Wednesday 17th, August 2022
canara news

`ತುಳುವ ಐಸಿರ ಪ್ರಶಸ್ತಿ' ಮುಡಿಗೇರಿಸಿಕೊಂಡ ಕಡಂದಲೆ ಸುರೇಶ್ ಎಸ್.ಭಂಡಾರಿ

Published On : 19 Dec 2021   |  Reported By : Rons Bantwal


ಮುಂಬಯಿ (ಆರ್‍ಬಿಐ), ಡಿ.18: ಕನ್ನಡ ಮತ್ತು ಸಂಸ್ಕøತಿ ಇಲಾಖೆ ಬೆಂಗಳೂರು ಇವುಗಳ ಜಂಟಿ ಆಶ್ರಯದಲ್ಲಿ ಇಂದಿಲ್ಲಿ ಶನಿವಾರ ಬೆಂಗಳೂರು ಇಲ್ಲಿನ ರವೀಂದ್ರ ಕಲಾಕ್ಷೇತ್ರದಲ್ಲಿ ದತ್ತಿ ಪುರಸ್ಕಾರ ಸಮಾರಂಭ ಮತ್ತು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಗೌರವ ಚಾವಡಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಸಲ್ಪಟ್ಟಿತು.

ಶ್ರೀ ಕ್ಷೇತ್ರ ಧರ್ಮಸ್ಥಳ ಇದರ ಧರ್ಮಾಧಿಕಾರಿ ರಾಜರ್ಷಿ ಡಾ| ವೀರೇಂದ್ರ ಹೆಗ್ಗಡೆ ಮತ್ತು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಜಿ.ಕತ್ತಲ್‍ಸಾರ್ ಪ್ರಶಸ್ತಿಗಳನ್ನು ಪ್ರದಾನಿಸಿ ಪುರಸ್ಕೃತರಿಗೆ ಅಭಿನಂದಿಸಿದರು.

ಕಚ್ಚೂರು ಶ್ರೀ ನಾಗೇಶ್ವರ ದೇವಸ್ಥಾನ ಬಾರ್ಕೂರು ಉಡುಪಿ ಇದರ ಆಡಳಿತ ಮೊಕ್ತೇಸರ ಮತ್ತು ಅಧ್ಯಕ್ಷರಾಗಿ, ಮನಿಫೆÇೀಲ್ಡ್ ಕೋ.ಅಪರೇಟಿವ್ ಕ್ರೆಡಿಟ್ ಸೊಸೈಟಿ ಲಿಮಿಟೆಡ್ ಮುಂಬಯಿ ಇದರ ಕಾರ್ಯಾಧ್ಯಕ್ಷ, ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ ಇದರ ಸಲಹಾ ಸಮಿತಿ ಸದಸ್ಯ, ಕಡಂದಲೆ ಸುರೇಶ್ ಭಂಡಾರಿ ಚಾರಿಟೇಬಲ್ ಫ್ಯಾಮಿಲಿ ಟ್ರಸ್ಟ್ ಹಾಗೂ ಸಾಯಿನಾಥ್ ಮಿತ್ರ ಮಂಡಳ್ (ನೋ.) ಕಪ್‍ಪರೇಡ್ ಮುಂಬಯಿ ಇದರ ಸಂಸ್ಥೆಯ ಸಂಸ್ಥಾಪಕಧ್ಯಕ್ಷ ನಾಗೇಶ್ವರ ಸಿನಿ ಕ್ರಿಯೇಷನ್ಸ್‍ನ ಆಡಳಿತ ನಿರ್ದೇಶಕ, ಚಲನಚಿತ್ರ ನಿರ್ಮಾಪಕ, ಭಂಡಾರಿ ಮಹಾ ಮಂಡಲ ಇದರ ಸಮಾಜ ಸೇವಕ ಸ್ಥಾಪಕಾಧ್ಯಕ್ಷ ಕಡಂದಲೆ ಸುರೇಶ್ ಎಸ್.ಭಂಡಾರಿ ಇವರಿಗೆ `ತುಳುವ ಐಸಿರ ಪ್ರಶಸ್ತಿ' ಪ್ರದಾನಿಸಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಅಕಾಡೆಮಿ ಸದಸ್ಯೆ (ಸಂಚಾಲಕಿ) ಕಾಂತಿ ಶೆಟ್ಟಿ, ರಿಜಿಸ್ಟ್ರಾರ್ ಕವಿತಾ, ಡಿ.ಸುರೇಂದ್ರ ಕುಮಾರ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

 
More News

ಧರ್ಮಸ್ಥಳದಲ್ಲಿ ವ್ಯಸನ ಮುಕ್ತರಾದ ನವಜೀವನ ಸದಸ್ಯರ  ಶತದಿನೋತ್ಸವ ಆಚರಣೆ
ಧರ್ಮಸ್ಥಳದಲ್ಲಿ ವ್ಯಸನ ಮುಕ್ತರಾದ ನವಜೀವನ ಸದಸ್ಯರ ಶತದಿನೋತ್ಸವ ಆಚರಣೆ
ವಿಶ್ವವಿದ್ಯಾಪೀಠ ವಿಶ್ವ ಬೆಳಗುವ ಕಾರ್ಯ: ರಾಘವೇಶ್ವರ ಶ್ರೀ
ವಿಶ್ವವಿದ್ಯಾಪೀಠ ವಿಶ್ವ ಬೆಳಗುವ ಕಾರ್ಯ: ರಾಘವೇಶ್ವರ ಶ್ರೀ
ಕನ್ನಡ ಭವನ ಮುಂಬಯಿ ಪ್ರಾಂಶುಪಾಲರಾಗಿ ಅಮೃತಾ ಅಜಯ್ ಶೆಟ್ಟಿ ಭಡ್ತಿ
ಕನ್ನಡ ಭವನ ಮುಂಬಯಿ ಪ್ರಾಂಶುಪಾಲರಾಗಿ ಅಮೃತಾ ಅಜಯ್ ಶೆಟ್ಟಿ ಭಡ್ತಿ

Comment Here