Friday 9th, May 2025
canara news

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಮಾಜ ಕಲ್ಯಾಣೋತ್ಸವ ಕಾರ್ಯಕ್ರಮ

Published On : 30 Jan 2022   |  Reported By : Rons Bantwal


ಬಂಟರು ಕೆಲಸವನ್ನು ಸುಲಭದಲ್ಲಿ ಬಿಡುವವರಲ್ಲ : ಆನಂದ್ ಎಂ.ಶೆಟ್ಟಿ

ಮುಂಬಯಿ (ಆರ್‍ಬಿಐ), ಜ.28: ಬಂಟರು ಧೈರ್ಯಶಾಲಿಗಳು. ಹಿಡಿದ ಕೆಲಸವನ್ನು ಸುಲಭದಲ್ಲಿ ಬಿಡುವವರಲ್ಲ. ಕೆಲಸದಲ್ಲಿ ಶ್ರದ್ಧೆ, ಭಕ್ತಿ ಇದ್ದಾಗ ಮಾತ್ರ ಕೈ ಗೊಳ್ಳುವ ಕೆಲಸ ಕಾರ್ಯಗಳು ಪೂರ್ಣಗೊಳ್ಳುತ್ತದೆ. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾಗಿ ಐಕಳ ಹರೀಶ್ ಶೆಟ್ಟಿ ಅವರು ಕಳೆದ ನಾಲ್ಕು ವರ್ಷಗಳಲ್ಲಿ ಬಿಡುವಿಲ್ಲದೆ ಕೆಲಸ ಮಾಡಿದ್ದಾರೆ. ಐಕಳ ಅವರಲ್ಲಿ ನಾಯಕತ್ವದ ಗುಣ ಮತ್ತು ಹೃದಯಶ್ರೀಮಂತಿಕೆ ಇದೆ. ಅವರಂತಹ ನಾಯಕರು ಬಂಟ ಸಮಾಜಕ್ಕೆ ಬೇಕು. ಸಮಾಜದಲ್ಲಿ ಕಷ್ಟದಲ್ಲಿರುವ ಕುಟುಂಬಗಳ ಕಣ್ಣೀರನ್ನು ಒರೆಸುವ ಕೆಲಸ ಐಕಳ ಮಾಡುತ್ತಿದ್ದಾರೆ. ಅವರು ಬಂಟ ಸಮಾಜಕ್ಕೊಂದು ಶಕ್ತಿ ತುಂಬಿದ್ದಾರೆ. ಅವರಿಂದ ಸಮಾಜಕ್ಕೆ ತುಂಬಾ ಕೆಲಸ ಕಾರ್ಯಗಳು ಆಗಬೇಕು. ಆ ನಿಟ್ಟಿನಲ್ಲಿ ನಾವೆಲ್ಲರೂ ಅವರೊಂದಿಗೆ ಕೈ ಜೋಡಿಸೋಣ ಎಂದು ಮುಂಬಯಿಯ ಆರ್ಗನಿಕ್ ಕೆಮಿಕಲ್ಸ್ ಸಂಸ್ಥೆಯ ಕಾರ್ಯಾಧ್ಯಕ್ಷ ಆನಂದ್ ಎಂ.ಶೆಟ್ಟಿ ತಿಳಿಸಿದರು.

ಜಾಗತಿಕ ಬಂಟರ ಸಂಘಗಳ ಒಕ್ಕೂಟ (ಫೆಡರೇಶನ್ ಆಫ್ ವರ್ಲ್ಡ್ ಬಂಟ್'ಸ್ ಅಸೋಸಿಯೇಶನ್'ಸ್) ಬಂಟ್ಸ್ ಹಾಸ್ಟೇಲ್‍ನ ಅಮೃತಮಹೋತ್ಸವ ಕಟ್ಟಡದ ಸಭಾಂಗಣದಲ್ಲಿ ಬಂಟ್ಸ್ ಫೆಡರೇಶನ್ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆಸಲ್ಪಟ್ಟ ಸಮಾಜ ಕಲ್ಯಾಣೋತ್ಸವ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಚೆಕ್ ವಿತರಿಸಿ ಆನಂದ್ ಶೆಟ್ಟಿ ಮಾತನಾಡಿದರು.

ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಅತಿಥಿü ಅಭ್ಯಾಗತರಾಗಿದ್ದು ಮಾತನಾಡಿ ಕರಾವಳಿ ಭಾಗದಲ್ಲಿ ಆರ್ಥಿಕತೆಯನ್ನು ಹೆಚ್ಚಿಸುವ ಕೆಲಸವನ್ನು ಮುಂಬೈಯಲ್ಲಿ ನೆಲೆಸಿರುವ ಬಂಟರು ಮಾಡಿದ್ದಾರೆ. ಎಲ್ಲಾ ಕ್ಷೇತ್ರಗಳಲ್ಲೂ ಬಂಟರ ಕೊಡುಗೆ ಇದೆ. ಊರಿನಲ್ಲಿ ನಡೆಯುವ ಹತ್ತಾರು ಕೆಲಸ ಕಾರ್ಯಗಳಿಗೆ ಮುಂಬಯಿಯಲ್ಲಿರುವ ಬಂಟರು ದೇಣಿಗೆಯನ್ನು ನೀಡುವ ಮೂಲಕ ಸಮಾಜ ಸೇವೆಯಲ್ಲಿ ಮುಂಚೂಣಿಯಲ್ಲಿದ್ದಾರೆ. ನನಗೆ ರಾಜಕೀಯ ಶಕ್ತಿಯನ್ನು ತುಂಬಿದವರು ಬಂಟರು. ಈ ಸಮಾಜದೊಂದಿಗೆ ಯಾವತ್ತೂ ಕೈ ಜೋಡಿಸಿ ಕೆಲಸ ಮಾಡುವೆ ಎಂದರು.

