Tuesday 23rd, April 2024
canara news

ಶಶಿಕಿರಣ್ ಶೆಟ್ಟಿ ಅವರಿಗೆ `ಎಮಿನೆಂಟ್ ಬಂಟ್ ಪರ್ಸನಾಲಿಟಿ ಪ್ರಶಸ್ತಿ'

Published On : 09 Oct 2022   |  Reported By : Rons Bantwal


ಹಿಂದುಳಿದವರ ಅಭಿವೃದ್ಧಿಯಿಂದ ಸಮಾಜದ ಅಭ್ಯುದಯ : ಶಶಿಕಿರಣ್ ಶೆಟ್ಟಿ ಮುಂಬಯಿ

ಮುಂಬಯಿ (ಆರ್‍ಬಿಐ), ಅ.09: ಆಥಿರ್üಕವಾಗಿ ಹಿಂದುಳಿದವರ ಮಕ್ಕಳ ವಿದ್ಯಾಭ್ಯಾಸ ಹಾಗೂ ಮನೆ ನಿರ್ಮಾಣಕ್ಕೆ ನೆರವು ನೀಡುವುದರಿಂದ ಸಮಾಜದ ಅಭ್ಯುದಯ ಸಾಧ್ಯ. ಸಂಕಷ್ಟದಲ್ಲಿ ಇರುವವರಿಗೆ ನೆರವಾಗುವುದು ನಮ್ಮ ಹೊಣೆಗಾರಿಕೆ ಎಂದು ಮುಂಬಯಿಯಲ್ಲಿನ ಪ್ರತಿಷ್ಠಿತ ಉದ್ಯಮಿ, ಆಲ್‍ಕಾರ್ಗೊ ಸಮೂಹ ಸಂಸ್ಥೆಯ ಸ್ಥಾಪಕ ಕಾರ್ಯಾಧ್ಯಕ್ಷ ಶಶಿಕಿರಣ್ ಶೆಟ್ಟಿ ತಿಳಿಸಿದರು.

ಜಾಗತಿಕ ಬಂಟ ಪ್ರತಿಷ್ಠಾನದ ವತಿಯಿಂದ ನಗರದ ಎ.ಜೆ.ಗ್ರ್ಯಾಂಡ್ ಹೋಟೆಲ್‍ನಲ್ಲಿ ಕಳೆದ ಶನಿವಾರ ನಡೆದ ಸಾಧಕರಿಗೆ ಸನ್ಮಾನ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಆಲ್‍ಕಾರ್ಗೊ ಸಮೂಹ ಸಂಸ್ಥೆಯ ವತಿಯಿಂದ ಆಥಿರ್üಕವಾಗಿ ಹಿಂದುಳಿದ 17 ಕುಟುಂಬಗಳಿಗೆ ದಾನದ ರೂಪದಲ್ಲಿ ನೀಡಿದ ಮನೆಗಳ ಕೀಲಿ ಕೈ ಹಸ್ತಾಂತರಿಸಿ ಅವರ ಮಾತನಾಡಿದರು.

ಸ್ವಂತ ಮನೆ ಹೊಂದುವುದು ಪ್ರತಿಯೊಬ್ಬರ ಕನಸು. ಆಥಿರ್üಕ ಸಂಕಷ್ಟದಿಂದ ಇರುವವರು ಮನೆ ನಿರ್ಮಿಸುವು ದು ಕಷ್ಟ ಸಾಧ್ಯವಾಗುತ್ತದೆ. ಸಮಾಜಮುಖಿ ಕಾರ್ಯದಲ್ಲಿ ತೊಡಗಿರುವ ಜಾಗತಿಕ ಬಂಟ ಪ್ರತಿಷ್ಠಾನದ ಕೋರಿಕೆ ಮೇರೆಗೆ ಆಲ್‍ಕಾರ್ಗೊ ಸಂಸ್ಥೆ ಆಥಿರ್üಕವಾಗಿ ಹಿಂದುಳಿದ 17 ಕುಟುಂಬಗಳಿಗೆ ಮನೆ ನಿರ್ಮಾಣ ಮಾಡಿಕೊಡುವ ಮೂಲಕ ಸಮಾಜಕ್ಕೆ ತನ್ನ ಸಣ್ಣ ಕೊಡುಗೆ ನೀಡಿದೆ ಎಂದು ಅವರು ಹೇಳಿದರು.

