Friday 2nd, June 2023
canara news

ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷರಾಗಿ ಮಾಲಾಡಿ ಅಜಿತ್ ಕುಮಾರ್ ರೈ ಪುನರಾಯ್ಕೆ

Published On : 08 Nov 2022   |  Reported By : Rons Bantwal


ಮುಂಬಯಿ (ಆರ್‍ಬಿಐ), ನ.07: ಮಂಗಳೂರು (ದಕ್ಷಿಣ ಕನ್ನಡ), ಉಡುಪಿ, ಕಾಸರಗೋಡು ಹಾಗೂ ಜಗತ್ತಿನಾಧ್ಯಂತ ಸದಸ್ಯರನ್ನೊಳಗೊಂಡ ಬಂಟರ ಯಾನೆ ನಾಡವರ ಮಾತೃ ಸಂಘದ 2022-2025ರ ಸಾಲಿಗೆ ಪದಾಧಿಕಾರಿಗಳ ಆಯ್ಕೆಪ್ರಕ್ರಿಯೆ ನಡೆದಿಗಿದ್ದು ಅಧ್ಯಕ್ಷರಾಗಿ ಮಾಲಾಡಿ ಅಜಿತ್ ಕುಮಾರ್ ರೈ ಕೊಡಿಯಾಲ್‍ಗುತ್ತು ಅವಿರೋಧವಾಗಿ ಪುನರಾಯ್ಕೆ ಗೊಂಡಿರುವರು.

ಬಂಟರ ಮಾತೃ ಸಂಘಕ್ಕೆ ಸತತವಾಗಿ ನಾಲ್ಕನೇ ಬಾರಿಗೆ ಅಜಿತ್ ಕುಮಾರ್ ರೈ ಅಧ್ಯಕ್ಷರಾಗಿ ಆಯ್ಕೆಗೊಂಡಿರುತ್ತಾರೆ.

ಮುಂದಿನ ದಿನಗಳಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘದ ಮಹತ್ವಾಕಾಂಕ್ಷೆ ಯೋಜನೆಯಾದ ಶತಮಾನೋತ್ಸವ ಕಟ್ಟಡ ಸಂಕೀರ್ಣ, ವಿಶ್ವವ್ಯಾಪಿ ಸಮಾಜ ಭಾಂಧವರನ್ನು ಒಂದೇ ಸೂರಿನಡಿ ತರ ಬಯಸುವ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯನ್ನು ಕೈ ಗೊಳ್ಳುವುದು ಹಾಗೂ ಸಮಾಜದ ಸವೋತೊಮುಖ ಅಭಿವೃದ್ದಿಗಾಗಿ ಶ್ರಮಿಸುವುದಾಗಿ ಅಜಿತ್ ಕುಮಾರ್ ರೈ ನುಡಿದರು.

ಮುಖ್ಯ ಚುನಾವಣಾಧಿಕಾರಿ ವಕೀಲರಾದ ಬಿ ಗುರುಪ್ರಸಾದ್ ಶೆಟ್ಟಿ ಅವರು ಅಧ್ಯಕ್ಷರ ಅವಿರೋಧ ಆಯ್ಕೆಯನ್ನು ಘೋಷಿಸಿದರು. ಉಪ ಚುನಾವಣಾಧಿಕಾರಿ ವಕೀಲರಾದ ಬಿಪಿನ್ ರೈ ಹಾಗೂ ಚುನಾವಣಾಧಿಕಾರಿ ದಿವಾಕರ ಸಾಮಾನಿ ಚೇಳಾರ್ ಗುತ್ತು ಉಪಸ್ಥಿತರಿದ್ದರು.

 

 
More News

ಕಂಚಿಲಕಟ್ಟೆಯನ್ನು ಬಂಗಾರದ ಕಟ್ಟೆಯಾಗಿಸೋಣ:ಕೊಂಡೆವೂರು ಶ್ರೀಗಳು
ಕಂಚಿಲಕಟ್ಟೆಯನ್ನು ಬಂಗಾರದ ಕಟ್ಟೆಯಾಗಿಸೋಣ:ಕೊಂಡೆವೂರು ಶ್ರೀಗಳು
ಅಶ್ವಿತಾ ಶೆಟ್ಟಿ ಅವರ ಚೊಚ್ಚಲ ಕಥಾ ಸಂಕಲನ ಮರ್ಸಿಡಿಸ್ ಬೆಂಜ್ ಬಿಡುಗಡೆ
ಅಶ್ವಿತಾ ಶೆಟ್ಟಿ ಅವರ ಚೊಚ್ಚಲ ಕಥಾ ಸಂಕಲನ ಮರ್ಸಿಡಿಸ್ ಬೆಂಜ್ ಬಿಡುಗಡೆ
ದಾದ್ರಾ ನಗರ ಹವೇಲಿ ನಗರದ ಸಿಲ್ವಾಸ ಪಾಲಿಕೆಯ ಮೇಯರ್ ಆಗಿ ರಜನಿ ಜಿ.ಶೆಟ್ಟಿ ಆಯ್ಕೆ
ದಾದ್ರಾ ನಗರ ಹವೇಲಿ ನಗರದ ಸಿಲ್ವಾಸ ಪಾಲಿಕೆಯ ಮೇಯರ್ ಆಗಿ ರಜನಿ ಜಿ.ಶೆಟ್ಟಿ ಆಯ್ಕೆ

Comment Here