Sunday 23rd, June 2024
canara news

ಬಂಟ್ವಾಳ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಪ್ರಶಾಂತ್ ಪುಂಜಾಲಕಟ್ಟೆ ಆಯ್ಕೆ

Published On : 26 Sep 2021   |  Reported By : Rons Bantwal


ಮುಂಬಯಿ (ಆರ್‍ಬಿಐ), ಸೆ.26: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಪ್ರಶಾಂತ್ ಪುಂಜಾಲಕಟ್ಟೆ ಆಯ್ಕೆ ಆಗಿದ್ದಾರೆ.

ಇತ್ತೀಚೆಗೆ ಬಂಟ್ವಾಳ ಪ್ರಸ್ ಕ್ಲಬ್‍ನಲ್ಲಿ ಸಂಘದ ಅಧ್ಯಕ್ಷ ಹರೀಶ್ ಮಾಂಬಾಡಿ ಅಧ್ಯಕ್ಷತೆಯಲ್ಲಿ ನಡೆದ ಮಹಾ ಸಭೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಸಲಾಗಿದ್ದು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಇಬ್ರಾಹೀಂ ಅಡ್ಕಸ್ಥಳ ಚುನಾವಣಾ ಪ್ರಕ್ರಿಯೆ ನಡೆಸಿದರು.


ಉಪಾಧ್ಯಕ್ಷ ಆಗಿ ಯಾದವ್ ಅರ್ಗಬೈಲ್, ಪ್ರಧಾನ ಕಾರ್ಯದರ್ಶಿ ಆಗಿ ಮೌನೇಶ್ ವಿಶ್ವಕರ್ಮ, ಜೊತೆ ಕಾರ್ಯದರ್ಶಿ ಆಗಿ ಇಮ್ತಿಯಾಝ್ ಶ್ಹಾ ತುಂಬೆ, ಕೋಶಾಧಿಕಾರಿ ಆಗಿ ವೆಂಕಟೇಶ್ ಬಂಟ್ವಾಳ ಆಯ್ಕೆ ಆದರು.

ಸಭೆಯಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಅಲಿ ವಿಟ್ಲ ವರದಿ ವಾಚಿಸಿದರು. ಕೋಶಾಧಿಕಾರಿ ಯಾದವ್ ಅಗ್ರಬೈಲ್ ಲೆಕ್ಕಪತ್ರ ಮಂಡಿಸಿದರು. ಅಧ್ಯಕ್ಷ ಹರೀಶ್ ಮಾಂಬಾಂಡಿ ಮಾತನಾಡಿ ನೂತನ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರಿಸಿ ಶುಭಾರೈಸಿದರು.

 
More News

ಅಂಡಮಾನ್‍ನಲ್ಲಿ ಸಂಭ್ರಮಿಸಲ್ಪಟ್ಟ 19ನೇ ರಾಷ್ಟ್ರೀಯ ಕನ್ನಡ ಸಂಸ್ಕೃತಿ ಸಮ್ಮೇಳನ
ಅಂಡಮಾನ್‍ನಲ್ಲಿ ಸಂಭ್ರಮಿಸಲ್ಪಟ್ಟ 19ನೇ ರಾಷ್ಟ್ರೀಯ ಕನ್ನಡ ಸಂಸ್ಕೃತಿ ಸಮ್ಮೇಳನ
ಮೂಡಬಿದ್ರೆ ಶ್ರೀ ಜೈನ ಮಠದ ಸ್ವಸ್ತಿಶ್ರೀ ಭಟ್ಟಾರಕ ಭವನದಲ್ಲಿ
ಮೂಡಬಿದ್ರೆ ಶ್ರೀ ಜೈನ ಮಠದ ಸ್ವಸ್ತಿಶ್ರೀ ಭಟ್ಟಾರಕ ಭವನದಲ್ಲಿ
ಶಾಂತಿವನ ಟ್ರಸ್ಟ್ ಆಶ್ರಯದಿಂದ ಧರ್ಮಸ್ಥಳದಲ್ಲಿ ಹತ್ತನೆ ವಿಶ್ವಯೋಗ ದಿನ ಆಚರಣೆ
ಶಾಂತಿವನ ಟ್ರಸ್ಟ್ ಆಶ್ರಯದಿಂದ ಧರ್ಮಸ್ಥಳದಲ್ಲಿ ಹತ್ತನೆ ವಿಶ್ವಯೋಗ ದಿನ ಆಚರಣೆ

Comment Here