ಮುಂಬಯಿ ಉದ್ಯಮಿ ಶಶಿಧರ ಶೆಟ್ಟಿ ಇನ್ನಂಜೆ ಮಾತನಾಡಿ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಕಳೆದ ನಾಲ್ಕು ವರ್ಷಗಳಲ್ಲಿ 9 ಕೋಟಿ ರೂಪಾಯಿಗೂ ಮಿಕ್ಕಿ ಸಹಾಯಧನ ನೀಡಿರುವುದು ಶ್ಲಾಘನೀಯ ಎಂದರು.

ಐಕಳ ಹರೀಶ್ ಶೆಟ್ಟಿ ಅಧ್ಯಕ್ಷೀಯ ಭಾಷಣಗೈದು ಬಂಟರ ಸಮಾಜ ಎಲ್ಲರನ್ನೂ ಪ್ರೀತಿಸುತ್ತದೆ. ಕಷ್ಟ ಬಂದಾಗ ಕುಗ್ಗದಿರಿ, ಕಷ್ಟ ಎಲ್ಲರಿಗೂ ಇದೆ. ಜಾಗತಿಕ ಬಂಟರ ಸಂಘಗಳ ಒಕ್ಕೂಟ ಸಮಾಜ ಕಲ್ಯಾಣ ಕಾರ್ಯಕ್ರಮದ ಮೂಲಕ ಸಮಾಜದಲ್ಲಿರುವ ಬಡವರ ಕಣ್ಣೀರನ್ನು ಒರೆಸುವ ಕೆಲಸ ಮಾಡುತ್ತಿದೆ. ಇದು ನಿತ್ಯ ನಿರಂತರ ನಡೆಯಲಿದೆ. ಬಂಟ ಸಮಾಜ ಎಲ್ಲರನ್ನೂ ಪ್ರೀತಿಸುವ ಸಮಾಜ, ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯುವ ಸಮಾಜ. ಹೀಗಾಗಿ ಬೇರೆ ಸಮಾಜದವರ ಕಷ್ಟಗಳಲ್ಲೂ ಒಕ್ಕೂಟ ಪಾಲ್ಗೊಳ್ಳುತ್ತದೆ. ಸಹಾಯ ಹಸ್ತವನ್ನು ಕೂಡಾ ನೀಡುತ್ತದೆ ಎಂದÀರು.

ಮೂವತ್ತು ಸೆನ್ಸ್ ಜಾಗ ಕೊಡಿ: ಬಂಟರ ಒಕ್ಕೂಟದ ಕಾರ್ಯ ವೈಖರಿಯನ್ನು ಮನಸಾರೆ ಕೊಂಡಾಡಿದ ಶಾಸಕರಲ್ಲಿ ಐಕಳ ಹರೀಶ್ ಪ್ರಸ್ತಾವನೆಯೊಂದನ್ನು ಸಲ್ಲಿಸಿ ಬಂಟರ ಸಂಘಗಳ ಒಕ್ಕೂಟವು ದಾನಿಗಳಿಂದ ಪಡೆದ ಹಣವನ್ನು ಸಮಾಜದಲ್ಲಿರುವ ಜನರಿಗೆ ನೀಡುತ್ತಿದೆ. ಮುಂದಿನ ದಿನಗಳಲ್ಲಿ ಒಕ್ಕೂಟಕ್ಕೆ ಆದಾಯ ತರುವ ನಿಟ್ಟಿನಲ್ಲಿ ಮಂಗಳೂರು ನಗರದಲ್ಲಿ ಕನಿಷ್ಠ 30ಸೆನ್ಸ್ ಜಾಗ ದೊರಕಿಸಿ ಕೊಟ್ಟಲ್ಲಿ ಅದರಲ್ಲಿ ಸಭಾಭವನ ನಿರ್ಮಿಸಿ ಅದರಿಂದ ಬರುವ ಹಣವನ್ನು ಎಲ್ಲಾ ಸಮಾಜಕ್ಕೆ ವಿನಿಯೋಗಿಸುತ್ತೇವೆ ಎಂದು ಐಕಳ ಹರೀಶ್ ಶೆಟ್ಟಿ ತಿಳಿಸಿದರು.

