Wednesday 4th, October 2023
canara news

ಜಾಗತಿಕ ಬಂಟ ಪ್ರತಿಷ್ಠಾನದಿಂದ ಮಾಧ್ಯಮ ಅಕಾಡೆಮಿ ಸದಸ್ಯ ಬಾಳ ಜಗನ್ನಾಥ ಶೆಟ್ಟಿಗೆ ಸನ್ಮಾನ

Published On : 06 Feb 2022   |  Reported By : Rons Bantwal


ಮುಂಬಯಿ (ಆರ್‍ಬಿಐ), ಫೆ.04: ಜಾಗತಿಕ ಬಂಟ ಪ್ರತಿಷ್ಠಾನ (ರಿ.) ಇದರ 25ನೇ ಮಹಾಸಭೆ ಮಂಗಳೂರುನ ಮೋತಿಮಹಲ್ ಹೋಟೆಲ್ ನಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿಯ ಸದಸ್ಯ, ಹಿರಿಯ ಪತ್ರಕರ್ತ ಜಗನ್ನಾಥ ಶೆಟ್ಟಿ ಬಾಳ ಅವರನ್ನು ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ ಸನ್ಮಾನಿಸಲಾಯಿತು. ಜಾಗತಿಕ ಬಂಟ ಪ್ರತಿಷ್ಠಾನದ ಅಧ್ಯಕ್ಷ ಎ.ಜೆ. ಶೆಟ್ಟಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ ಶೆಟ್ಟಿ ಸನ್ಮಾನಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಸಿಎ. ಸುಧೀರ್ ಕುಮಾರ್ ಶೆಟ್ಟಿ, ಉಪಾಧ್ಯಕ್ಚ ಕುಶಾಲ್ ಎಸ್.ಹೆಗ್ಡೆ ಪುಣೆ, ಕೋಶಾಧಿಕಾರಿ ಸಿಎ. ಪಿ ರಘುಚಂದ್ರ ಶೆಟ್ಟಿ, ಸಂಜೀವ ರೈ, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಇದರ ಆಡಳಿತ ನಿರ್ದೇಶಕ ಹಾಗೂ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ರಾಜ್ ಕಿರಣ್ ರೈ ಮೊದಲಾದವರು ಉಪಸ್ಥಿತರಿದ್ದರು.

 




More News

ಇಪ್ಪತ್ತ ಆರನೇ ವಾರ್ಷಿಕೋತ್ಸವ ಸಂಭ್ರಮಿಸಿದ ಗಾಣಿಗ ಸಮಾಜ ಮುಂಬಯಿ
ಇಪ್ಪತ್ತ ಆರನೇ ವಾರ್ಷಿಕೋತ್ಸವ ಸಂಭ್ರಮಿಸಿದ ಗಾಣಿಗ ಸಮಾಜ ಮುಂಬಯಿ
ಭಾರತ್ ಬ್ಯಾಂಕ್‍ನ 2023-28 ಸಾಲಿನ ನಿರ್ದೇಶಕ ಮಂಡಳಿ ಚುನಾವಣೆ
ಭಾರತ್ ಬ್ಯಾಂಕ್‍ನ 2023-28 ಸಾಲಿನ ನಿರ್ದೇಶಕ ಮಂಡಳಿ ಚುನಾವಣೆ
ನೆರೂಲ್‍ನ ಬಿಎಸ್‍ಕೆಬಿಎ ಆಶ್ರಯದಲ್ಲಿ ನಡೆಸಲ್ಪಟ್ಟ ಜೇಷ್ಠ ನಾಗರಿಕರ ದಿನಾಚರಣೆ
ನೆರೂಲ್‍ನ ಬಿಎಸ್‍ಕೆಬಿಎ ಆಶ್ರಯದಲ್ಲಿ ನಡೆಸಲ್ಪಟ್ಟ ಜೇಷ್ಠ ನಾಗರಿಕರ ದಿನಾಚರಣೆ

Comment Here