Friday 9th, June 2023
canara news

ಬಂಟರ ಸಂಘ ಮುಂಬಯಿ ಇದರ ಬಂಟ್ಸ್ ಗಾಟ್ ಟ್ಯಾಲೆಂಟ್-ಸಾಂಸ್ಕøತಿಕ ವೈವಿಧ್ಯಕ್ಕೆ ಚಾಲನೆ

Published On : 27 Feb 2022   |  Reported By : Rons Bantwal


(ಚಿತ್ರ / ವರದಿ : ರೋನ್ಸ್ ಬಂಟ್ವಾಳ್)

ಮುಂಬಯಿ, 27: ಬಂಟರ ಸಂಘ ಮುಂಬಯಿ ತನ್ನ ವಾರ್ಷಿಕ ಸ್ನೇಹ ಸಮ್ಮಿಲನ ನಿಮಿತ್ತ ಇಂದಿಲ್ಲಿ ಭಾನುವಾರ ಅಪರಾಹ್ನ ಕುರ್ಲಾ ಪೂರ್ವದ ಬಂಟರ ಭವನದ ಶ್ರೀಮತಿ ರಾಧಾಬಾಯಿ ಟಿ.ಭಂಡಾರಿ ಸಭಾಗೃಹದಲ್ಲಿ ಬಂಟ್ಸ್ ಗಾಟ್ ಟ್ಯಾಲೆಂಟ್ ಸಾಂಸ್ಕøತಿಕ ವೈವಿಧ್ಯ ಕಾರ್ಯಕ್ರಮ ಆಯೋಜಿಸಿದ್ದು ಬಂಟರ ಸಂಘದ ಅಧ್ಯಕ್ಷ ಚಂದ್ರಹಾಸ ಕೆ.ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆಸಲ್ಪಟ್ಟ ಕಾರ್ಯಕ್ರಮವನ್ನು ಉತ್ತರ ಮುಂಬಯಿ ಲೋಕಸಭಾ ಕ್ಷೇತ್ರದ ಸಂಸದ ಗೋಪಾಲ್ ಸಿ.ಶೆಟ್ಟಿ ಮುಖ್ಯ ಅತಿಥಿsಯಾಗಿದ್ದು, ಕಲ್ಪವೃಕ್ಷದ ಹಿಂಗಾರ ಅರಳಿಸಿ ಕಲಸೆಗೆ ಅಕ್ಷತೆ ಸುರಿದು ಉದ್ಘಾಟಿಸಿದರು.

ಬಂಟ ಸಂಘದ ಆದೇಶ ನನಗೆ ದೊಡ್ಡದಾಗಿದೆ. ಬಂಟ ಸಮುದಾಯದಲ್ಲಿನ ಹುಟ್ಟು ನನ್ನ ಸಾಧನೆಗೆ ವರವಾಗಿದೆ. ಸಾಧಕರ ಸನ್ಮಾನದಿಂದ ಮತ್ತಷ್ಟು ಉತ್ಥೇಜನ ಸಾಧ್ಯವಾಗುವುದು. ಇದಕ್ಕೆ ಈ ಸಡಗರ ಪೂರಕವಾಗಿದೆ. ಬಂಟರ ಏಕತೆಯ ಈ ಸಂಕಲ್ಪ ಭಾವೀ ಜನಾಂಕಕ್ಕೆ ಪ್ರೇರಣೆಯಾಗಲಿ. ನಮ್ಮ ಇಂತಹ ಸಾಂಘಿಕತೆ ಭವಿಷ್ಯತ್ತಿನ್ನುದ್ದಕ್ಕೂ ಪಸರಿಸಲಿ ಎಂದು ಸಂಸದ ಗೋಪಾಲ್ ಶೆಟ್ಟಿ ಶುಭಶಂಸನೆಗೈದರು.


