Friday 29th, March 2024
canara news

ಸಮವಸರಣ ಪೂಜೆ

Published On : 05 Dec 2021   |  Reported By : Rons Bantwal


ಧರ್ಮಸ್ಥಳದಲ್ಲಿ ಶನಿವಾರ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಸಮವಸರಣ ಪೂಜೆ ನಡೆಯಿತು.

ಉಜಿರೆ: ಧರ್ಮಸ್ಥಳದಲ್ಲಿ ಶನಿವಾರ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಸಮವಸರಣ ಪೂಜೆ ನಡೆಯಿತು. ಪಂಚನಮಸ್ಕಾರ ಮಂತ್ರ ಪಠಣ, ಭಜನೆ, ಸ್ತೋತ್ರ ಹಾಗೂ ಪೂಜಾ ಮಂತ್ರ ಪಠಣದೊಂದಿಗೆ ಅಷ್ಟವಿಧಾರ್ಚನೆ ಪೂಜೆ ನಡೆಯಿತು.

ಸುಶ್ರಾವ್ಯ ಗಾಯನ ಪೂಜೆಗೆ ವಿಶೇಷ ಮೆರುಗನ್ನು ನೀಡಿತು. ಶ್ರೀ ಬಾಹುಬಲಿ ಸೇವಾ ಸಮಿತಿಯ ಸದಸ್ಯರು ಸಹಕರಿಸಿದರು.

ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಹೇಮಾವತಿ ವಿ. ಹೆಗ್ಗಡೆಯವರು, ಶ್ರೀಮತಿ ಶ್ರದ್ಧಾ ಅಮಿತ್, ಡಿ. ಸುರೇಂದ್ರ ಕುಮಾರ್, ಅನಿತಾ ಸುರೇಂದ್ರ ಕುಮಾರ್, ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್ ಮತ್ತು ಕುಟುಂಬಸ್ಥರು ಉಪಸ್ಥಿತರಿದ್ದರು.

ಅನೇಕಾಂತವಾದದ ಬಗ್ಗೆ ವಿಶೇಷ ಉಪನ್ಯಾಸ ನೀಡಿದ ಗೇರುಕಟ್ಟೆ ಸರ್ಕಾರಿ ಪದವಿಪೂರ್ವ ಕಾಲೇಜಿನ ಶಿಕ್ಷಕ ಅಜಿತ್ ಕುಮಾರ್ ಕೊಕ್ರಾಡಿ ಮಾತನಾಡಿ, ಮನ,ವಚನ ಮತ್ತು ಕಾಯದಿಂದ ಆಚಾರದಲ್ಲಿ ಅಹಿಂಸೆ ಮತ್ತು ವಿಚಾರದಲ್ಲಿ ಅನೇಕಾಂತವಾzದ ಪಾಲನೆ ಮಾಡಿದರೆ ಆತ್ಮಕಲ್ಯಾಣದೊಂದಿಗೆ ಲೋಕಕಲ್ಯಾಣವೂ ಆಗುತ್ತದೆ. ತನ್ಮೂಲಕ ವಿಶ್ವಶಾಂತಿ ಲಭಿಸುತ್ತದೆ ಎಂದು ಹೇಳಿದರು.

ಅಹಿಂಸೆ, ಅನೇಕಾಂತವಾದ ಮತ್ತು ಅಪರಿಗ್ರಹ ಜೈನ ಧರ್ಮದ ಶ್ರೇಷ್ಠ ತತ್ವಗಳಾಗಿದ್ದು ಇವುಗಳ ಅನುಷ್ಠಾನದಿಂದ ವಿಶ್ವಶಾಂತಿ ಉಂಟಾಗುತ್ತದೆ. ವ್ಯವಹಾರ ಧರ್ಮ ಮತ್ತು ನಿಶ್ಚಯ ಧರ್ಮದ ಸಮನ್ವಯದಿಂದ ಎಲ್ಲರೂ ಸುಖ-ಶಾಂತಿ, ನೆಮ್ಮದಿಯ ಜೀವನ ನಡೆಸಲು ಸಾಧ್ಯವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.

ಪಾಕತಜ್ಷರಾದ ಪೆರಾಡಿಯ ನಾಗರಾಜ ಶೆಟ್ಟಿ ಮತ್ತು ಕನ್ನಡಿಕಟ್ಟೆಯ ಶಶಿಕಾಂತ ಜೈನ್ ಅವರನ್ನು ಸನ್ಮಾನಿಸಲಾಯಿತು.

ಮಹಾವೀರ ಜೈನ್ ಇಚ್ಲಂಪಾಡಿ ಕಾರ್ಯಕ್ರಮ ನಿರ್ವಹಿಸಿ ಕೊನೆಯಲ್ಲಿ ಧನ್ಯವಾದವಿತ್ತರು.




More News

ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
 ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ
ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ

Comment Here