವಾದುದು ಎಂದು ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ಡಿ.ವೇದವ್ಯಾಸ ಕಾಮತ್ ನುಡಿದರು.

ಮಂಗಳೂರು ಅಲ್ಲಿನ ಶಾರದಾ ವಿದ್ಯಾಲಯದ ಧ್ಯಾನ ಮಂದಿರದಲ್ಲಿ ಜರಗಿದ ಶ್ರೀಕೃಷ್ಣ ವೇಷ ಸ್ಪರ್ಧೆಯ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಶಾಸಕ ವೇದವ್ಯಾಸ್ ಮಾತನಾಡಿದರು.

ಕಟೀಲು ದೇವಳದ ಪ್ರಧಾನ ಅರ್ಚಕ ಲಕ್ಷಿ ್ಮೀನಾರಾಯಣ ಆಸ್ರಣ್ಣ ಮತ್ತು ಶರವು ದೇವಳದ ಶಿಲೆ ಶಿಲೆ ಆಡಳಿತ ಮೊಕ್ತೇಸರ ರಾಘವೇಂದ್ರ ಶಾಸ್ತ್ರೀ, ಕದ್ರಿ ವಿಠಲದಾಸ ತಂತ್ರಿ ದೀಪ ಬೆಳಗುವ ಮೂಲಕ ಸ್ಪರ್ಧೆಗಳಿಗೆ ಚಾಲನೆ ನೀಡಿದರು. ಪ್ರತಿಷ್ಠಾನದ ಅಧ್ಯಕ್ಷ ಎಸ್.ಪ್ರದೀಪ ಕುಮಾರ ಕಲ್ಕೂರ ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು.

ಈ ಸಂದರ್ಭ ಹರಿಕೃಷ್ಣ ಪುನರೂರು, ಪೆÇ್ರ| ಎಂ.ಬಿ ಪುರಾಣಿಕ್, ರತ್ನಾಕರ ಜೈನ್, ಭುವನಾಭಿರಾಮ ಉಡುಪ, ಉದ್ಯಮಿ ಪ್ರಶಾಂತ್ ಶೇಟ್, ದಯಾನಂದ ಕಟೀಲು, ಲೀಲಾಕ್ಷ ಕರ್ಕೇರ, ನವನೀತ ಶೆಟ್ಟಿ, ಮೊದಲಾದವರು ಉಪಸ್ಥಿತರಿದ್ದರು.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here