ಈ ವೇಳೆ ಬಂಟರ ಸಂಘದ ಉಪಾಧ್ಯಕ್ಷ ಉಳ್ತೂರು ಮೋಹನ್‍ದಾಸ್ ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಡಾ| ಆರ್.ಕೆ ಶೆಟ್ಟಿ, ಗೌ| ಕೋಶಾಧಿಕಾರಿ ಸಿಎ| ಹರೀಶ್ ಡಿ.ಶೆಟ್ಟಿ, ಜತೆ ಕಾರ್ಯದರ್ಶಿ ದಿವಾಕರ್ ಟಿ.ಶೆಟ್ಟಿ ಇಂದ್ರಾಳಿ, ಜತೆ ಕೋಶಾಧಿಕಾರಿ ಮುಂಡಪ್ಪ ಎಸ್.ಪಯ್ಯಡೆ, ಮಹಿಳಾ ವಿಭಾಗಧ್ಯಕ್ಷೆ ಉಮಾ ಕೆ.ಶೆಟ್ಟಿ, ಯುವ ವಿಭಾಗÀಧ್ಯಕ್ಷ ಸಾಗರ್ ಡಿ.ಶೆಟ್ಟಿ, ಬಿ.ಆರ್ ಶೆಟ್ಟಿ, ಶಾಂತರಾಮ್ ಶೆಟ್ಟಿ ಮತ್ತಿತರ ಗಣ್ಯರು ವೇದಿಕೆಯಲ್ಲಿದ್ದರು. ಸ್ಪರ್ಧೆಯಾಗಿಸಿ ನಡೆಸಲ್ಪಟ್ಟ ಸಾಂಸ್ಕøತಿಕ ವೈವಿಧ್ಯದಲ್ಲಿ ಎಲ್ಲಾ ಪ್ರಾದೇಶಿಕ ಸಮಿತಿಗಳ ತಂಡಗಳು ತಮ್ಮ ಪ್ರದರ್ಶನವನ್ನು ಪ್ರಸ್ತುತ ಪಡಿಸಿದ್ದು, ಈ ಸಂದರ್ಭದಲ್ಲಿ ಕರ್ನೂರು ಮೋಹನ್ ರೈ, ಅಶೋಕ್ ಪಕ್ಕಳ, ಅನುಪ್ರಿಯಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ಸಂಘದ ವಿಶ್ವಸ್ಥರು, ಮಾಜಿ ಅಧ್ಯಕ್ಷರುಗಳು, ಕಾರ್ಯಕಾರಿ ಸಮಿತಿ ಸದಸ್ಯರು, ಉಪ ಸಮಿತಿಗಳ ಕಾರ್ಯಾಧ್ಯಕ್ಷರು, ಪ್ರಾದೇಶಿಕ ಸಮಿತಿಗಳ ಕಾರ್ಯಾಧ್ಯಕ್ಷರುಗಳು, ಪ್ರಾದೇಶಿಕ ಸಮಿತಿಗಳ ಸಮನ್ವಯಕರು, ಒಂಬತ್ತು ಪ್ರಾದೇಶಿಕ ಸಮಿತಿಗಳ ಮುಖ್ಯಸ್ಥರು, ಮಹಿಳಾ ವಿಭಾಗ, ಯುವ ವಿಭಾಗದ ಪದಾಧಿಕಾರಿಗಳು, ಸದಸ್ಯರನೇಕರು ಉಪಸ್ಥಿತರಿದ್ದು ಸ್ನೇಹ ಸಮ್ಮಿಲನ ಸಂಭ್ರಮಿಸಿದರು.

 




More News

ಕಂಚಿಲಕಟ್ಟೆಯನ್ನು ಬಂಗಾರದ ಕಟ್ಟೆಯಾಗಿಸೋಣ:ಕೊಂಡೆವೂರು ಶ್ರೀಗಳು
ಕಂಚಿಲಕಟ್ಟೆಯನ್ನು ಬಂಗಾರದ ಕಟ್ಟೆಯಾಗಿಸೋಣ:ಕೊಂಡೆವೂರು ಶ್ರೀಗಳು
ಅಶ್ವಿತಾ ಶೆಟ್ಟಿ ಅವರ ಚೊಚ್ಚಲ ಕಥಾ ಸಂಕಲನ ಮರ್ಸಿಡಿಸ್ ಬೆಂಜ್ ಬಿಡುಗಡೆ
ಅಶ್ವಿತಾ ಶೆಟ್ಟಿ ಅವರ ಚೊಚ್ಚಲ ಕಥಾ ಸಂಕಲನ ಮರ್ಸಿಡಿಸ್ ಬೆಂಜ್ ಬಿಡುಗಡೆ
ದಾದ್ರಾ ನಗರ ಹವೇಲಿ ನಗರದ ಸಿಲ್ವಾಸ ಪಾಲಿಕೆಯ ಮೇಯರ್ ಆಗಿ ರಜನಿ ಜಿ.ಶೆಟ್ಟಿ ಆಯ್ಕೆ
ದಾದ್ರಾ ನಗರ ಹವೇಲಿ ನಗರದ ಸಿಲ್ವಾಸ ಪಾಲಿಕೆಯ ಮೇಯರ್ ಆಗಿ ರಜನಿ ಜಿ.ಶೆಟ್ಟಿ ಆಯ್ಕೆ

Comment Here