ಒಕ್ಕೂಟದ ಕೋಶಾಧಿಕಾರಿ ಉಳ್ತೂರು ಮೋಹನ್‍ದಾಸ ಶೆಟ್ಟಿ, ಮಾಜಿ ಮೇಯರ್ ದಿವಾಕರ ಪಾಂಡೇಶ್ವರ್, ಕಾಪೆರ್Çೀರೇಟರ್ ಮನೋಹರ ಶೆಟ್ಟಿ ಉಪಸ್ಥಿತರಿದ್ದು ಅತಿಥಿüಗಳು ಪೆÇ್ರ| ಭಾಸ್ಕರ್ ರೈ ಕುಕ್ಕುವಳ್ಳಿ, ಕರ್ನಾಟಕ ಯಕ್ಷಗಾನ ಅಕಾಡೆಮಿ ಸದಸ್ಯ ಕದ್ರಿ ನವನೀತ ಶೆಟ್ಟಿ, ಪತ್ರಕರ್ತ ಬಿ.ರವೀಂದ್ರ ಶೆಟ್ಟಿ, ಪ್ರದೀಪ್ ಕುಮಾರ್ ರೈ ಐಕಳ ಬಾವ, ಶಿಕ್ಷಕ ಸಾಯಿನಾಥ ಶೆಟ್ಟಿ ಮುಂಡ್ಕೂರು, ಪಿಎಚ್‍ಡಿ ಪದವಿ ಪಡೆದ ಡಾ| ಸುಧಾರಾಣಿ, ಡಾ| ಅಂಪಾರು ನಿತ್ಯಾನಂದ ಶೆಟ್ಟಿ, ಶಿವಾನಿ ಶೆಟ್ಟಿ ಅವರನ್ನು ಸನ್ಮಾನಿಸಿ ಅಭಿನಂದಿಸಿದರು. ಅಂತೆಯೇ ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡಿರುವ ಬಂಟ್ವಾಳ ಬಂಟರ ಸಂಘದ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ರಂಗೋಲಿ, ಪುತ್ತೂರು ಬಂಟರ ಸಂಘದ ಅಧ್ಯಕ್ಷ ಬೊಲ್ಯೊಟ್ಟು ಶಶಿಧರ ಶೆಟ್ಟಿ, ಮುಲ್ಕಿ ಬಂಟರ ಸಂಘದ ಅಧ್ಯಕ್ಷ ಪುರುಷೋತ್ತಮ ಶೆಟ್ಟಿ, ಬೆಳ್ಳಂಪಳ್ಳಿ ಬಂಟರ ಸಂಘದ ಅಧ್ಯಕ್ಷ ಅಶೋಕ್ ಶೆಟ್ಟಿ, ಗುರುಪುರ ಬಂಟರ ಸಂಘದ ಅಧ್ಯಕ್ಷ ಸಂತೋಷ ಶೆಟ್ಟಿ ಅವರನ್ನೂ ಗೌರವಿಸಲಾಯಿತು.

ಸಮಾಜ ಕಲ್ಯಾಣ ಯೋಜನೆಯಡಿ ಒಟ್ಟು 95 ಮಂದಿಗೆ 30 ಲಕ್ಷ ರೂಪಾಯಿ ಪರಿಹಾರ ಧನದ ಚೆಕ್‍ನ್ನು ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ವಿತರಿಸಿದರು. ಪ್ರತೀ ತಿಂಗಳು ಸಮಾಜ ಕಲ್ಯಾಣ ಕಾರ್ಯಕ್ರಮ ನಡೆಯುತ್ತಿದ್ದು, ಈ ಬಾರಿ ವೈದ್ಯಕೀಯ, ಮದುವೆ, ಶಿಕ್ಷಣ, ದತ್ತು ಸ್ವೀಕಾರ, ಮನೆ ರಿಪೇರಿ ಮತ್ತು ಮನೆ ನಿರ್ಮಾಣಕ್ಕೆ ಫಲಾನುಭವಿಗಳಿಗೆ ಚೆಕ್‍ನ್ನು ವಿತರಿಸಲಾಯಿತು.

ಉದಯಕುಮಾರ್ ರೈ ಪ್ರಾರ್ಥನೆಗೈದರು. ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ ಪ್ರಸ್ತಾವನೆಗೈದರು. ಪುರುಷೋತ್ತಮ ಭಂಡಾರಿ ಅಡ್ಯಾರ್, ಶರತ್ ಶೆಟ್ಟಿ ಕಿನ್ನಿಗೋಳಿ, ಸತೀಶ್ ಅಡಪ ಸಂಕಬೈಲ್ ಸನ್ಮಾನ ಪತ್ರ ವಾಚಿಸಿದರು. ಜತೆ ಕಾರ್ಯದರ್ಶಿ ಸತೀಶ್ ಅಡಪ ಸಂಕಬೈಲ್ ಫಲಾನುಭವಿಗಳ ಹೆಸರನ್ನು ವಾಚಿಸಿದರು. ನವೀನ್ ಶೆಟ್ಟಿ ಎಡ್ಮೆಮಾರ್ ಕಾರ್ಯಕ್ರಮ ನಿರ್ವಹಿಸಿದರು. ಜಯಕರ ಶೆಟ್ಟಿ ಇಂದ್ರಾಳಿ ವಂದಿಸಿದರು.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here