Saturday 20th, April 2024
canara news

ಧರ್ಮಸ್ಥಳ ಲಕ್ಷ ದೀಪೆÇೀತ್ಸವ: ಸರ್ವಧರ್ಮ ಸಮ್ಮೇಳನ-89ನೆ ಅಧಿವೇಶನ ಉದ್ಘಾಟನೆ ಸಾಮಾಜಿಕ ಸಾಮರಸ್ಯದೊಂದಿಗೆ ವಿಶ್ವಶಾಂತಿ ಸಾಧ್ಯ - ರಾಜ್ಯಪಾಲ ಥಾವರ್‍ಚಂದ್

Published On : 04 Dec 2021   |  Reported By : Rons Bantwal


ಮುಂಬಯಿ (ಆರ್‍ಬಿಐ), ಡಿ.03: ತಮ್ಮ ಧರ್ಮದ ಮರ್ಮವನ್ನರಿತು ಇತರ ಧರ್ಮಗಳನ್ನೂ ಗೌರವಿಸಿದಾಗ ಸಾಮಾಜಿಕ ಸಾಮರಸ್ಯದೊಂದಿಗೆ ವಿಶ್ವಶಾಂತಿ ಸಾಧ್ಯವಾಗುತ್ತದೆ ಎಂದು ಗೌರವಾನ್ವಿತ ರಾಜ್ಯಪಾಲ ಥಾವರ್‍ಚಂದ್ ಗೆಹ್ಲೋಟ್ ಹೇಳಿದರು.

ಧರ್ಮಸ್ಥಳದಲ್ಲಿ ಲಕ್ಷ ದೀಪೆÇೀತ್ಸವ ನಿಮಿತ್ತ ಗುರುವಾರ ಆಯೋಜಿಸಿದ ಸರ್ವಧರ್ಮ ಸಮ್ಮೇಳನದ 89ನೆ ಅಧಿವೇಶನ ಉದ್ಘಾಟಿಸಿ ಮಾತನಾಡಿದರು.
`ಬದುಕು ಮತ್ತು ಬದುಕಲು ಬಿಡು' ಎಂಬುದು ಜೈನ ಧರ್ಮದ ಶ್ರೇಷ್ಠ ತತ್ವವಾಗಿದೆ. ಸತ್ಯ, ಅಹಿಂಸೆ, ತ್ಯಾಗ, ಪರರ ಸೇವೆಯಿಂದ ಜೀವನ ಪಾವನವಾಗುತ್ತದೆ ಎಂದು ಭಗವಾನ್ ಮಹಾವೀರರು ಬೋಧಿಸಿದ್ದಾರೆ. ಸಾಧಿಸಿ ತೋರಿಸಿದ್ದಾರೆ. ಲೋಕಸಭೆಯಲ್ಲಿ ಹಾಗೂ ಸರ್ವೋಚ್ಛ ನ್ಯಾಯಾಲಯದಲ್ಲಿಯೂ ಸರ್ವಧರ್ಮಗಳ ಸಮನ್ವಯದಿಂದಲೇ ಲೋಕ ಕಲ್ಯಾಣ ಸಾಧ್ಯ ಎಂಬ ಆಶಯ ವ್ಯಕ್ತಪಡಿಸಲಾಗಿದೆ. ಧರ್ಮದತತ್ವ, ಸಿದ್ಧಾಂತಗಳನ್ನು ಅರಿತು ಬದುಕಿನಲ್ಲಿ ಪಾಲನೆ ಮಾಡಿದರೆ ಎಲ್ಲರಲ್ಲಿಯೂ ಪರಸ್ಪರ ಪ್ರೀತಿ, ವಿಶ್ವಾಸ ಬೆಳೆದು ಸಾಮಾಜಿಕ ಸಾಮರಸ್ಯ ಸಾಧ್ಯವಾಗುತ್ತದೆ. ಈ ದಿಸೆಯಲ್ಲಿ ಪವಿತ್ರಕ್ಷೇತ್ರ ಧರ್ಮಸ್ಥಳದ ಸೇವೆ - ಸಾಧನೆ ಶ್ಳಾಘನೀಯವಾಗಿದೆ ಎಂದು ಹೇಳಿದ ರಾಜ್ಯಪಾಲರು ಹೆಗ್ಗಡೆಯವರ ಸೇವಾ ವೈಶಿಷ್ಟ ್ಯತೆಯನ್ನು ಅಭಿನಂದಿಸಿದರು.