ಇದೇ ಸಂದರ್ಭ ಜಾಗತಿಕ ಬಂಟ ಪ್ರತಿಷ್ಠಾನದ ವತಿಯಿಂದ ಶಶಿಕಿರಣ್ ಶೆಟ್ಟಿ ಅವರಿಗೆ `ಎಮಿನೆಂಟ್ ಬಂಟ್ ಪರ್ಸನಾಲಿಟಿ' ಪ್ರಶಸ್ತಿ ಪ್ರದಾನಿಸಿ ಗೌರವಿಸಲಾಯಿತು. ಯಕ್ಷಗಾನ ರಂಗದಲ್ಲಿ 50 ವರ್ಷ ಮಿಕ್ಕಿ ಸೇವೆ ಸಲ್ಲಿಸಿದ ಕಂದಾವರ ರಘುರಾಮ ಶೆಟ್ಟಿ ಅವರಿಗೆ ಡಾ| ಡಿ.ಕೆ.ಚೌ ಟ ದತ್ತಿನಿಧಿಯಿಂದ 25 ಸಾವಿರ ರೂಪಾಯಿ ನಗದು, ಫಲಕ ನೀಡಿ ಸನ್ಮಾನಿಸಲಾಯಿತು.

ಭಾರತೀಯ ರೆಡ್‍ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ಅಧ್ಯಕ್ಷ ಸಿಎ| ಶಾಂತರಾಮ ಶೆಟ್ಟಿ, ಮಂಗಳೂರು ಬಾರ್ ಅಸೋಸಿಯೇಷನ್ ಅಧ್ಯಕ್ಷ ಪೃಥ್ವಿರಾಜ್ ರೈ, ಭಾರತೀಯ ಕಾರ್ಯನಿರತ ಪತ್ರಕರ್ತರ ಸಂಘದ ರಾಷ್ಟ್ರೀಯ ಸಮಿತಿ ಸದಸ್ಯ ಪಿ.ಬಿ.ಹರೀಶ್ ರೈ, ಸಿಎಂ ಅಂತಿಮ ವರ್ಷದ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ತೇರ್ಗಡೆಯಾದ ಮಂದಾರ.ಪಿ.ಶೆಟ್ಟಿ, ಮತ್ತು ದರ್ಶನ್ ಶೆಟ್ಟಿ ಇವರುಗಳನ್ನು ಪ್ರತಿಷ್ಠಾನದ ವತಿಯಿಂದ ಸನ್ಮಾನಿಸಲಾಯಿತು.

ಜಾಗತಿಕ ಬಂಟ ಪ್ರತಿಷ್ಠಾನದ ಪೆÇೀಷಕ ಡಾ| ಬಿ.ಆರ್.ಶೆಟ್ಟಿ, ಮಾಜಿ ಅಧ್ಯಕ್ಷ ಡಾ| ಎಂ.ಶಾಂತರಾಮ ಶೆಟ್ಟಿ, ಉಪಾಧ್ಯಕ್ಷರಾದ ಕುಶಲ್.ಎಸ್.ಹೆಗ್ಡೆ, ಕೆ.ಸಚ್ಚಿದಾನಂದ ಹೆಗ್ಡೆ, ಯೋಜನಾ ನಿರ್ದೇಶಕ ಡಾ| ಬಿ.ಸಂಜೀವ ರೈ , ಖಜಾಂಜಿ ಸಿಎ| ಪಿ.ರಘುಚಂದ್ರ ಶೆಟ್ಟಿ ಉಪಸ್ಥಿತರಿದ್ದರು.

ಪ್ರತಿಷ್ಠಾನದ ಅಧ್ಯಕ್ಷ ಡಾ| ಎ.ಜೆ.ಶೆಟ್ಟಿ ಸ್ವಾಗತಿಸಿದರು. ಪತ್ರಕರ್ತ ಮನೋಹರ್ ಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ಸಿಎ ಸುಧೀರ್ ಕುಮಾರ್ ಶೆಟ್ಟಿ ವಂದಿಸಿದರು.




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here