Monday 8th, August 2022
canara news

ಧರ್ಮಸ್ಥಳ ; ಡಾ| ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ ಭೇಟಿ

Published On : 16 Jul 2022   |  Reported By : Rons Bantwal


ಮುಂಬಯಿ (ಆರ್‍ಬಿಐ), ಜು.11: ಕೇಂದ್ರ ಸರಕಾರದಿಂದ ರಾಜ್ಯಸಭೆಗೆ ಸದಸ್ಯರಾಗಿ ನಾಮ ನಿರ್ದೇಶನ ಗೊಂಡು ನಿಯುಕ್ತಿಗೊಂಡ ಶ್ರೀ ಕ್ಷೇತ್ರ ಧರ್ಮಾಸ್ಥಳ ಇದರ ಧರ್ಮದರ್ಶಿ ರಾಜರ್ಷಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಧರ್ಮಾಸ್ಥಳ ಬೀಡಿನಲ್ಲಿ ಶ್ರೀ ದಿಗಂಬರ ಜೈನ ಮಠ, ಜೈನಕಾಶಿ ಮೂಡಬಿದಿರೆ ಮಹಾಕ್ಷೇತ್ರದ ಜೈನ ಮಹಾಸಂಸ್ಥಾನದ ಪೀಠಾಧ್ಯಕ್ಷ ಭಾರತ ಭೂಷಣ ಜಗದ್ಗುರು ಸ್ವಸ್ತಿಶ್ರೀ ಜಗದ್ಗುರು ಸ್ವಸ್ತಿಶ್ರೀ ಡಾ| ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಮಹಾ ಸ್ವಾಮೀಜಿ ಭೇಟಿ ನೀಡಿ ಶ್ರೀಫಲ ಮಂತ್ರಾಕ್ಷತೆ ನೀಡಿ ಹರಸಿ ಆಶೀರ್ವಾದ ಮಾಡಿದರು.

ಈ ಸಂದರ್ಭ ಪಟ್ಣಶೆಟ್ಟಿ ಸುದೇಶ್ ಕುಮಾರ್, ದಿನೇಶ್ ಕುಮಾರ್, ಆದರ್ಶ್ ಮುಕ್ತೇಸರ, ಶೈಲೇಂದ್ರ ಕುಮಾರ್, ಡಾ| ಎಸ್.ಪಿ ವಿದ್ಯಾ ಕುಮಾರ್, ಮೂಡಬಿದಿರೆ ಮಠದ ವ್ಯವಸ್ಥಾಪಕ ಸಂಜಯಂಥ ಕುಮಾರ್ ಶೆಟ್ಟಿ, ಆದಿತ್ಯ ಜೈನ್ ಉಪಸ್ಥಿತರಿದ್ದರು.

ಧರ್ಮಪಾಲ್ ಯು.ದೇವಾಡಿಗ ಭೇಟಿ:
ವಿವಿಧ ಕ್ಷೇತ್ರಗಳಲ್ಲಿ ಸಲ್ಲಿಸಿದ ಅನುಪಮ, ಅದ್ವೈತ ಸಾಧನೆಗೆ ಮನ್ನಿಸಿ ಕೇಂದ್ರ ಸರ್ಕಾರವು ಕರ್ನಾಟಕ ರಾಜ್ಯದಿಂದ ರಾಷ್ಟ್ರ್ಟ್ರದ ರಾಜ್ಯಸಭೆಗೆ ನಾಮ ನಿರ್ದೇಶಕ ಸಂಸದರಾಗಿ ಮೇಲ್ಮನೆಗೆ ನಿಯುಕ್ತಿಗೊಂಡ ಪೂಜ್ಯ ಖಾವಂದರರನ್ನು ಅಖಿಲ ಭಾರತ ತುಳು ಒಕ್ಕೂಟದ ಅಧ್ಯಕ್ಷ ಧರ್ಮಪಾಲ್ ಯು.ದೇವಾಡಿಗ ಅವರೂ ಭೇಟಿ ನೀಡಿ ಫಲಪುಷ್ಫ ಹಾರವನ್ನಿತ್ತು ಭಕ್ತಿಪೂರ್ವಕವಾಗಿ ಅಭಿನಂದಿಸಿದರು.
More News

ಸಿಟ್ಟು ನಿಯಂತ್ರಣಕ್ಕೆ ಬಂದಷ್ಟೂ ಜೀವನ ಹಸನು: ರಾಘವೇಶ್ವರ ಶ್ರೀ
ಸಿಟ್ಟು ನಿಯಂತ್ರಣಕ್ಕೆ ಬಂದಷ್ಟೂ ಜೀವನ ಹಸನು: ರಾಘವೇಶ್ವರ ಶ್ರೀ
ಜೋಗೇಶ್ವರಿ ಶ್ರೀ ಜಗದಂಬಾ ಕಾಲಭೈರವ ದೇವಸ್ಥಾನದಲ್ಲಿ ನಾಗರ ಪಂಚಮಿ ಆಚರಣೆ
ಜೋಗೇಶ್ವರಿ ಶ್ರೀ ಜಗದಂಬಾ ಕಾಲಭೈರವ ದೇವಸ್ಥಾನದಲ್ಲಿ ನಾಗರ ಪಂಚಮಿ ಆಚರಣೆ
ಜೈನಕಾಶಿ ಮೂಡುಬಿದಿರೆಯಲ್ಲಿ ನಾಗರ ಪಂಚಮಿ ಆಚರಣೆ
ಜೈನಕಾಶಿ ಮೂಡುಬಿದಿರೆಯಲ್ಲಿ ನಾಗರ ಪಂಚಮಿ ಆಚರಣೆ

Comment Here