ಲೋಕ ಹಿತಕ್ಕಾಗಿ ಎಲ್ಲರನ್ನೂ ಉದ್ಧರಿಸುವುದೇ ಧರ್ಮದ ಮೂಲ ಉದ್ದೇಶವಾಗಿದೆ. ಎಲ್ಲಾ ಧರ್ಮಗಳೂ ಸಮಾನವಾಗಿದ್ದು ಧರ್ಮದ ಮೂಲಕ ವಿಶ್ವಶಾಂತಿ ಮತ್ತು ವಿಶ್ವಕಲ್ಯಾಣ ಸಾಧ್ಯವಾಗುತ್ತದೆ. ಎಲ್ಲರೂ ಹೃದಯ ಶ್ರೀಮಂತಿಕೆಯನ್ನು ಬೆಳೆಸಿಕೊಂಡು ವಿಶ್ವಮಾನವರಾಗಬೇಕು ಎಂದು ರಾಜ್ಯಪಾಲರು ಹೇಳಿ ಆಗ ಮಾತ್ರವೇ ಇಡೀ ವಿಶ್ವವೇ ಒಂದು ಕುಟುಂಬ ಎಂಬ ಭಾವನೆ ಮೂಡಿ ಬರುತ್ತದೆ ಎಂದು ಅಭಿಪ್ರಾಯ ಪಟ್ಟರು.

ಬೆಂಗಳೂರುನ ಎಸ್.ವ್ಯಾಸಯೋಗ ವಿಶ್ವವಿದ್ಯಾಲಯದ ವಿಶ್ರಾಂತ ಕಲಪತಿ ಪೆÇ್ರ| ರಾಮಚಂದ್ರ ಜಿ.ಭಟ್ಟ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಧರ್ಮವು ನಮ್ಮಎಲ್ಲಾ ಪಾಪಕರ್ಮಗಳನ್ನು ಕಳೆಯುತ್ತದೆ.ಧರ್ಮದಲ್ಲಿ ಸರ್ವರ ಹಿತವಿದೆ. ಧರ್ಮದಲ್ಲಿ ಸರ್ವವೂ ಇದೆ ಆದರೆ ಸರ್ವವೂ ಧರ್ಮವಲ್ಲ ಎಂದರು.

ಸಾಗರದ ಡಾ| ಸಫ್ರ್ರಾಜ್ ಚಂದ್ರಗುತ್ತಿ ಮಾತನಾಡಿ `ಭಾರತೀಯ ಧರ್ಮಗಳು' ಎಂಬ ವಿಷಯದ ಬಗ್ಯೆ, ಮೈಸೂರು ವಿ.ವಿ.ಯ ನಿವೃತ್ತ ಪ್ರಾಧ್ಯಾಪಕಿ ಡಾ| ಎಂ.ಎಸ್ ಪದ್ಮಅವರು, `ಜೈನಧರ್ಮದ ಮೌಲಿಕತೆ ಮತ್ತು ಮಹತ್ವ'ದ ಬಗ್ಯೆ ಮತ್ತು ಶಿವಮೊಗ್ಗದ ವೀರೇಶ್ ವಿ.ಮೊರಾಸ್ ಅವರು `ಧರ್ಮ ಮತ್ತು ಸಾಮಾಜಿಕ ಸ್ವಾಸ್ಥ'ದ ಬಗ್ಯೆಉಪನ್ಯಾಸ ನೀಡಿದರು.

ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರು ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿ ಲಕ್ಷದೀಪೋತ್ಸವ ಸಂದರ್ಭದಲ್ಲಿ ಕಳೆದ 88 ವರ್ಷಗಳಲ್ಲಿ ಆಯೋಜಿಸಿದ ಸರ್ವಧರ್ಮ ಸಮ್ಮೇಳನದಲ್ಲಿ ಅನೇಕ ವಿದ್ವಾಂಸರು ಸರ್ವಧರ್ಮಗಳ ಸಾರವನ್ನು ಸಂದೇಶರೂಪದಲ್ಲಿ ನೀಡಿ ಸಾರ್ಥಕ ಬದುಕಿಗೆ ಮಾರ್ಗದರ್ಶನ ನೀಡಿದ್ದಾರೆ. ಸಭ್ಯ, ಸುಸಂಸ್ಕøತ ನಾಗರಿಕತೆಯುಧರ್ಮದ ಮೂಲ ಜೀವದ್ರವ್ಯವಾಗಿದೆ.

ಧರ್ಮ ಮತ್ತು ಸೇವೆಗಳು ಜೊತೆಯಲ್ಲೆ ಸಾಗಬೇಕು. ಧರ್ಮದ ಮರ್ಮವಿರುವುದು ಆಚರಣೆಯಲ್ಲಿ ಆದುದರಿಂದ ಆಚಾರಕ್ಕೂ, ವಿಚಾರಕ್ಕೂ, ನಡೆಗೂ, ನುಡಿಗೂ ವ್ಯತ್ಯಾಸ ಇರಬಾರದು ಎಂದು ಅಭಿಪ್ರಾಯಪಟ್ಟರು. ಹಾಗೂ ತಾನು ಧರ್ಮಸ್ಥಳದ ಧರ್ಮಾಧಿಕಾರಿ ಪಟ್ಟಾಭಿಷಿಕ್ತನಾದಬಳಿಕ ಪ್ರಗತಿಪರ ಚಿಂತನೆಗಳೊಂದಿಗೆ ಲೋಕಕಲ್ಯಾಣಕ್ಕಾಗಿ ಹಮ್ಮಿಕೊಂಡ ಸೇವಾ ಕಾರ್ಯಗಳ ಮಾಹಿತಿ ನೀಡಿ ನೂರಾರು ಜನಪರ ಯೋಜನೆಗಳಿಂದ ಧರ್ಮಸ್ಥಳದಲ್ಲಿ ನಿತ್ಯೋತ್ಸವವಾಗಿದೆ ಎಂದರು.

ಶಾಸಕ ಹರೀಶ್ ಪೂಂಜ ಮತ್ತು ವಿಧಾನ ಪರಿಷತ್ ಸದಸ್ಯ ಕೆ.ಪ್ರತಾಪಸಿಂಹ ನಾಯಕ್ ಉಪಸ್ಥಿತರಿದ್ದು, ಸ್ವಾಗತ ಸಮಿತಿಯ ಉಪಾಧ್ಯಕ್ಷ ಡಿ.ಸುರೇಂದ್ರಕುಮಾರ್, ಉಪನ್ಯಾಸಕರಾದ ಡಾ| ಸಫ್ರ್ರಾಜ್ ಚಂದ್ರಗುತ್ತಿ, ಡಾ| ಎಂ.ಎಸ್. ಪದ್ಮ ಮತ್ತು ವೀರೇಶ್ ಮೊರಾಸ್ ಅವರನ್ನು ಗೌರವಿಸಿದರು.


ಉಜಿರೆ ಎಸ್.ಡಿ.ಎಂ ಕಾಲೇಜ್‍ನ ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ| ಬಿ.ಎ ಕುಮಾರ ಹೆಗ್ಡೆ ಕಾರ್ಯಕ್ರಮ ನಿರ್ವಹಿಸಿದ್ದು ಧರ್ಮಸ್ಥಳದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಉಮೇಶ್ ಕುರ್ಮಾಣಿ ಧನ್ಯವಾದವಿತ್ತರು.

 




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here